This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Entertainment NewsInternational NewsNational News

ಅಯ್ಯರ್​ಗೆ ಮತ್ತೆ ಗಾಯ; ವಿಶ್ವಕಪ್​ಗೂ ಮುನ್ನ ಭಾರತಕ್ಕೆ ಆತಂಕ

ಅಯ್ಯರ್​ಗೆ ಮತ್ತೆ ಗಾಯ; ವಿಶ್ವಕಪ್​ಗೂ ಮುನ್ನ ಭಾರತಕ್ಕೆ ಆತಂಕ

ಕೊಲಂಬೊ: ಹಲವು ತಿಂಗಳ ಬಳಿಕ ಬೆನ್ನು ನೋವಿನ ಸಮಸ್ಯೆಯಿಂದ ಚೇತರಿಕೆ ಕಂಡು ಏಷ್ಯಾಕಪ್(Asia Cup 2023)​ ಮೂಲಕ ಭಾರತ ತಂಡಕ್ಕೆ ಕಮ್​ಬ್ಯಾಕ್​ ಮಾಡಿದ್ದ ಟೀಮ್​ ಇಂಡಿಯಾದ(Team India) ಮಧ್ಯಮ ಕ್ರಮಾಂಕದ ಬ್ಯಾಟರ್​ ಶ್ರೇಯಸ್​ ಅಯ್ಯರ್​ಗೆ(Shreyas Iyer) ಮತ್ತೆ ಗಾಯದ ಸಮಸ್ಯೆ(suffering back spasms) ಕಂಡುಬಂದಿದೆ. ಹೀಗಾಗಿ ಅವರು ಪಾಕಿಸ್ತಾನ ವಿರುದ್ಧ ನಡೆಯುತ್ತಿರುವ ಸೂಪರ್​-4 ಪಂದ್ಯದಿಂದ ಹೊರಗುಳಿದಿದ್ದಾರೆ. ಅಯ್ಯರ್​ಗೆ ಮತ್ತೆ ಬೆನ್ನು ನೋವು ಕಾಣಿಸಿಕೊಂಡಿರುವುದು ಭಾರತಕ್ಕೆ ದೊಡ್ಡ ಆತಂಕ ಉಂಟುಮಾಡಿದೆ.

ಶ್ರೇಯಸ್ ಅಯ್ಯರ್ ಅವರು ಆಸ್ಟ್ರೇಲಿಯಾ ವಿರುದ್ಧದ ತವರಿನ ಟೆಸ್ಟ್​ ಸರಣಿಯಲ್ಲಿ ಗಾಯಗೊಂಡು ತಂಡದಿಂದ ಹೊರಗುಳಿದಿದ್ದರು. ಇದಾದ ಬಳಿಕ ಅವರು ಐಪಿಎಲ್​ನಿಂದಲೂ ದೂರ ಉಳಿದಿದ್ದರು. ಬಳಿಕ ಬೆಂಗಳೂರಿನ ರಾಷ್ಟ್ರೀಯ ಅಕಾಡೆಮಿಯಲ್ಲಿ ಪುನಶ್ಚೇತನಕ್ಕೆ ಒಳಗಾಗಿ ಗುಣಮುಖರಾಗಿದ್ದರು. ಹೀಗಾಗಿ ಅವರನ್ನು ಏಷ್ಯಾ ಕಪ್​ ಜತೆಗೆ ವಿಶ್ವಕಪ್​ ತಂಡದಲ್ಲಿಯೂ ಅವಕಾಶ ನೀಡಲಾಗಿತ್ತು. ಇದೀಗ ಮತ್ತೆ ಬೆನ್ನು ನೋವಿಗೆ ಒಳಗಾಗಿರುವುದು ಆಯ್ಕೆ ಸಮಿತಿಗೆ ಚಿಂತೆಗೀಡು ಮಾಡಿದೆ. ವಿಶ್ವಕಪ್​ ಟೂರ್ನಿಯ ವೇಳೆಯೂ ಅವರಿಗೆ ಬೆನ್ನು ನೋವು ಕಾಣಿಸಿದರೆ ತಂಡಕ್ಕೆ ದೊಡ್ಡ ಹಿನ್ನಡೆಯಾಗಲಿದೆ. ಏಕೆಂದರೆ ಭಾರತ ಮೀಸಲು ಆಟಗಾರನ ಆಯ್ಕೆಯೂ ಮಾಡಿಲ್ಲ.

 

ಮಧ್ಯಮ ಕ್ರಮಾಂಕದ ಬ್ಯಾಟರ್‌ ಇದುವರೆಗೆ ಟೀಮ್ ಇಂಡಿಯಾ ಪರ 10 ಟೆಸ್ಟ್, 44 ಏಕದಿನ ಮತ್ತು 49 ಟಿ20 ಪಂದ್ಯಗಳನ್ನು ಆಡಿದ್ದಾರೆ. 2017ರಲ್ಲಿ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನ್ಯೂಜಿಲೆಂಡ್ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. 50 ಓವರ್‌ಗಳ ಸ್ವರೂಪದಲ್ಲಿ, ಅವರು 46.6 ಸರಾಸರಿಯಲ್ಲಿ 1645 ರನ್ ಗಳಿಸಿದ್ದಾರೆ. ಐಪಿಎಲ್‌ನಲ್ಲಿಯೂ ಉತ್ತಮ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆದಿದ್ದರು.

ಸಂಪೂರ್ಣ ಫಿಟ್​ ಆಗದ ಕಾರಣ ಏಷ್ಯಾಕಪ್​ನ(Asia Cup 2023) ಮೊದಲೆರಡು ಪಂದ್ಯಗಳಿಗೆ ಅಲಭ್ಯರಾಗಿದ್ದ ಕನ್ನಡಿಗ, ಸ್ಟಾರ್​ ಆಟಗಾರ ಕೆ.ಎಲ್​ ರಾಹುಲ್(kl rahul)​ ಅವರು ಅಯ್ಯರ್​ ಬದಲು ಭಾನುವಾರ ಪಾಕಿಸ್ತಾನ ವಿರುದ್ಧದ ಸೂಪರ್​-4 ಪಂದ್ಯದಲ್ಲಿ ಕಣಕ್ಕಿಳಿದರು. 31 ವರ್ಷದ ರಾಹುಲ್ ಮೇ 1ರಂದು ನಡೆದ ಆರ್​ಸಿಬಿ ವಿರುದ್ಧದ ಐಪಿಎಲ್​ ಪಂದ್ಯದ ವೇಳೆ ರಾಹುಲ್ ಅವರು ಸ್ನಾಯು ಸೆಳೆತದ ಗಾಯಕ್ಕೆ ತುತ್ತಾಗಿದ್ದರು. ಗಾಯದ ಪ್ರಮಾಣ ಗಂಭಿರವಾದ ಪರಿಣಾಮ ಅವರಿಗೆ ಲಂಡನ್​ನಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಎನ್​ಸಿಎ ಶಿಬಿರದಲ್ಲಿ ಚೇತರಿಕೆ ಕಂಡು ಇದೀಗ ತಂಡಕ್ಕೆ ಮರಳಿದ್ದಾರೆ.

ವಿಶ್ವಕಪ್​ಗೆ ಭಾರತ ತಂಡ
ರೋಹಿತ್‌ ಶರ್ಮಾ (ನಾಯಕ), ಶುಭಮನ್‌ ಗಿಲ್‌, ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್, ಕೆ.ಎಲ್‌.ರಾಹುಲ್‌, ಹಾರ್ದಿಕ್‌ ಪಾಂಡ್ಯ (ಉಪ ನಾಯಕ), ರವೀಂದ್ರ ಜಡೇಜಾ, ಜಸ್‌ಪ್ರಿತ್‌ ಬುಮ್ರಾ, ಕುಲದೀಪ್‌ ಯಾದವ್‌, ಮೊಹಮ್ಮದ್‌ ಸಿರಾಜ್‌, ಮೊಹಮ್ಮದ್‌ ಶಮಿ, ಇಶಾನ್‌ ಕಿಶನ್‌, ಶಾರ್ದೂಲ್‌ ಠಾಕೂರ್‌, ಅಕ್ಷರ್​ ಪಟೇಲ್‌, ಸೂರ್ಯಕುಮಾರ್‌.

Nimma Suddi
";