This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics News

ಬೀಳಗಿ ಹಾಗೂ ಬಾದಾಮಿ ವಿಧಾನಸಭಾ ಕ್ಷೇತ್ರಕ್ಕೆ ನೀರಾವರಿ

ಕೆರೂರು ಏತನೀರಾವರಿ ಯೋಜನೆಗೆ ಸಚಿವ ಸಂಪುಟ ಸಭೆ ಅಸ್ತು

ನಿಮ್ಮ ಸುದ್ದಿ ಬಾಗಲಕೋಟೆ

ಜಿಲ್ಲೆಯ ಬಾದಾಮಿ ಮತ್ತು ಬೀಳಗಿ ತಾಲೂಕಿನ 16 ಸಾವಿರ ಹೆಕ್ಟೇರ್ ನೀರಾವರಿ ವಂಚಿತ ಪ್ರದೇಶಕ್ಕೆ ಆಲಮಟ್ಟಿ ಜಲಾಶಯದ ಹಿನ್ನೀರಿನಿಂದ ನೀರು ತುಂಬಿಸುವ ಕೆರೂರು ಏತ ನೀರಾವರಿ ಯೋಜನೆಗೆ ಸಚಿವ ಸಂಪುಟ ಸಭೆ
ಅನುಮೋದನೆ ನೀಡಿದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವರಾದ ಮುರುಗೇಶ ನಿರಾಣಿ ತಿಳಿಸಿದ್ದಾರೆ.

ಸೋಮವಾರ ಸಿಎಂ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಾದಾಮಿ ಮತ್ತು ಬಿಳಗಿ ವಿಧಾನಸಭಾ ಮತಕ್ಷೇತ್ರದ ಸುಮಾರು 16 ಕ್ಷೇತ್ರದ ಹೆಕ್ಟೇರ್ ನೀರಾವರಿ ಪ್ರದೇಶಕ್ಕೆ 525 ಕೋಟಿ ರೂ. ವೆಚ್ಚದಲ್ಲಿ ನೀರಾವರಿ ಸೌಲಭ್ಯ ಒದಗಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದರು.

ಆಲಮಟ್ಟಿ ಜಲಾಶಯದ ಹಿನ್ನೀರಿನಿಂದ 2 ಟಿಎಂಸಿ ನೀರು ಬಳಸಿಕೊಂಡು ಕೆರೂರು ಏತ ನೀರಾವರಿ ಯೋಜನೆ ಮೂಲಕ ನೀರಾವರಿ ಸೌಲಭ್ಯ ಒದಗಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

2019-20ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆಗಾಗಿ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಕೆರೂರು ಏತ ನೀರಾವರಿ ಯೋಜನೆಗೆ 300 ಕೋಟಿ ರೂ. ಅನುದಾನವನ್ನು ಘೋಷಣೆ ಮಾಡಿದ್ದರು.

ಇದರಲ್ಲಿ ಮೊದಲ ಹಂತವಾಗಿ ಮುಖ್ಯ ಕಾಮಗಾರಿಗೆ 310 ಕೋಟಿ ರೂ, ಪಶ್ಚಿಮ ಮುಖ್ಯ ಕಾಲುವೆ ನಿರ್ಮಾಣಕ್ಕೆ 110 ಕೋಟಿ ರೂ, ಪಶ್ಚಿಮ ಮುಖ್ಯ ಕಾಲುವೆ ನಿರ್ಮಾಣಕ್ಕೆ 105 ಕೋಟಿ ರೂ ಸೇರಿದಂತೆ ಒಟ್ಟು 525 ಕೋಟಿ ರೂ. ಯೋಜನೆ ಇದಾಗಿದೆ.

ಈ ಯೋಜನೆಯನ್ನು ಮೂರು ಹಂತದಲ್ಲಿ ಅಂದರೆ ಮೊದಲ ಹಂತದಲ್ಲಿ 310 ಕೋಟಿ, 2ನೇ ಹಂತದಲ್ಲಿ 110 ಕೋಟಿ, ಮತ್ತು 3ನೇ ಹಂತದಲ್ಲಿ 105 ಕೋಟಿ ರೂ. ಕೈಗೆತ್ತಿಕೊಳ್ಳಲಾಗುತ್ತದೆ.

ಕೃಷ್ಣ ಮೇಲ್ದಂಡೆ ಯೋಜನೆ ಹಂತ 3ರಡಿ ಹೆರಕಲ್ ಏತ ನೀರಾವರಿ ಉಪಯೋಜನೆಯಡಿ ಬಿಳಗಿ ತಾಲೂಕಿನ 12,100 ಹೆಕ್ಟೇರ್ ಹಾಗೂ ಮಲಪ್ರಭಾ ಎಡೆದಂಡೆ ಕಾಲುವೆ ಹಾಗೂ ಘಟಪ್ರಭಾ ಬಲದಂಡೆ ಕಾಲುವೆಯ ಮಧ್ಯಭಾಗದಲ್ಲಿರುವ ಎತ್ತರ ಪ್ರದೇಶದಲ್ಲಿರುವ ಬಾದಾಮಿ ತಾಲೂಕಿನ ಅಚ್ಚುಕಟ್ಟು ಕ್ಷೇತ್ರ ಒಳಗೊಂಡಂತೆ 16 ಸಾವಿರ ಹೆಕ್ಟರ್ ಪ್ರದೇಶಕ್ಕೆ ಕೆರೂರು ನೀರಾವರಿ ಸೌಲಭ್ಯ ಕಲ್ಪಿಸುವ ಅಗತ್ಯವಿದೆ ಎಂದು ಕೃಷ್ಣ ಭಾಗ್ಯ ಜಲ ನಿಗಮದಿಂದ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಇದೀಗ ಸಚಿವ ಸಂಪುಟ ಸಭೆ ಈ ಯೋಜನೆಗೆ ಹಸಿರು ನಿಶಾನೆ ತೋರಿರುವುದು ಹಲವು ವರ್ಷಗಳ ಯೋಜನೆಗೆ ಕೊನೆಗೂ ಮುಕ್ತಿ ದೊರೆತಂತಾಗಿದೆ.

ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಯೋಜನೆಗೆ ಕೊನೆಗೂ ಸರ್ಕಾರ ಹಸಿರು ನಿಶಾನೆ ತೋರಿರುವುದು ಈ ಭಾಗದ ಜನತೆಯಲ್ಲಿ ಮಂದಹಾಸ ಮೂಡುವಂತೆ ಮಾಡಿದೆ ಎಂದು ತಿಳಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಬಾದಾಮಿ ಮತ್ತು ಬೀಳಗಿ ಕ್ಷೇತ್ರಕ್ಕೆ ಆಲಮಟ್ಟಿ ಜಲಾಶಯದ ಹಿನ್ನೀರಿನಿಂದ ನೀರಾವರಿಗೊಳಪಡಿಸುವ ಕೆರೂರು ಏತ ನೀರಾವರಿ ಯೋಜನೆಯ ಸರ್ಕಾರ ಅನುಮೋದನೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಾವುಗಳು ಅವಿರತ ಪ್ರಯತ್ನ ನಡೆಸಿರುವುದಾಗಿ ತಿಳಿಸಿದ್ದಾರೆ.

";