ದೆಹಲಿ: ಕಾಂಗ್ರೆಸ್ ಯಾವಾಗಲೂ ದಲಿತರು, ಹಿಂದುಳಿದವರು, ಬುಡಕಟ್ಟು ಜನಾಂಗದವರ ವಿರುದ್ಧ ಎಂದು ಪ್ರತಿಪಾದಿಸಿದ ಪ್ರಧಾನಿ ನರೇಂದ್ರ ಮೋದಿ ಉದ್ಯೋಗದಲ್ಲಿ ಯಾವುದೇ ರೀತಿಯ ಎಸ್‌ಸಿ, ಎಸ್‌ಟಿ ಮೀಸಲಾತಿಯನ್ನು ಜವಾಹರಲಾಲ್ ನೆಹರು ವಿರೋಧಿಸುತ್ತಿದ್ದರು ಎಂದು ತಿಳಿಸಿದರು.
ರಾಜ್ಯಸಭೆಯಲ್ಲಿ ರಾಷ್ಟ್ರಪತಿಯ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದ ಪ್ರಧಾನಿ ಮೋದಿ, ಒಬಿಸಿಗಳಿಗೆ ಎಂದಿಗೂ ಸಂಪೂರ್ಣ ಮೀಸಲಾತಿ ನೀಡದ ಕಾಂಗ್ರೆಸ್ ಸಾಮಾಜಿಕ ನ್ಯಾಯವನ್ನು ಬೋಧಿಸಬಾರದು ಎಂದು ಹೇಳಿದರು.
ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ಅಧಿಕಾರದ ದುರಾಸೆಯಿಂದ ಪ್ರಜಾಪ್ರಭುತ್ವವನ್ನು ಬಹಿರಂಗವಾಗಿ ಕಾಂಗ್ರೆಸ್ ಕತ್ತು ಹಿಸುಕಿದ್ದು, ರಾತ್ರೋ ರಾತ್ರಿ ಪ್ರಜಾಸತ್ತಾತ್ಮಕವಾಗಿ ರಚಿಸಿರುವ ಸರ್ಕಾರವನ್ನು ಹತ್ತಾರು ಬಾರಿ ವಜಾ ಮಾಡಿದ ಕಾಂಗ್ರೆಸ್ಪತ್ರಿಕೆಗಳ ಮೇಲೆ ದಾಳಿ ಮಾಡಿದ ಕಾಂಗ್ರೆಸ್ ದೇಶದ ಬೀಗ ಹಾಕಲು ಪ್ರಯತ್ನಿಸಿದೆ. ಈಗ ಕಾಂಗ್ರೆಸ್ ದೇಶವನ್ನು ಒಡೆಯಲು ಪ್ರಯತ್ನಿಸುತ್ತಿದೆ ಎಂದರು.
ಒಬಿಸಿಗೆ ಯಾವತ್ತೂ ಸಂಪೂರ್ಣ ಮೀಸಲಾತಿ ನೀಡದ ಕಾಂಗ್ರೆಸ್ ಸಾಮಾನ್ಯ ವರ್ಗದ ಬಡವರಿಗೆ ಮೀಸಲಾತಿ ನೀಡಲಿಲ್ಲ, ಬಾಬಾ ಸಾಹೇಬರನ್ನು ಭಾರತ ರತ್ನಕ್ಕೆ ಅರ್ಹರೆಂದು ಪರಿಗಣಿಸದ ಕಾಂಗ್ರೆಸ್ ತನ್ನ ಕುಟುಂಬಕ್ಕೆ ಮಾತ್ರ ಭಾರತ ರತ್ನ ನೀಡುತ್ತಲೇ ಇದ್ದು, ಸಾಮಾಜಿಕ ನ್ಯಾಯದ ಪಾಠ, ನಾಯಕರಾಗಿ ಯಾವುದೇ ಗ್ಯಾರಂಟಿ ಇಲ್ಲದವರು ಮೋದಿಯವರ ಖಾತರಿಯ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ, ಎಂದು ವಿವರಿಸಿದರು.