This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

National NewsPolitics News

ಜಾರ್ಖಂಡ್ ಹೈಕೋರ್ಟ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 1000 ರೂ. ದಂಡ

ಜಾರ್ಖಂಡ್ ಹೈಕೋರ್ಟ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 1000 ರೂ. ದಂಡ

ರಾಂಚಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾರ್ಖಂಡ್ ಹೈಕೋರ್ಟ್ 1000 ರೂ. ದಂಡ ವಿಧಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಂಡ ವಿಧಿಸಲಾಗಿದೆ.

ಪ್ರತಾಪ್ ಕುಮಾರ್ ಎಂಬ ಬಿಜೆಪಿ ಕಾರ್ಯಕರ್ತ ಚೈಬಾಸಾದ ಕೆಳ ನ್ಯಾಯಾಲಯದಲ್ಲಿ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ್ದು, ಇದನ್ನು ಕೆಳ ನ್ಯಾಯಾಲಯವು ಪರಿಗಣನೆಗೆ ತೆಗೆದುಕೊಂಡಿತ್ತು. ಕಳೆದ ತಿಂಗಳು ಈ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್ ರಾಹುಲ್ ಗಾಂಧಿಗೆ ರಿಲೀಫ್ ನೀಡಿತ್ತು.

ಪ್ರಕರಣದ ವಿಚಾರಣೆ ಇಂದು ನ್ಯಾಯಮೂರ್ತಿ ಅನಿಲ್ ಕುಮಾರ್ ಚೌಧರಿ ಅವರ ಸಮ್ಮುಖದಲ್ಲಿ ನಡೆಯಿತು. ಆದರೆ, ರಾಹುಲ್ ಗಾಂಧಿ ಪರ ವಕೀಲರು ತಮ್ಮ ಪರ ವಾದ ಮಂಡಿಸಲು ಕಾಲಾವಕಾಶ ಕೋರಿದರು. ಇದಕ್ಕೆ ನ್ಯಾಯಾಲಯ 1 ಸಾವಿರ ರೂ. ದಂಡ ವಿಧಿಸಿದೆ.

ರಾಹುಲ್ ಗಾಂಧಿಗೆ ಉತ್ತರ ನೀಡುವಂತೆ ಸೂಚಿಸಲಾಗಿತ್ತು. 2018ರಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂದು ಚೈಬಾಸಾ ನಿವಾಸಿ ಪ್ರತಾಪ್ ಕಟಿಯಾರ್ ಎಂಬವರು ರಾಹುಲ್ ಗಾಂಧಿ ವಿರುದ್ಧ ಸಲ್ಲಿಸಿರುವ ದೂರಿನಲ್ಲಿ ಆರೋಪಿಸಿದರು.

ಪ್ರಕರಣದ ಮುಂದಿನ ವಿಚಾರಣೆ ಬೇಸಿಗೆ ರಜೆಯ ನಂತರ ನಡೆಯಲಿದೆ ಎಂದು ಜಾರ್ಖಂಡ್ ಹೈಕೋರ್ಟ್ ವಕೀಲ ಧೀರಜ್ ಕುಮಾರ್ ಈ ಮಾಹಿತಿ ನೀಡಿದ್ದು, ಚೈಬಾಸಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ತಡೆ ನೀಡಿತ್ತು. ಆ ಕಾಗ್ನಿಜೆನ್ಸ್ ರದ್ದುಗೊಳಿಸುವಂತೆ ರಾಹುಲ್ ಗಾಂಧಿ ಪರವಾಗಿ ಜಾರ್ಖಂಡ್ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

";