ಅಂಚೆ ಇಲಾಖೆಯು ಕಳೆದ ಜುಲೈನಲ್ಲಿ ದೇಶದ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಶಿಕ್ಷಣ ಪಾಸಾದ ನಿರುದ್ಯೋಗಿಗಳಿಗೆ ಭರ್ಜರಿ ಜಾಬ್ ಆಫರ್ ನೀಡಿತ್ತು. ದೇಶದಾದ್ಯಂತ ಭರ್ತಿ ಮಾಡಲು ಒಟ್ಟು 44,228 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳಿಗೆ ಅಧಿಸೂಚಿಸಿ ಅರ್ಜಿ ಆಹ್ವಾನಿಸಿತ್ತು. ಈ ಸದರಿ ಹುದ್ದೆಗಳಿಗೆ ಈಗ ಅರ್ಜಿ ಸಲ್ಲಿಸಲು ಕೊನೆಯ ಒಂದು ದಿನವಷ್ಟೇ ಬಾಕಿ ಇದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆ ಕ್ಷಣದವರೆಗೆ ಕಾಯದೇ ಬೇಗ ಬೇಗ ಅರ್ಜಿ ಸಲ್ಲಿಸಿ. ಕರ್ನಾಟಕದ ಅಭ್ಯರ್ಥಿಗಳಿಗೆ ಅಧಿಕೃತ ಭಾಷೆ ಕನ್ನಡ ಓದಲು, ಬರೆಯಲು, ಮಾತನಾಡಲು ಗೊತ್ತಿರಬೇಕು. ಇತರೆ ಅರ್ಹತೆಗಳನ್ನು ಕೆಳಗಿನಂತೆ ತಿಳಿದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಹುದ್ದೆ ಪದನಾಮಗಳು : ಗ್ರಾಮೀಣ ಡಾಕ್ ಸೇವಕ್, ಬ್ರ್ಯಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್
ದೇಶದಾದ್ಯಂತ ಅಂಚೆ ಕಚೇರಿಗಳಲ್ಲಿ ಭರ್ತಿ ಮಾಡುವ ಒಟ್ಟು ಹುದ್ದೆಗಳ ಸಂಖ್ಯೆ : 44,228
ಕರ್ನಾಟಕದ ಹುದ್ದೆ ಸಂಖ್ಯೆ : 1940
ಶೈಕ್ಷಣಿಕ ಅರ್ಹತೆ : ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಶಿಕ್ಷಣ ಪಾಸ್.
ಅಂಚೆ ಇಲಾಖೆ ಹುದ್ದೆವಾರು ವೇತನ ವಿವರ
ಬ್ರ್ಯಾಂಚ್ ಪೋಸ್ಟ್‌ಮಾಸ್ಟರ್ (ಬಿಪಿಎಂ) : Rs.12,000-29,380 ವರೆಗೆ.
ಸಹಾಯಕ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ (ಎಬಿಪಿಎಂ) : Rs.10,000-24,470.
ಡಾಕ್ ಸೇವಕ್ ಹುದ್ದೆ : Rs.10,000-24,470.
ಅಂಚೆ ಇಲಾಖೆ ಜಿಡಿಎಸ್ ಹುದ್ದೆಗೆ ಇತರೆ ಅರ್ಹತೆಗಳು
ಆಯಾ ರಾಜ್ಯದ ಅಧಿಕೃತ ಭಾಷೆ ಓದಲು, ಬರೆಯಲು, ಮಾತನಾಡಲು ಗೊತ್ತಿರಬೇಕು.
ಬೇಸಿಕ್ ಕಂಪ್ಯೂಟರ್ ಜ್ಞಾನ ಹೊಂದಿದ್ದು ಪ್ರಮಾಣ ಪತ್ರ ಪಡೆದಿರುವವರಿಗೆ ಆಧ್ಯತೆ ನೀಡಲಾಗುವುದು.
ಅಂಚೆ ಇಲಾಖೆ ಹುದ್ದೆಗಳಿಗೆ ವಯಸ್ಸಿನ ಅರ್ಹತೆಗಳು
ಕನಿಷ್ಠ 18 ವರ್ಷ ಆಗಿರುವ, ಆದರೆ ಗರಿಷ್ಠ 40 ವರ್ಷ ವಯಸ್ಸು ದಾಟಿರದ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಎಸ್‌ಸಿ / ಎಸ್‌ಟಿ ಕೆಟಗರಿಯವರಿಗೆ 5 ವರ್ಷ, ಆರ್ಥಿಕವಾಗಿ ಹಿಂದುಳಿದ ಕೆಟಗರಿಯವರಿಗೆ 3 ವರ್ಷ ವಯಸ್ಸಿನ ಸಡಿಲಿಕೆ ನಿಯಮ ಅನ್ವಯವಾಗಲಿದೆ. ಅರ್ಜಿ ಸಲ್ಲಿಸುವ ಕೊನೆ ದಿನಾಂಕ 05-08-2024 ಕ್ಕೆ ಸರಿಯಾಗಿ ಈ ಅರ್ಹತೆಗಳು ಅನ್ವಯವಾಗಲಿವೆ.
ಅಂಚೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಅಭ್ಯರ್ಥಿಗಳನ್ನು ನಿಯಮಾನುಸಾರ ಸ್ವಯಂಚಾಲಿತ ಮೆರಿಟ್ ಪಟ್ಟಿ ತಯಾರು ಮಾಡುವ ಮೂಲಕ, ಶಾರ್ಟ್ ಲಿಸ್ಟ್ ಆದವರಿಗೆ ಮೂಲ ದಾಖಲೆಗಳ ಪರಿಶೀಲನೆ ಕೈಗೊಂಡು, ನೇಮಕಾತಿ ಆಯ್ಕೆಪಟ್ಟಿ ಪ್ರಕಟಿಸಲಾಗುತ್ತದೆ.
ಅಂದಹಾಗೆ ಮೊದಲ ಅರ್ಹತಾ ಪಟ್ಟಿಯಲ್ಲಿರುವ ಅಭ್ಯರ್ಥಿಗಳು ಹುದ್ದೆಗೆ ರಿಪೋರ್ಟ್ ಮಾಡಿಕೊಳ್ಳದ ಸಂದರ್ಭದಲ್ಲಿ, ಮತ್ತೆ 2ನೇ ಅರ್ಹತಾ ಪಟ್ಟಿ ಪ್ರಕಟಿಸಲಾಗುತ್ತದೆ.
ಅಪ್ಲಿಕೇಶನ್ ಸ್ವೀಕಾರ ಆರಂಭಿಕ ದಿನಾಂಕ : 15-08-2024
ಅಪ್ಲಿಕೇಶನ್ ಸ್ವೀಕಾರ ಮಾಡುವ ಕೊನೆ ದಿನಾಂಕ : 05-08-2024
ಅಪ್ಲಿಕೇಶನ್ ಮಾಹಿತಿಗಳನ್ನು ತಿದ್ದುಪಡಿ ಮಾಡಲು ನಿಗದಿತ ದಿನಾಂಕಗಳು್: 06-08-2024 ರಿಂದ 08-08-2024
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಂಚೆ ಇಲಾಖೆಯ ವೆಬ್‌ಸೈಟ್ ವಿಳಾಸ https://indiapostgdsonline.gov.in/ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ಮೊದಲು ರಿಜಿಸ್ಟ್ರೇಷನ್ ಪಡೆದು, ನಂತರ ಅರ್ಜಿ ಸಲ್ಲಿಸಬೇಕು.
ಆನ್‌ಲೈನ್ ಅಪ್ಲಿಕೇಶನ್ ಶುಲ್ಕ ರೂ.100.