This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

State News

ಅಧಿಕೃತ ಪತ್ರಕರ್ತರಿಗೆ ಕ್ಯೂ ಆರ್ ಕೋಡ್ ಹೊಂದಿದ ಐಡಿ ಕಾರ್ಡ ವಿತರಣೆ

ವಾಹನಗಳ ಮೇಲೆ ಪ್ರೇಸ್ ಪದ ಬಳಸುವಂತಿಲ್ಲ : ಡಿಸಿ ಸುನೀಲ್‍ಕುಮಾರ

ನಿಮ್ಮ ಸುದ್ದಿ ಬಾಗಲಕೋಟೆ

ಅಧಿಕೃತ ಪತ್ರಕರ್ತರು ಸೇರಿದಂತೆ ಇನ್ನು ಮುಂದೆ ಯಾವುದೇ ವಾಹನಗಳ ಮೇಲೆ ಪ್ರಸ್ ಪದ ಬಳಸುವಂತಿಲ್ಲವೆಂದು ಜಿಲ್ಲಾಧಿಕಾರಿ ಪಿ.ಸುನೀಲ್‍ಕುಮಾರ ತಿಳಿಸಿದರು.

ನವನಗರದ ಪತ್ರಿಕಾಭವನದಲ್ಲಿಂದು ಜರುಗಿದ ಪತ್ರಕರ್ತರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಈ ವಿಷಯ ತಿಳಿಸಿದ ಅವರು ಜಿಲ್ಲೆಯಲ್ಲಿರುವ ಅಧಿಕೃತ ಪತ್ರಕರ್ತರಿಗೆ ಕ್ಯೂಆರ್ ಕೋಡ್ ಹೊಂದಿರುವ ಗುರುತಿನ ಚೀಟಿಯನ್ನು ನೀಡಲಾಗುತ್ತಿದ್ದು, ಈ ಗುರುತಿನ ಚೀಟಿ ಹೊರತುಪಡಿಸಿ ವಾಹನಗಳ ಮೇಲೆ ಪ್ರೇಸ್ ಪದ ಬಳಕೆ ಮಾಡುವದನ್ನು ಜಿಲ್ಲೆಯಲ್ಲಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪತ್ರಿಕೆಗಳನ್ನು ಸಾಗಿಸುವ ವಾಹನಗಳಿಗೆ ಪತ್ರಿಕೆ ಸಾಗಿಸುವ ವಾಹನ ಎಂದು ಬರೆಯಿಸಬೇಕು. ಈ ಕಾರ್ಯ ನವೆಂಬರ 1 ರಿಂದ ಜಾರಿಗೆ ಬರಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಅನಧಿಕೃತ ಪತ್ರಕರ್ತರಿಂದ ಅಧಿಕೃತ ಪತ್ರಕರ್ತರಿಗೆ ಆಗುವ ತೊಂದರೆ, ಅಧಿಕಾರಿಗಳಿಗೆ ಆಗುತ್ತಿರುವ ತೊಂದರೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಪತ್ರಕರ್ತರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಅಧಿಕೃತ ಪತ್ರಕರ್ತರಿರುವದನ್ನು ಪರಿಶೀಲಿಸಿ ಶಿಫಾರಸ್ಸು ಪತ್ರದೊಂದಿಗೆ ವಾರ್ತಾ ಇಲಾಖೆಯ ಮೂಲಕ ಜಿಲ್ಲಾಡಳಿತಕ್ಕೆ ಪಟ್ಟಿಯನ್ನು ಸಲ್ಲಿಸಿದಲ್ಲಿ ಅಂತವರಿಗೆ ಮಾತ್ರ ಕ್ಯೂಆರ್ ಕೋಡ್ ಹೊಂದಿರುವ ಗುರುತಿನ ಚೀಟಿ ನೀಡಲಾಗುತ್ತದೆ ಎಂದು ತಿಳಿಸಿದರು.

 

ಪತ್ರಕರ್ತರಿಗೆ ನಿಗದಿತ ಸಮಯದಲ್ಲಿ ಜಿಲ್ಲಾಡಳಿತದಿಂದ ಮಾಹಿತಿ ನೀಡಲು ಕ್ರಮವಹಿಸಲಾಗುತ್ತಿದೆ. 3 ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಿದ್ದು, ಅಭಿವೃದ್ದಿ ಹಾಗೂ ಜನರ ಸೇವೆಗೆ ಆದ್ಯತೆ ನೀಡಾಗುತ್ತದೆ. ಈ ನಿಲ್ಲಿನಲ್ಲಿ ಪ್ರಾಮಾಣಿಕ ಕೆಲಸ ಮಾಡಲಾಗುವುದು. ಜಿಲ್ಲೆಯಲ್ಲಿ ಅನೇಕ ಅಭಿವೃದ್ದಿ ಕಾರ್ಯಗಳಾಗಿವೆ. ಇನ್ನು ಆಗಬೇಕಿರುವ ಕೆಲಸಗಳಿಗೆ ಹೆಚ್ಚಿನ ಗಮನ ಹರಿಸಲಾಗುವುದು. ಜಿಲ್ಲೆಯ ಭೂಮಿ ವಿಭಾಗದಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದುಕೊಂಡಿದೆ. ಪ್ರತಿ ತಾಲೂಕಿನಲ್ಲಿರುವ ಕೋರ್ಟ ಪ್ರಕರಣಗಳ ಸೇರಿದಂತೆ ಇತರೆ ಕಡತಗಳ ವಿಲೇವಾರಿಗೆ ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಜಯಪ್ರಕಾಶ ಮಾತನಾಡಿ ವಾಹನಗಳ ಮೇಲೆ ಇರುವ ಪ್ರೆಸ್‍ ಪದವನ್ನು ಮೊದಲು ಅಧಿಕೃತ ಪತ್ರಕರ್ತರು ಸ್ವಯಂ ಪ್ರೇರಿತವಾಗಿ ತೆಗೆದುಹಾಕಬೇಕು. ನಂತರದಲ್ಲಿ ಉಳಿದ ವಾಹನಗಳ ಮೇಲೆ ಇರುವ ಪ್ರೇಸ್ ಪದ ಬಳಕೆಯಾಗದಂತೆ ಪೊಲೀಸ್ ಇಲಾಖೆ ಕ್ರಮವಹಿಸಲಾಗುತ್ತದೆ. ಪತ್ರಕರ್ತರ ಸಮ್ಮುಖದಲ್ಲಿ ನಿರ್ಧರಿಸಿದಂತೆ ಎಲ್ಲರೂ ಪಾಲನೆ ಮಾಡಬೇಕು ಎಂದರು.

ಸಂವಾದ ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ಸುಳ್ಳೊಳ್ಳಿ, ವಾರ್ತಾ ಸಹಾಯಕರಾದ ಕಸ್ತೂರಿ ಪಾಟೀಲ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ ದಲಭಂಜನ, ಪ್ರಧಾನ ಕಾರ್ಯದರ್ಶಿ ಶಂಕರ ಕಲ್ಯಾಣಿ, ರಾಜ್ಯ ಕಾರ್ಯಕಾರಣಿ ಸಮಿತಿಯ ಸದಸ್ಯ ಮಹೇಶ ಅಂಗಡಿ, ಹಿರಿಯ ಪತ್ರಕರ್ತರಾದ ರಾಮ ಮನಗೂಳಿ, ಈಶ್ವರ ಶೆಟ್ಟರ, ತಾಲೂಕಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

Nimma Suddi
";