This is the title of the web page
This is the title of the web page

Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

Local NewsNational NewsState News

ಪ್ರವಾಸೋದ್ಯಮ ಅಭಿವೃದ್ದಿಯಿಂದ ಉದ್ಯೋಗ ಸೃಷ್ಟಿ : ಗದ್ದಿಗೌಡರ

ಪ್ರವಾಸೋದ್ಯಮ ಅಭಿವೃದ್ದಿಯಿಂದ ಉದ್ಯೋಗ ಸೃಷ್ಟಿ : ಗದ್ದಿಗೌಡರ

ಬಾಗಲಕೋಟೆ:

ಪ್ರವಾಸೋದ್ಯಮ ಉದ್ಯೋಗ ಒದಗಿಸುವ ಒಂದು ಬೃಹತ್ ಕ್ಷೇತ್ರವಾಗಿದ್ದು, ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ದಿಗೆ ಅಧಿಕಾರಿಗಳು, ಜನಪ್ರತಿನಿಧಿಗಳ ಜೊತೆಗೆ ಸಾರ್ವಜನಿಕರು ಸಹ ಕೈ ಜೋಡಿಸುವ ಅಗತ್ಯವಿದೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು.

ವಿಶ್ವ ಪರಂಪರೆ ತಾಣ ಪಟ್ಟದಕಲ್ಲಿನಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಪ್ರವಾಸೋದ್ಯಮ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪಟ್ಟದಕಲ್ಲು ವಿಶ್ವ ಪರಂಪರೆ ಪಟ್ಟಿಯಲ್ಲಿ ಹೆಸರು ಪಡೆದಿದೆ. ಪ್ರವಾಸೋದ್ಯಮ ಬೆಳೆಯದೇ ಆರ್ಥಿಕವಾಗಿ ಅಭಿವೃದ್ದಿ ಹೊಂದಲು ಸಾಧ್ಯವಿಲ್ಲ. ಪ್ರವಾಸೋದ್ಯಮ ಮಹತ್ವದ ಬಗ್ಗೆ ತಿಳಿಯಬೇಕಿದೆ. ಅಂದಾಗ ಮಾತ್ರ ಪ್ರವಾಸೋದ್ಯಮ ಅಭಿವೃದ್ದಿ ಪಡಿಸಲು ಸಾಧ್ಯವಾಗುತ್ತದೆ. ಇದರಿಂದ ಯುವಕರಿಗೆ ಉದ್ಯೋಗ ಅವಕಾಶಗಳು ಸಹ ಹೊರೆಯುತ್ತವೆ ಎಂದರು.

ಜಿಲ್ಲೆಯಲ್ಲಿರುವ ಐತಿಹಾಸಿ ಕ್ಷೇತ್ರಗಳನ್ನು ಅಭಿವೃದ್ದಿ ಪಡಿಸುವ ಮೂಲಕ ಬೇರೆ ಬೇರೆ ದೇಶದವರನ್ನು ನಮ್ಮ ದೇಶಕ್ಕೆ ಸೆಳೆಯುವ ಕೆಲಸವಾಗಬೇಕು. ಅಂದಾಗ ಮಾತ್ರ ಹೆಚ್ಚಿನ ಪ್ರಮಾಣದಲ್ಲಿ ವ್ಯಾಪಾರ ವಹಿವಾಟು ಆಗಲು ಸಾಧ್ಯವಾಗುತ್ತದೆ. ಪ್ರವಾಸಿ ತಾಣಗಳನ್ನು ಸ್ವಚ್ಚವಾಗಿಡಬೇಕು. ಜಿಲ್ಲಾ ಪಂಚಾಯತ ಅವತಿಯಿಂದ ಸ್ವಚ್ಛತಾ ಹಿ ಸೇವಾ ಆಂದೋಲನದ ಮೂಲಕ ಗ್ರಾಮ, ಗ್ರಾಮದಲ್ಲಿರುವ ಶಾಲೆ ಆವರಣ ಸ್ವಚ್ಛಗೊಳಿಸಲಿದ್ದಾರೆ ಎಂದರು.

ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ಮಾತನಾಡಿ ಜಿಲ್ಲೆಯ ಪ್ರವಾಸಿ ತಾಣ ವಿಶ್ವ ಪಾರಂಪರಿಕ ಪಟ್ಟಿಯಲ್ಲಿ ಇರುವುದು ಹೆಮ್ಮೆಯ ಸಂಗತಿ. ಪ್ರವಾಸೋದ್ಯಮ ಅಭಿವೃದ್ದಿ ಪಡಿಸುವ ಮೂಲಕ ದೇಶ, ವಿದೇಶಿ ಪ್ರವಾಸಿಗರನ್ನು ಆಕರ್ಷಿಸಬೇಕು. ಇದರಿಂದ ಜನರ ಆರ್ಥಿಕ ಮಟ್ಟ ಹೆಚ್ಚಾಗುತ್ತದೆ. ಜಿಲ್ಲೆಯ ಪ್ರವಾಸಿ ತಾಣಗಳ ವೀಕ್ಷಣೆಗೆ ಪ್ರವಾಸಿಗರಿಗೆ ಅನುಕೂಲವಾಗುವ ರೀತಿಯಲ್ಲಿ ಡಿಪಿಆರ್ ತಯಾರಿಸಲಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಕಾರ್ಯೋನ್ಮುಕವಾಗಿದೆ ಎಂದರು.

ಜಿ.ಪಂ ಸಿಇಓ ಶಶಿಧರ ಕುರೇರ ಮಾತನಾಡಿ ಗ್ರಾಮ, ಪ್ರವಾಸಿ ತಾಣ ಅಭಿವೃದ್ದಿ ಹೊಂದಬೇಕಾದರೆ ಪರಿಸರ ಚೆನ್ನಾಗಿ ಇರಬೇಕು. ಎಲ್ಲ ರೀತಿಯ ಸೌಲಭ್ಯಗಳು ಹೊಂದಿರಬೇಕು. ಪ್ರತಿಯೊಬ್ಬ ನಾಗರಿಕನು ಸ್ವಚ್ಚತೆ ಬಗ್ಗೆ ಅರಿವು ಮೂಡಿಸಬೇಕು. ಶೌಚಾಲಯ ಸದ್ಬಳಕೆಯಾಗಬೇಕು. ಜಿಲ್ಲೆಯ ತಾಣಗಳಿಗೆ ಪ್ರವಾಸಿಗರು ಆಗಮಿಸಿದಾಗ ನಮ್ಮ ಸಂಸ್ಕೃತಿ, ವ್ಯವಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುವ ರೀತಿಯಲ್ಲಿ ಇರಬೇಕು ಎಂದರು.

ಈ ಸಂದರ್ಭದಲ್ಲಿ ಸ್ವಚ್ಛ ಪರಿಸರಕ್ಕಾಗಿ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಪ್ರಾರಂಭದಲ್ಲಿ ಪ್ರವಾಸಿ ಅಧಿಕಾರಿ ರಾಮಚಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಪಟ್ಟದಕಲ್ಲ ಗ್ರಾ.ಪಂ ಅಧ್ಯಕ್ಷೆ ನೀಲಮ್ಮ ಕಾಲಗಗ್ಗರಿ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಜಿ.ಪಂ ಯೋಜನಾ ನಿರ್ದೇಶಕ ಎನ್.ವಾಯ್.ಬಸರಿಗಿಡದ, ಸಹಾಯಕ ಯೋಜನಾ ನಿರ್ದೇಶಕ ಭೀಮಪ್ಪ ತಳವಾರ, ತಹಶೀಲ್ದಾರ ಜೆ.ಬಿ.ಮಜ್ಜಗಿ, ಬಾದಾಮಿ ಇಓ ತಿರಕಣ್ಣವರ, ಗುಳೇದಗುಡ್ಡದ ಇಓ ಬಡಿಗೇರ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕಾರ್ಯಕ್ರಮದ ನಂತರ ಟ್ರಾವೆಲ್ ಫಾರ್ ಲೈಪ್ ಪ್ಲೆಡ್ಜ್ನಲ್ಲಿ ಸೆಲ್ಪಿ ಪೋಟೋ ತೆಗೆದುಕೊಳ್ಳಲಾಯಿತು.

ಸ್ವಚ್ಛತಾ ಹೀ ಸೇವಾ ಅಭಿಯಾನ 

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯತ ವತಿಯಿಂದ ಹಮ್ಮಿಕೊಂಡ ಸ್ವಚ್ಛತಾ ಹಿ ಸೇವಾ ಅಭಿಯಾನಕ್ಕೆ ಸಂಸದ ಪಿ.ಸಿ.ಗದ್ದಿಗೌಡ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಕೆ.ಎಂ.ಜಾನಕಿ. ಜಿ.ಪಂ ಸಿಇಓ ಶಶಿಧರ ಕುರೇರ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಜಿ.ಪಂ ಯೋಜನಾ ನಿರ್ದೇಶಕ ಎನ್.ವಾಯ್.ಬಸರಿಗಿಡದ ಸೇರಿದಂತೆ ಇತರರು ಇದ್ದರು.

Nimma Suddi
";