ಕಲಬುರಗಿ: ಜೆಡಿಯುನವರು ‘ಇಂಡಿಯಾ’ ಒಕ್ಕೂಟವನ್ನು ಬಿಡುವ ಬಗ್ಗೆ ನಮಗೆ ಯಾವ ಮಾಹಿತಿ ನೀಡಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದರು.
ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿಯಬೇಕು ಎಂಬುದು ನಮ್ಮ ಅಪೇಕ್ಷೆ. ಹೀಗಾಗಿ, ಎಲ್ಲ ಪಕ್ಷಗಳೂ ಒಗ್ಗಟ್ಟಾಗಿರಬೇಕು ಎಂದರು.
ನಾಳೆ (ಭಾನುವಾರ) ಡೆಹ್ರಾಡೂನ್ ನಲ್ಲಿ ಪಕ್ಷದ ಸಭೆ ನಡೆಯಲಿದೆ. ಅದಾದ ಬಳಿಕ ದೆಹಲಿಗೆ ತೆರಳಿ ವಿದ್ಯಮಾನಗಳ ಬಗ್ಗೆ ಮಾಹಿತಿ ಪಡೆಯುವೆ ಎಂದು ಹೇಳಿದರು