This is the title of the web page
This is the title of the web page

Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

State News

ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಿ : ಕಾರಜೋಳ

*ಝೂಮ್ ಮೀಟ್ ಮೂಲಕ ಜಿಲ್ಲಾಡಳಿತದೊಂದಿಗೆ ಸಭೆ

 

ನಿಮ್ಮ ಸುದ್ದಿ ಬಾಗಲಕೋಟೆ

ಕೋವಿಡ್ ನಿಯಂತ್ರಣಕ್ಕೆ ಸರ್ಕಾರದ ಮಾರ್ಗಸೂಚಿಗಳ ಪಾಲನೆಗೆ ಇನ್ನೂ ಹೆಚ್ಚು ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ ಜಿಲ್ಲಾಡಳಿತಕ್ಕೆ ಸೂಚಿಸಿದರು.

ಝೂಮ್ ಮೀಟ್ ಮೂಲಕ ಬಾಗಲಕೋಟೆ ಮತ್ತು ಕಲಬುರಗಿ ಜಿಲ್ಲಾಡಳಿತದೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಕೊರೊನಾ ಸೋಂಕಿತರಿಗೆ ಚಿಕಿತ್ಸೆಗೆ ಪೂರಕವಾಗಿ ಆಕ್ಸಿಜನ್ ಸೇರಿದಂತೆ ಪೂರಕ ಪರಿಕರಗಳ ವ್ಯವಸ್ಥೆ ಮಾಡಿಕೊಳ್ಳಬೇಕು.

ಈ ಕುರಿತು ಸರ್ಕಾರದ ಮಟ್ಟದಲ್ಲಿ ಯಾವುದೇ ಪ್ರಸ್ತಾವನೆಗಳಿದ್ದರೂ ಕೂಡಲೇ ಇತ್ಯರ್ಥ ಪಡಿಸಲಾಗುವುದು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದ್ದರೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಸೂಚಿಸಿದರು.

ಕೊರೊನಾ ತಪಾಸಣಾ ಫಲಿತಾಂಶ ನೀಡಲು ತಡಮಾಡಬಾರದು. ಖಾಸಗಿ ಆಸ್ಪತ್ರೆಗಳ ಸಹಕಾರವನ್ನು ಪಡೆದು ಕೊರೊನಾ ನಿಯಂತ್ರಣಕ್ಕಾಗಿ ಶ್ರಮಿಸಬೇಕು. ಸಹಾಯವಾಣಿ ಕೇಂದ್ರಗಳಲ್ಲಿ ಸಂಪೂರ್ಣ ಮಾಹಿತಿಯನ್ನು ಇಟ್ಟುಕೊಂಡು ಯಾರೇ ಕರೆ ಮಾಡಿದರೂ ಪೂರ್ಣ ಮಾಹಿತಿ ನೀಡಿ ಸಹಕರಿಸುವಂತೆ ಕ್ರಮವಹಿಸಬೇಕು.

ಜಿಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಶೇ.60 ರಿಂದ 70 ರಷ್ಟು ಹಾಸಿಗೆಗಳನ್ನು ಕೋವಿಡ್ ಸೋಂಕಿತರಿಗೆ ಮೀಸಲಿರಿಸಲು ಆದೇಶಿಸುವಂತೆ ತಿಳಿಸಿದರು. ಸರಕಾರ ಆಸ್ಪತ್ರೆಗಳಲ್ಲಿ ಬೆಡ್‍ಗಳ ಸಂಖ್ಯೆಯನ್ನು ಹೆಚ್ಚಿಸಲು ತಿಳಿಸಿದರು.

ರೋಗ ಲಕ್ಷಣಗಳು ಕಂಡು ಬಂದ ಕೂಡಲೇ ಸಮೀಪದ ಆಸ್ಪತ್ರೆಗಳಲ್ಲಿ ತಪಾಸಣೆಗೊಳಪಡಿಸಬೇಕು. ತೀವ್ರವಾಗಿ ಬಳಲುತ್ತಿರುವವರು ಆಸ್ಪತ್ರೆಗೆ ದಾಖಲಾಗಲು ಹಿಂಜರಿಯುವವರಿಗೆ ಮನವರಿಕೆ ಮಾಡಬೇಕು.

ಎಲ್‍ಪಿಜಿ ಸಿಲೆಂಡರ್ ಸಪ್ಲಯರ್ಸ್, ಕ್ಷೌರಿಕರು, ಮಡಿವಾಳರು ಸೇರಿದಂತೆ ಕುಲಕಸುಬು ನಿರ್ವಹಿಸುವವರಿಗೆ ಆದ್ಯತೆಯ ಮೇರೆಗೆ ಲಸಿಕೆಯನ್ನು ಹಾಕಬೇಕು. ಲಸಿಕೆಯ ಬಗ್ಗೆ ಅಪಸ್ಪರ ಮೂಡಿಸಲು ಸಾಮಾಜಿಕ ಜಾಲತಾಣದಲ್ಲಿ ಪೆÇೀಸ್ಟ್ ಮಾಡುವವರಿಗೂ ಕೊರೊನಾ ನಿಯಂತ್ರಣ ಮತ್ತು ನಿರ್ಮೂಲನೆಗೆ ಲಸಿಕೆಯೊಂದೇ ರಾಮಬಾಣವೆಂದು ಮನವರಿಕೆ ಮಾಡುವ ಕಾರ್ಯವಾಗಬೇಕು ಎಂದು ತಿಳಿಸಿದರು.

ನಿಯಂತ್ರಣ ಮಾರ್ಗಸೂಚಿಗಳ ಕುರಿತು ವ್ಯಾಪಕವಾಗಿ ಜಾಗೃತಿ ಮೂಡಿಸಬೇಕು. ನಗರ ಸ್ಥಳೀಯ ಸಂಸ್ಥೆಗಳ ಕಸ ಸಂಗ್ರಹಣ ವಾಹನಗಳಲ್ಲಿ ಧ್ವನಿವರ್ಧಕ ಅಳವಡಿಸಿ ಜಾಗೃತಿ ಮೂಡಿಸಬೇಕು. ಮದುವೆ ಸಮಾರಂಭಗಳನ್ನು ಸರ್ಕಾರದ ಮಾರ್ಗಸೂಚಿಗಳಂತೆ ಕೈಗೊಳ್ಳಬೇಕು.

ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರಿಗೆ ರಜೆ ನೀಡಬಾರದು. ಇಂತಹ ಪರಿಸ್ಥಿತಿಯಲ್ಲಿ ಜನರಿಗೆ ಪ್ರಾಮಾಣಿಕವಾಗಿ ಸೇವೆ ಮಾಡಿ ಜನರ ಆರೋಗ್ಯ ಸುರಕ್ಷತೆಗಾಗಿ ಶ್ರಮಿಸಬೇಕು. ಎಲ್ಲರೂ ಕೊರೊನಾ ನಿಯಂತ್ರಣಕ್ಕಾಗಿ ಶ್ರಮಿಸುತ್ತಿದ್ದೀರಿ, ಜನರ ನಿರೀಕ್ಷೆ ಹೆಚ್ಚಾಗಿದ್ದು, ಸಾಧ್ಯವಾದಷ್ಟು ಮಟ್ಟಿಗೆ ಉತ್ತಮ ಸೇವೆ ಮಾಡಬೇಕು ಎಂದು ಸೂಚಿಸಿದರು.

ಕೂಲಿಕಾರ್ಮಿಕರಿಗೆ ಉದ್ಯೋಗದ ಸೃಷ್ಠಿ ಎದುರಾಗದಂತೆ ಕ್ರಮವಹಿಸಬೇಕು. ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ನೀಡಬೇಕು. ಪೆÇಲೀಸ್ ಅಧಿಕಾರಿಗಳು ತಪಾಸಣಾ ಕಾರ್ಯವನ್ನು ಮತ್ತಷ್ಟು ಚುರುಕುಗೊಳಿಸಿ, ನಿಯಮಾವಳಿಗಳನ್ನು ಜಾರಿಗೊಳಿಸುವ ಮೂಲಕ ಕೊರೊನಾ ನಿಯಂತ್ರಣಕ್ಕೆ ಶ್ರಮಿಸಬೇಕು ಎಂದು ತಿಳಿಸಿದರು.

ಬಿಸಿಲಿನ ತಾಪ ಹೆಚ್ಚಾಗಿದ್ದು, ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು. ಶುದ್ಧ ಕುಡಿಯುವ ನೀರನ್ನು ಪೂರೈಕೆ ಮಾಡಬೇಕು ಎಂದು ಅವರು ಸೂಚಿಸಿದರು.

ಜಿಲ್ಲಾಧಿಕಾರಿಗಳಾದ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅವರು ಕೊರೊನಾ ನಿಯಂತ್ರಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಝೂಮ್ ಮೀಟ್ ಸಭೆಯಲ್ಲಿ ಜಿಲ್ಲಾಪೆÇಲೀಸ್ ವರಿಷ್ಟಾಧಿಕಾರಿ ಲೋಕೇಶ್ ಜಗಲಾಸರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಟಿ.ಭೂಪಾಲನ್, ಅಪರ ಜಿಲ್ಲಾಧಿಕಾರಿ ಮಹದೇವ ಮುರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪ್ರಕಾಶ ಬಿರಾದಾರ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Nimma Suddi
";