This is the title of the web page
This is the title of the web page

Live Stream

October 2024
S M T W T F S
 12345
6789101112
13141516171819
20212223242526
2728293031  

| Latest Version 9.4.1 |

State News

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ

ಮಹಿಳಾ ಸಬಲೀಕರಣಕ್ಕೆ ಸರಕಾರ ಬದ್ದ : ತಿಮ್ಮಾಪೂರ

ನಿಮ್ಮ ಸುದ್ದಿ ಬಾಗಲಕೋಟೆ

ರಾಜ್ಯದಲ್ಲಿ ರಚನೆಗೊಂಡ ನೂತನ ಸರಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ ನೀಡುವ ಮೂಲಕ ಮಹಿಳಾ ಸಬಲೀಕರಣಕ್ಕೆ ಬದ್ದವಾಗಿರುವದನ್ನು ತೋರಿಸಿಕೊಟ್ಟಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ.ತಿಮ್ಮಾಪೂರ ಹೇಳಿದರು.

ನವನಗರದ ಬಸ್ ನಿಲ್ದಾಣದ ಆವರಣದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಾಗಲಕೋಟೆ ವಿಭಾಗದಿಂದ ಹಮ್ಮಿಕೊಂಡ ಶಕ್ತಿ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು ಹಳ್ಳಿಗಳಿಂದ ಬೇರೆ ಬೇರೆ ಕಡೆ ಕೆಲಸಕ್ಕೆ ತೆರಳುವ ಮಹಿಳೆಯರು ತಮ್ಮ ದುಡಿಮೆಯಲ್ಲಿ ಬಂದ ಹಣದಲ್ಲಿ ಬಾಗಶಃ ಬಸ್ ಪ್ರಯಾಣಕ್ಕೆ ವ್ಯಯವಾಗುತ್ತಿದ್ದು, ಮಹಿಳೆಯರಿಗೆ ಇಂತಹ ಪರಿಸ್ಥಿತಿ ಒದಗಿ ಬರಬಾರದೆಂಬ ಉದ್ದೇಶದಿಂದ ಉಚಿತ ಬಸ್ ಪ್ರಯಾಣ ಯೋಜನೆ ಜಾರಿಗೆ ತರಲಾಗಿದೆ ಎಂದರು.

ತಾವು ಅನುಭವಿಸಿದ ಕಷ್ಟದ ಪರಿಸ್ಥಿತಿಯನ್ನು ನೆನದುಕೊಂಡ ಸಚಿವರು ನನ್ನ ಸ್ಥಾನದಲ್ಲಿ ಮಹಿಳೆ ಇದ್ದರೆ ಹೇಗೆ ಎಂಬ ಆತಂಕ ಅಂದೆ ಕಾಡಿತ್ತು. ಇಂತಹ ಸಂದಿಗ್ದ ಪರಿಸ್ಥಿತಿಯನ್ನು ಇನ್ನು ಮುಂದೆ ಮಹಿಳೆಯರಿಗೆ ಅಂತಹ ಪರಿಸ್ಥಿತಿ ಒದಗಿಬರಬಾರದೆಂದು ಸರಕಾರ ಮಹಿಳೆಯರಿಗೆ ನೆರವಾಗಿ ನಿಲ್ಲುವ ಕೆಲಸ ಮಾಡಲಾಗಿದೆ. ದುಡಿಯುವ ಮಹಿಳೆಯರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು. ಸ್ಥಿತಿವಂತ ಮಹಿಳೆಯರು ಪುಣ್ಯ ಕ್ಷೇತ್ರಗಳ ದರ್ಶನಕ್ಕೆ ಅನುಕೂಲ ಮಾಡಲಾಗಿದೆ ಎಂದರು.

ಎಲ್ಲ ಮಹಿಳೆಯರಿಗೆ ಉಚಿತ ಪ್ರಯಾಣದ ಯೋಜನೆಯಿಂದ ಸಾರಿಗ ಸಂಸ್ಥೆಯು ಯಾವುದೇ ಆತಂಕ ಪಡುವ ಅವಶ್ಯಕತೆ ಇಲ್ಲ. ತಮ್ಮ ಸಂಸ್ಥೆಗೆ ಈ ಯೋಜನೆಯಿಂದ ಹೊರೆಯಾಗಲಿರುವ ಎಲ್ಲ ಹಣವನ್ನು ಸರಕಾರದಿಂದಲೇ ಭರಿಸಲಾಗುತ್ತಿದೆ. ಈ ಯೋಜನೆ ಎಷ್ಟೇ ಖರ್ಚು ಬಂದರು ಸರಕಾರ ನಿಭಾಯಿಸಲಿದೆ. ಆದ್ದರಿಂದ ಯಾವುದೇ ಉಹಾ ಪೂಹಗಳಿಗೆ ಕಿವಿಗೊಡಬಾರದು ಎಂದು ಸಚಿವರು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್.ವಾಯ್.ಮೇಟಿ ಮಾತನಾಡಿ ಮಾತು ಕೊಟ್ಟಂತೆ ಸರಕಾರ ನಡೆದಿದ್ದು, ಮುಖ್ಯಮಂತ್ರಿಗಳು ಅಧಿಕಾರ ವಹಿಸಿಕೊಂಡ ತಿಂಗಳೊಳಗಾಗಿ ಪ್ರಥಮವಾಗಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಚಾಲನೆ ನೀಡಿದ್ದಾರೆ. ಇದೊಂದು ಮಹತ್ವದ ಯೋಜನೆಯಾಗಿದ್ದು, ಮಹಿಳೆಯರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಮುಂದಾಗಬೇಕು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಹುಬ್ಬಳ್ಳಿಯ ವಾ.ಕ.ರ.ಸಾ.ಸಂಸ್ಥೆಯ ಮುಖ್ಯ  ವ್ಯವಸ್ಥಾಪಕ ನಾರಾಯಣಪ್ಪ ಕುರಬರ ಅವರು ಶಕ್ತಿ ಯೋಜನೆಯಿಂದ ಮಹಿಳೆಯರು ಅಂತರ್ ರಾಜ್ಯ, ಎಸಿ ಮತ್ತು ಐಶಾರಾಮಿ ಬಸ್‍ಗಳನ್ನು ಹೊರತುಪಡಿಸಿ ಸಾಮಾನ್ಯ ಮತ್ತು ವೇಗದೂತ ಸಾರಿಗೆಗಳಲ್ಲಿ ಮಾತ್ರ ಮಹಿಳೆಯರು ಸಂಚರಿಸಬಹುದಾಗಿದೆ. ಮಹಿಳಾ ಪ್ರಯಾಣಿಕರ ಪೈಕಿ 6 ವರ್ಷದಿಂದ 12 ವರ್ಷದವರೆಗಿನ ಬಾಲಕಿಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಶೇ.50 ರಷ್ಟು ಆಸನಗಳನ್ನು ಪುರುಷರಿಗೆ ಕಾಯ್ದಿರಿಸಲಾಗಿದೆ ಎಂದರು.

ಸೇವಾ ಸಿಂಧು ಮೂಲಕ ಅರ್ಜಿಗಳನ್ನು ಪಡೆದು ಶಕ್ತಿ ಸ್ಮಾರ್ಟ ಕಾರ್ಡ ವಿತರಿಸುವ ತನಕ ಆಧಾರ ಕಾರ್ಡ, ಚುನಾವಣಾ ಆಯೋಗದ ಗುರುತಿನ ಚೀಟಿ, ಚಾಲನಾ ಪರವಾನಗಿ ಪತ್ರ, ವಾಸಸ್ಥಳ ನಮೂದಿಸಿದ ಭಾರತ ಸರಕಾರದ ಇಲಾಖೆ, ಸಾರ್ವಜನಿಕ ವಲಯದ ಉದ್ದಿಮೆ, ಸಂಸ್ಥೆಗಳು ವಿತರಿಸುವ ಗುರುತಿನ ಚೀಟಿ, ವಿಕಲಚೇತನರ, ಹಿರಿಯ ನಾಗರಿಕರ ಗುರುತಿನ ಚೀಟಿಗಳನ್ನು ತೋರಿಸಿ ಶೂನ್ಯ ಟಿಕೇಟ್ ಪಡೆದು ಪ್ರಯಾಣಿಸಬಹುದಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಪೂರ್ವದಲ್ಲಿ ಸಚಿವ ಆರ್.ಬಿ.ತಿಮ್ಮಾಪೂರ ಅವರು ಮಹಿಳೆಯರಿಗೆ ಉಚಿತ ಬಸ್ ಟಿಕೇಟ್ ವಿತರಿಸುವ ಮೂಲಕ ಚಾಲನೆ ನೀಡಿ ಮಹಿಳೆಯರ ಜೊತೆ ಬಸ್‍ನಲ್ಲಿ ನಗರದಲ್ಲಿ ಸಂಚರಿಸಿದರು. ಮಹಿಳಾ ಪ್ರಯಾಣಿಕರಿಗೆ ಸಿಹಿ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯ ಪ್ರಕಾಶ ಹಂಡಿ, ಜಿಲ್ಲಾಧಿಕಾರಿ ಪಿ.ಸುನೀಲ್‍ಕುಮಾರ, ಜಿ.ಪಂ ಸಿಇಓ ಟಿ.ಭೂಬಾಲನ್, ಯುಕೆಪಿ ಮಹಾ ವ್ಯವಸ್ಥಾಪಕ ಭಂವರಸಿಂಗ್ ಮೀನಾ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ವಾ.ಕ.ರ.ಸಾ.ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ನಿತಿನ ಹೆಗಡೆ, ಡಿಟಿಓ ಮೈತ್ರಿ ಸೇರಿದಂತೆ ಇತರರು ಉಪಸ್ಥಿತರಿದ್ದರು

";