This is the title of the web page
This is the title of the web page

Live Stream

October 2024
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Education NewsLocal NewsState News

ಪಾರದರ್ಶಕ, ಜನಪರ ಆಡಳಿತಕ್ಕೆ ಲೋಕಾಯುಕ್ತ ಬಿ.ಎಸ್.ಪಾಟೀಲ ಕರೆ

ಪಾರದರ್ಶಕ, ಜನಪರ ಆಡಳಿತಕ್ಕೆ ಲೋಕಾಯುಕ್ತ ಬಿ.ಎಸ್.ಪಾಟೀಲ ಕರೆ

ಬಾಗಲಕೋಟೆ

ಪಾರದರ್ಶಕ ಆಡಳಿತ, ಜನಸಾಮಾನ್ಯರಿಗೆ ಹತ್ತಿರವಾಗಿ ಕೆಲಸ ಮಾಡುವ ಹಾಗೂ ಉತ್ತಮ ಕೆಲಸ ಮಾಡುವವರಿಗೆ ಲೋಕಾಯುಕ್ತ ಇಲಾಖೆ ಬೆನ್ನೆಲುಬಾಗಿ ನಿಲ್ಲಲಿದೆ ಎಂದು ಕರ್ನಾಟಕ ಲೋಕಾಯುಕ್ತ ಬಿ.ಎಸ್.ಪಾಟೀಲ ತಿಳಿಸಿದರು.

ಜಮಖಂಡಿ ತಹಶೀಲ್ದಾರ ಕಚೇರಿಯ ಸಭಾಭವನದಲ್ಲಿ ಸೋಮವಾರ ಜರುಗಿದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಒಳ್ಳೆಯ ಕೆಲಸ ಮಾಡುವವರಿಗೆ ಲೋಕಾಯುಕ್ತ ಬೆನ್ನೆಲುಬಾಗಿ ಕೆಲಸ ಮಾಡಲಿದ್ದು, ತಪ್ಪು ಮಾಡುವವರಿಗೆ ಶಿಕ್ಷೆ ಕೂಡಾ ವಿಧಿಸಲಾಗುತ್ತದೆ. ಅಡಕೆ ಕದ್ದವರಿಗೆ ಹಾಗೂ ಆನೆ ಕದ್ದವರಿಗೆ ಅಂದರೆ ಅವರವರ ತಪ್ಪುಗಳಿಗೆ ತಕ್ಕಂತೆ ಶಿಕ್ಷೆ ನೀಡಲಾಗುತ್ತದೆ ಎಂಬ ಕಟ್ಟುನಿಟ್ಟಿನ ಸಂದೇಶ ಸಹ ನೀಡಿದರು.

ಕಂದಾಯ ಇಲಾಖೆಯ ಸೇವೆಗಳು ತ್ವರಿತಗತಿಯಲ್ಲಿ ಆಗಬೇಕು. ಹೆಚ್ಚಿನ ಜನರಿಗೆ ಸೇವೆ ಒದಗಿಸಲು ಮುಂದಾಗಬೇಕು. ಬರ ಹಾಗೂ ಅತಿವೃಷ್ಟಿ ಸಂದರ್ಭದಲ್ಲಿ ಮನೆ ಬಿದ್ದವರಿಗೆ ಎ, ಬಿ ಮತ್ತು ಸಿ ವರ್ಗಗಳಲ್ಲಿ ಪರಿಹಾರ ಪಡೆಯುವಲ್ಲಿ ತಪ್ಪು ಮಾಹಿತಿ ನೀಡಿದ್ದರೆ ಅಂತವರ ಮೇಲೆ ಇಲಾಖೆ ಸೂಕ್ತ ಕ್ರಮಜರುಗಿಸಲು ತಿಳಿಸಿದ ಲೋಕಾಯುಕ್ತರು ಕಂದಾಯ ಇಲಾಖೆಯ ಸಕಾಲ ಸೇವೆಯಲ್ಲಿ ರಾಜ್ಯಕ್ಕೆ ೪ನೇ ಸ್ಥಾನ ಹಾಗೂ ಭೂಮಿ ಸೇವೆಯಲ್ಲಿ ೩ನೇ ಸ್ಥಾನ ಪಡೆದಿರುವುದನ್ನು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ಜನರ ಸೇವೆಗಳು ತ್ವರಿತಗತಿಯಲ್ಲಿ ನಡೆಯಬೇಕು. ಸರ್ವೆಗೆ ಸಂಬಂಧಿಸಿದಂತೆ ಅರ್ಜಿಗಳು ತುರ್ತು ವಿಲೇ ಮಾಡಿ ಸಂಬAಧಿಸಿದ ದಾಖಲೆಗಳನ್ನು ಸಂಗ್ರಹಿಸಿಟ್ಟುಕೊಳ್ಳುವಂತೆ ಜನರಿಗೆ ತಿಳುವಳಿಕೆ ನೀಡುವುದು ಅಗತ್ಯವಾಗಿದೆ. ಆರೋಗ್ಯ ಇಲಾಖೆಯಲ್ಲಿ ವೈದ್ಯರ ಕೊರತೆ ಆಗಬಾರದು.

ಆ ನಿಟ್ಟಿನಲ್ಲಿ ವೈದ್ಯರ ನೇಮಕ ಅವಶ್ಯಕ ಪರಿಕರಗಳ ಒದಗಿಸುವ ಕಾರ್ಯ ಹಾಗೂ ಆಸ್ಪತ್ರೆಗಳಲ್ಲಿ ಸ್ವಚ್ಚತೆಗೆ ಕಾಪಾಡಲು ತಿಳಿಸಿದರು. ವೈದ್ಯರು ಹಾಗೂ ಸಿಬ್ಬಂದಿಗಳು ಸಮಯಕ್ಕೆ ಸರಿಯಾಗ ಆಸ್ಪತ್ರೆಗಳಲ್ಲಿ ಹಾಜರಿದ್ದು, ರೋಗಿಗಳಿಗೆ ಚಿಕಿತ್ಸೆ ಒದಗಿಸುವ ಕಾರ್ಯವಾಗಬೇಕು ಎಂದರು.

ವಿದ್ಯಾರ್ಥಿಗಳ ಅಧ್ಯಯನಕ್ಕೆ ಹೆಚ್ಚಿನ ಒತ್ತು ನೀಡಬೇಕು. ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಕರೆಗಳ ಒತ್ತುವರಿಯನ್ನು ತೆರವುಗೊಳಿಸಿ ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದನೆ ನೀಡಿ ಬಗೆಹರಿಸುವ ಕಾರ್ಯವಾಗಬೇಕು.

ವಸತಿ ನಿಲಯಗಳಲ್ಲಿ ಮುಖ್ಯವಾಗಿ ಸ್ವಚ್ಚತೆಗೆ ಹೆಚ್ಚು ಒತ್ತು ನೀಡಿ ವಿದ್ಯಾರ್ಥಿಗಳಿಗೆ ಯಾವುದೇ ತೀರಿಯ ತೊಂದರೆಯಾಗದAತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ತಿಳಿಸಿದ ಅವರು ಜನಸ್ನೇಹಿ ಆಡಳಿತ, ಜನರ ಪರವಾಗಿ ಕೆಲಸ ಮಾಡುವಂತಾಗಬೇಕು. ಭ್ರಷ್ಟಾಚಾರದ ವಿರುದ್ದ ಗಟ್ಟಿಯಾದ ನಿಲುವು ಸಹ ತಾಳಲಾಗುತ್ತಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿ.ಪಂ ಸಿಇಓ ಶಶಿಧರ ಕುರೇರ, ಲೋಕಾಯುಕ್ತರಾದ ಬಾಗಲಕೋಟೆ ಲೋಕಾಯುಕ್ತ ಎಸ್.ಪಿ ಶಂಕರ ರಾಗಿ, ವಿಜಯಪುರ ಲೋಕಾಯುಕ್ತ ಎಸ್.ಪಿ ಟಿ.ಮಲ್ಲೇಶ, ಜಮಖಂಡಿ ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ, ತಹಶೀಲ್ದಾರ ಸದಾಶಿವ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಸಭೆಯ ಪೂರ್ವದಲ್ಲಿ ಜಮಖಂಡಿ ವ್ಯಾಪ್ತಿಯಲ್ಲಿ ವಿವಿದೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

";