ಬೆಂಗಳೂರು
ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಈಗಿನಿಂದಲೇ ತಯಾರಿ ನಡೆಸಿದ್ದು ಪಕ್ಷದ ಅಭ್ಯರ್ಥಿಗಳ ಆಯ್ಕೆಗೆ ವೀಕ್ಷಕರನ್ನು ನೇಮಿಸಿದೆ.
ಪ್ರತಿ ಲೋಕಸಭಾ ಕ್ಷೇತ್ರಕ್ಕೆ ನೇಮಿಸಿದ ವೀಕ್ಷಕರು ಆಯಾ ಕ್ಷೇತ್ರದ ಎಲ್ಲ ಮುಖಂಡರೊಂದಿಗೆ ಸಭೆ ನಡೆಸಿ ಕ್ಷೇತ್ರವಾರು ಸ್ಪರ್ಧಿಸಬಹುದಾದ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿಯನ್ನು ಹೈಕಮಾಂಡ್ ಗೆ ಸಲ್ಲಿಸಲಿದ್ದಾರೆ.
ಈ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ 28 ಸಚಿವರನ್ನು ವೀಕ್ಷಕರನ್ನಾಗಿ ನೇಮಿಸಿ ಆದೇಶಿಸಿದ್ದಾರೆ.
ಬಾಗಲಕೋಟೆಗೆ ಸಚಿವ ಪ್ರಿಯಾಂಕ ಖರ್ಗೆ, ವಿಜಯಪುರಕ್ಕೆ ಸತೀಶ್ ಜಾರಕಿಹೊಳಿ, ಧಾರವಾಡಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್, ಬೆಳಗಾವಿಗೆ ಶಿವರಾಜ್ ತಂಗಡಗಿ ಸೇರಿದಂತೆ ಇತರರು ವೀಕ್ಷಕರಾಗಿ ನೇಮಕಗೊಂಡಿದ್ದಾರೆ.