This is the title of the web page
This is the title of the web page

Live Stream

May 2025
S M T W T F S
 123
45678910
11121314151617
18192021222324
25262728293031

| Latest Version 9.4.1 |

Education News

ಜಗಜೀವನರಾಂ, ಅಂಬೇಡ್ಕರ ಜಯಂತಿ ಸರಳ ಆಚರಣೆಗೆ ನಿರ್ಧಾರ

ನಿಮ್ಮ ಸುದ್ದಿ ಬಾಗಲಕೋಟೆ

ಕೋವಿಡ್-19 ಹಿನ್ನಲೆಯಲ್ಲಿ ಏಪ್ರೀಲ್ 5 ರಂದು ಜರುಗಲಿರುವ ಡಾ.ಬಾಬು ಜಗಜೀವನರಾಂ ಅವರ 114ನೇ ಜಯಂತಿ ಹಾಗೂ ಏಪ್ರೀಲ್ 14 ರಂದು ಜರುಗಲಿರುವ ಡಾ.ಬಿ.ಆರ್.ಅಂಬೇಡ್ಕರ ಅವರ 130ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಹಾಗೂ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು.

ಜಿಲ್ಲಾ ಪಂಚಾಯತ ಸಭಾಭವನದಲ್ಲಿಂದು ಜಗಜೀವನರಾಂ ಮತ್ತು ಅಂಬೇಡ್ಕರ ಅವರ ಜಯಂತಿ ಆಚರಣೆ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಈ ವರ್ಷವೂ ಸಹ ಕೋವಿಡ್ 2ನೇ ಅಲೆಯಿಂದ ಪ್ರಕರಣಗಳ ಸಂಖ್ಯೆ ಹೆಚ್ಚಾಗಿ ಕಂಡುಬರುತ್ತಿದ್ದು, ಈ ಹಿನ್ನಲೆಯಲ್ಲಿ ಸರಕಾರದ ಮಾರ್ಗ ಸೂಚಿಯನ್ವಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಸಮೂದಾಯದವರು ಸೀಮಿತವಾಗಿ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸಭೆಯಲ್ಲಿ ಕೋರಿದರು.

ಜಿಲ್ಲಾ ಪಂಚಾಯತಿಯ ನೂತನ ಸಭಾಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದೆಂದು ತಿಳಿಸಿದ ಜಿಲ್ಲಾಧಿಕಾರಿಗಳು ಆಯಾ ದಿನದಂದು ಜರುಗಲಿರುವ ಜಗಜೀವನರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರವರ ಕುರಿತು ಉಪನ್ಯಾಸ ನೀಡಲು ಉತ್ತಮ ಉಪನ್ಯಾಸಕರನ್ನು ಆಹ್ವಾನಿಸಲು ತಿಳಿಸಿದರು.

ಅಂಬೇಡ್ಕರ ಜಯಂತಿಯಂದು ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಅವರ ಪುತ್ಥಳಿಗೆ ಮಾಲಾರ್ಪಣೆ ಹಾಗೂ ಪುಷ್ಪ ಅರ್ಪಿಸಿ ನಂತರ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದೆಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಮಾತನಾಡಿ ಕೋವಿಡ್ 2ನೇ ಅಲೇ ಹಿನ್ನಲೆಯಲ್ಲಿ ಮೆರವಣಿಗೆ ಮಾಡುವುದನ್ನು ಸರಕಾರ ನಿಷೇಧಿಸಿದೆ. ಸರಕಾರ ಹೊರಡಿಸಿದ ನಿಯಮಗಳನ್ನು ಪಾಲಿಸುವ ಮೂಲಕ ಅರ್ಥಪೂರ್ಣವಾಗಿ ಜಗಜೀವನರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರವರ ಜಯಂತಿಯನ್ನು ಆಚರಿಸೋಣ ಎಂದರು. ಇದೇ ಸಂದರ್ಭದಲ್ಲಿ ಸಮುದಾಯದ ಮುಖಂಡರು ಹಾಗೂ ಯುವಕರು ತಮ್ಮ ತಮ್ಮ ಅಭಿಪ್ರಾಯ ಮತ್ತು ಸಲಹೆಗಳನ್ನು ನೀಡಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರ ಮಾತನಾಡಿ ಡಾ.ಬಿ.ಆರ್.ಅಂಬೇಡ್ಕರ ಅವರ ಜಯಂತಿ ಅಂಗವಾಗಿ ಸರಕಾರ ಮಾರ್ಚ 14 ರಿಂದ ಏಪ್ರೀಲ್ 14 ವರೆಗೆ ಪರಿವರ್ತನಾ ಮಾಸಾಚರಣೆಗೆ ಸಂಬಂಧಿಸಿದಂತೆ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ನಿರ್ದೇಶನ ನೀಡಿದ್ದು, ಅದರಂತೆ ವಿವಿಧ ವಸತಿ ನಿಲಯಗಳ ಸ್ವಚ್ಚತೆ ಕಾರ್ಯ, ಸಸಿ ನೆಡುವುದು, ವಸತಿ ನಿಲಯ ಆಚರಣದಲ್ಲಿ ಕೈತೋಟ ನಿರ್ಮಾಣ, ಹಸಿಕಸ ಮತ್ತು ಒಣ ಕಸ ಬೇರ್ಪಡಿಸುವ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತಿದೆ. ಇದರ ಜೊತೆಗೆ ರಸಪ್ರಶ್ನೆ ಕಾರ್ಯಕ್ರಮ ಸಹ ವಲಯ, ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ನಡೆಸಲಾಗುತ್ತಿದೆ ಎಂದು ಸಭೆಗೆ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿ ಎಂ.ಗಂಗಪ್ಪ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರಾದ ಸಂಜು ಐಹೊಳ್ಳಿ, ಮುತ್ತಣ್ಣ ಬೆಣ್ಣೂರ, ವಾಯ್.ವಾಯ್.ತಿಮ್ಮಾಪೂರ, ವಾಯ್.ಸಿ.ಕಾಂಬಳೆ, ಸಂತೋಷ ದೊಡಮನಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Nimma Suddi
";