This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನ, ಗೌರವ ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ: ಜಗದೀಶ್ ಶೆಟ್ಟರ್

ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನ, ಗೌರವ ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ: ಜಗದೀಶ್ ಶೆಟ್ಟರ್

ಬೆಂಗಳೂರು: ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನ, ಗೌರವ ನೀಡುತ್ತೇವೆ ಎಂಬುದಾಗಿ ಪಕ್ಷದ ಹಿರಿಯರು ಭರವಸೆ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದರು.

ಬಿಜೆಪಿಗೆ ವಾಪಸಾದ ಬೆನ್ನಲ್ಲೇ ಶುಕ್ರವಾರ ಪಕ್ಷದ ರಾಜ್ಯ ಕಚೇರಿಗೆ ಆಗಮಿಸಿದ ಅವರನ್ನು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ವಿ.ಸುನೀಲ್‌ಕುಮಾ‌ರ್, ಪ್ರೀತಂಗೌಡ, ವಿಧಾನಪರಿಷತ್ತಿನ ಪ್ರತಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಮೊದಲಾದವರು ಸ್ವಾಗತಿಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಶೆಟ್ಟರ್, ಬಿಜೆಪಿ ಕಳೆದ ಲೋಕಸಭಾ ಚುನಾವಣೆಯಲ್ಲಿ 25 ಸ್ಥಾನಗಳನ್ನು ಗೆದ್ದಿದ್ದು, ಅದಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲು ನನ್ನ ಪ್ರಯತ್ನ ಹಾಗೂ ಅಳಿಲು ಸೇವೆ ಮಾಡುವೆ. ಇಡೀ ರಾಜ್ಯದಲ್ಲಿ ಪ್ರವಾಸ ಮಾಡುವೆ. ಪಕ್ಷದ ಸೂಚನೆಯಂತೆ ಸಂಘಟನಾತ್ಮಕ ಕಾರ್ಯದಲ್ಲಿ ತೊಡಗಿಸಿಕೊಳ್ಳುವೆ. ಖುಷಿಯಿಂದ ವಾಪಸ್ ಬಂದಿದ್ದೇನೆ.ವಿಶ್ವಾಸಕ್ಕೆತೆಗೆದುಕೊಂಡು ಪಕ್ಷ ಬಲಪಡಿಸುವ ಕೆಲಸ ಮಾಡುತ್ತೇನೆ ಎಂದರು.

ಕಾರ್ಯಕರ್ತರ ಆಶಯ, ಧ್ವನಿ, ರಾಜ್ಯ, ರಾಷ್ಟ್ರೀಯ ನಾಯಕರ ಕರೆಗೆ ಸ್ಪಂದಿಸಿ ಬಿಜೆಪಿಗೆ ಮರಳಿದ್ದೇನೆ. ನೀವು ಹಿರಿಯ ನಾಯಕರು, ನಿಮಗೆ ಬಿಜೆಪಿಯಲ್ಲಿ ಸೂಕ್ತ ಸ್ಥಾನಮಾನ, ಗೌರವ ನೀಡುತ್ತೇವೆ ಎಂದು ಪಕ್ಷದ ಹಿರಿಯರು ತಿಳಿಸಿದ್ದು, ಇದು ನಮ್ಮ ಮನೆ. ನಾವು ಕಟ್ಟಿ ಬೆಳೆಸಿದ ಮನೆ. ನಮ್ಮ ಕುಟುಂಬ ಬಿಜೆಪಿ ಜೊತೆ ಆತ್ಮೀಯತೆ ಹೊಂದಿದೆ ಎಂದು ವಿವರಿಸಿದರು.

";