ದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ ಕ್ಷೇತ್ರಗಳಿಂದ ಬಿಜೆಪಿ, ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಗಳಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು.
ಡಾ ಎಸ್ ಜೈಶಂಕರ್ ಮತ್ತು ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕ ಅಥವಾ ಇತರ ರಾಜ್ಯ ಕ್ಷೇತ್ರಗಳಿಂದ ಸ್ಪರ್ಧಿಸಬಹುದು. ಕ್ಷೇತ್ರದ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹುಬ್ಬಳ್ಳಿಯಲ್ಲಿ ಸುದ್ದಿಗಾರರಿಗೆ ಹೇಳಿದರು.
ನಿರ್ಮಲಾ ಸೀತಾರಾಮನ್ ಮತ್ತು ಎಸ್ ಜೈಶಂಕರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದ ಇಬ್ಬರು ವಾಗ್ಮಿ ಮಂತ್ರಿಗಳು. ಅವರು ಸಂಸತ್ತಿನ ಮೇಲ್ಮನೆ, ರಾಜ್ಯಸಭೆಯ ಸದಸ್ಯರು. ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವರಾಗಿದ್ದರೆ, ಎಸ್ ಜೈಶಂಕರ್ ಅವರು ವಿದೇಶಾಂಗ ವ್ಯವಹಾರಗಳ ಖಾತೆಯನ್ನು ಹೊಂದಿದ್ದಾರೆ. ಅವರು ಬಹಳ ಸಮಯದಿಂದ ಸಂಸದರಾಗಿದ್ದಾರೆ. ಆದರೆ ಚುನಾವಣೆಗಳನ್ನು ಎದುರಿಸಿಲ್ಲ. ಈ ವರ್ಷ ಲೋಕಸಭೆ ಚುನಾವಣೆಯಲ್ಲಿ ಪಕ್ಷವು ಇವರನ್ನು ಕಣಕ್ಕಿಳಿಸುವ ಯೋಜನೆಯಲ್ಲಿದೆ ಎಂದು ಜೋಶಿ ಹೇಳಿದ್ದಾರೆ
ಮಾಧ್ಯಮಗಳಲ್ಲಿ ಸುದ್ದಿಯಾಗಿದೆ. ಹೆಚ್ಚು ಕಡಿಮೆ ಅವರು (ನಿರ್ಮಲಾ ಸೀತಾರಾಮನ್ ಮತ್ತು ಜೈಶಂಕರ್) ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಅಂತಿಮವಾಗಿದೆ. ಅವರು ಎಲ್ಲಿಂದ ಸ್ಪರ್ಧಿಸುತ್ತಾರೆ? ಅದು ಕರ್ನಾಟಕ ಅಥವಾ ಬೇರೆ ಯಾವುದಾದರೂ ರಾಜ್ಯವಾಗಿರಬಹುದು ಎಂದು ಇನ್ನೂ ನಿರ್ಧರಿಸಲಾಗಿಲ್ಲ ಎಂದು ವಿವರಿಸಿದರು.