ಬೆಂಗಳೂರು: ರಾಜ್ಯ ಸರಕಾರದ ಮೂರನೇ ಬಜೆಟ್ ಹಾಗೂ ಸಿದ್ದರಾಮಯ್ಯನವರ ದಾಖಲೆಯ ೧೬ನೇ ಬಜೆಟ್‌ಗೆ ಕ್ಷಣಗಣನೆ ಆರಂಭವಾಗಿದೆ. ಕೇಂದ್ರ ಸರಕಾರದ ಬಜೆಟ್ ಬಳಿಕ ಇದೀಗ ಇಂದು (ಮಾರ್ಚ್ 07) ಮಂಡನೆಯಾಗಲಿರೋ 2025ನೇ ಸಾಲಿನ ಕರ್ನಾಟಕ ರಾಜ್ಯ ಬಜೆಟ್ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.
ಬೆಳಗ್ಗೆ 9.30ಕ್ಕೆ ಸಚಿವ ಸಂಪುಟ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಡೆಸಲಿದ್ದು, ಸಭೆಯಲ್ಲಿ ಬಜೆಟ್‌ಗೆ ಅನುಮೋದನೆ ಪಡೆದುಕೊಳ್ಳಲಿದ್ದಾರೆ. ಬಳಿಕ ಬೆಳಗ್ಗೆ 10.20ರ ಸುಮಾರಿಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ತಮ್ಮ ಅವಧಿಯ ದಾಖಲೆಯನ್ನೇ ಮುರಿದು 16ನೇ ಬಾರಿಗೆ ಬಜೆಟ್ ಮಂಡಿಸಲು ಮುಂದಾಗಿದ್ದು, ಮಂಡಿನೋವಿನ ಕಾರಣದಿಂದ ನಿಂತು ಬಜೆಟ್ ಮಂಡಿಸುವ ಬದಲು ಕುಳಿತು ಬಜೆಟ್ ಓದುವ ಸಾಧ್ಯತೆ ಇದೆ. ಇನ್ನು ಬಜೆಟ್ ಗಾತ್ರ 4 ಲಕ್ಷ ಕೋಟಿ ಮೀರುವ ಸಾಧ್ಯತೆ ಇದೆ.