This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics News

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ

ಪ್ರಚಾರ ವಾಹನಕ್ಕೆ ಡಿಸಿಎಂ ಕಾರಜೋಳ ಚಾಲನೆ

ನಿಮ್ಮ ಸುದ್ದಿ ಬಾಗಲಕೋಟೆ

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಭಿಯಾನದ ಪ್ರಚಾರ ವಾಹನಕ್ಕೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹಸಿರು ನಿಶಾಣೆ ತೋರುವ ಮೂಲಕ ಜಿಲ್ಲಾಡಳಿತ ಭವನದ ಆವರಣದಲ್ಲಿ ಸೋಮವಾರ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ, ಶಾಸಕ ವೀರಣ್ಣ ಚರಂತಿಮಠ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಜಿ.ಪಂ ಸಿಇಓ ಟಿ.ಭೂಬಾಲನ್, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪ ವಿಭಾಗಾಧಿಕಾರಿ ಎಂ.ಗಂಗಪ್ಪ, ಜಿಲ್ಲಾ ಕೃಷಿ ಜಂಟಿ ನಿರ್ದೇಶಕಿ ಡಾ.ಚೇತನಾ ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.

ರೈತರ ಬೆಳೆಗ ವಿಮಾ ಯೋಜನೆ ಅಭಿಯಾನದಡಿ ಹಮ್ಮಿಕೊಂಡ ಪ್ರಚಾರ ವಾಹನವು ಜಿಲ್ಲೆಯಾದ್ಯಂತ ಎಲ್ಲ ಹಳ್ಳಿಗಳಿಗೆ ಸಂಚರಿಸಿ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಅನುಸೂಚಿತ ಬೆಳೆಗಳಿಗೆ ವಿಮೆಗೆ ಒಳಪಡಿಸುವ ಬಗ್ಗೆ ಮಾಹಿತಿ ನೀಡಲಿದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ ಕೋರಿದರು.

";