ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆಯವರು ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲಿಸಿದ್ದು, ಈ ವರದಿಯಲ್ಲಿ ಒಟ್ಟು 13 ಪ್ರತಿಗಳಿವೆ.
ಇನ್ನು ರಾಜ್ಯ ರಾಜಕೀಯದಲ್ಲಿ ಅದರಲ್ಲೂ ಕಾಂಗ್ರೆಸ್ ಪಕ್ಷದಲ್ಲೇ ಒಳ ಬೇಗುದಿ ಸೃಷ್ಟಿಸಿರುವ ಜ್ವಾತಿ ಗಣತಿ ಜ್ವಾಲೆ ಸ್ಫೋಟವಾಗೋ ಲಕ್ಷಣಗಳು ಕಾಣುತ್ತಿವೆ.2013 ರಿಂದ 2018ರವರೆಗಿನ ಸಿದ್ದರಾಮಯ್ಯ ಮೊದಲ ಬಾರಿ ಸಿಎಂ ಆಗಿದ್ದ ಅವಧಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅರ್ಥಾತ್ ಜಾತಿ ಗಣತಿಯನ್ನು ಮಾಡಿಸಲಾಗಿತ್ತು.
ಆದ್ರೆ ಕಾರಣಂತರಗಳಿಂದ ಸರ್ಕಾರ ವರದಿ ಸ್ವೀಕರಿಸಿರಲಿಲ್ಲ. ಈ ಮಧ್ಯೆ ವರದಿ ಸೋರಿಕೆಯಾಗಿದ್ದು ಭಾರಿ ಸದ್ದು ಮಾಡಿತ್ತು. ಇದೀಗ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಿದ್ದಾರೆ. ಅಧಿಕಾರಕ್ಕೆ ಬಂದ್ಮೇಲೆ ಜಾತಿ ಗಣತಿ ವರದಿಯನ್ನ ಸ್ವೀಕಾರ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಅದರಂತೆ ಇದೀಗ ಸಿದ್ದರಾಮಯ್ಯನವರು ಹಲವರ ವಿರೋಧದ ನಡುವೆಯೂ ವರದಿಯನ್ನು ಸ್ವೀಕಾರ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.