ಜಯದೇವ ಆಸ್ಪತ್ರೆಯ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದ ಡಿಸಿಎಂ ಶ್ರೀ ಗೋವಿಂದ ಕಾರಜೋಳ
ನಿಮ್ಮ ಸುದ್ದಿ ಬೆಂಗಳೂರು
ನಗರದಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆಗೆ ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಕಾರಜೋಳ ಅವರು ಭೇಟಿ ನೀಡಿ, ವಿವಿಧ ಕಟ್ಟಡ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಅವರು, ಜಯದೇವ ಆಸ್ಪತ್ರೆಯು ಅತ್ಯುತ್ತಮವಾಗಿದ್ದು, ವಿಖ್ಯಾತಿಯಾಗಿದೆ. ನುರಿತ ತಜ್ಞ ವೈದ್ಯರ ತಂಡ, ತಂತ್ರಜ್ಞರ ತಂಡ, ಅರೆ ವೈದ್ಯಕೀಯ ಸಿಬ್ಬಂದಿಯು ನಿರ್ವಹಿಸುತ್ತಿರುವ ಕಾರ್ಯ ಶ್ಲಾಘನೀಯವಾದುದು.
ಪೂರಕವಾಗಿ ಮತ್ತಷ್ಟು ಸೌಲಭ್ಯವನ್ನು ಒದಗಿಸಲು ವಿವಿಧ ಕಟ್ಟಡ ಕಾಮಗಾರಿಯನ್ನು ಅನುಷ್ಠಾನ ಗೊಳಿಸಲಾಗುತ್ತಿದೆ. ಕಾಮಗಾರಿಗಳು ಅತ್ಯತ್ತಮ ಗುಣಮಟ್ಟದಿಂದ ಕೂಡಿವೆ. ಶೀಘ್ರವಾಗಿ ಪೂರ್ಣಗೊಳ್ಳಲಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಇದರಿಂದ ಮತ್ತಷ್ಟು ಉತ್ತಮವಾದ ಸೇವೆ ದೊರಕಲು ನೆರವಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ ಮತ್ತಿತರರು ಉಪಸ್ಥಿತರಿದ್ದರು.