This is the title of the web page
This is the title of the web page

Live Stream

March 2025
S M T W T F S
 1
2345678
9101112131415
16171819202122
23242526272829
3031  

| Latest Version 9.4.1 |

National News

ಗ್ರಾಹಕರಿಗೆ ಶಾಕ್ :ಬಜೆಟ್​ಗೂ ಮುಂಚೆ, ಎಲ್​​ಪಿಜಿ ಸಿಲಿಂಡರ್ ದರ ಏರಿಕೆ

ಗ್ರಾಹಕರಿಗೆ ಶಾಕ್ :ಬಜೆಟ್​ಗೂ ಮುಂಚೆ, ಎಲ್​​ಪಿಜಿ ಸಿಲಿಂಡರ್ ದರ ಏರಿಕೆ

ನವದೆಹಲಿ: ಕೇಂದ್ರ ಬಜೆಟ್ ಮಂಡನೆಗೂ ಮುನ್ನವೇ ವಾಣಿಜ್ಯ ಬಳಕೆಯ ಎಲ್​​ಪಿಜಿ ಸಿಲಿಂಡರ್ ಗ್ರಾಹಕರಿಗೆ ಸರ್ಕಾರ ಶಾಕ್ ನೀಡಿದೆ. ವಾಣಿಜ್ಯ ಬಳಕೆಯ 19 ಕೆಜಿ ಸಿಲಿಂಡರ್​ ದರ 14 ರೂಪಾಯಿ ಏರಿಕೆ ಮಾಡಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಗೃಹಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲದಿದ್ದು, ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ಪರಿಷ್ಕೃತ ಬೆಲೆ ಇಂದಿನಿಂದ (ಫೆಬ್ರವರಿ 1) ಅನ್ವಯವಾಗಲಿದೆ. ಕಳೆದ ತಿಂಗಳು ಕೂಡ ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ತುಸು ಹೆಚ್ಚಳ ಮಾಡಿದ್ದವು.
ಬೆಲೆ ಹೆಚ್ಚಳದ ಬಳಿಕ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1769.50 ರೂ. ತಲುಪಿದೆ.

ಕೋಲ್ಕತ್ತಾದಲ್ಲಿ 19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1887.00 ರೂ.ಗೆ ತಲುಪಿದ್ದು, ಮುಂಬೈನಲ್ಲಿ 1723.50 ರೂ., ಚೆನ್ನೈನಲ್ಲಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 1937 ರೂ.ಗೆ ತಲುಪಿದೆ.ಕಳೆದ ಮೂರು ವರ್ಷಗಳಲ್ಲಿ ಗೃಹಬಳಕೆಯ ಸಿಲಿಂಡರ್ ಗಳ ದರ 17 ಬಾರಿ ಬದಲಾಗಿದ್ದು, ವಾಣಿಜ್ಯ ಸಿಲಿಂಡರ್​ಗಳ ದರ ಬಹುತೇಕ ಪ್ರತಿ ತಿಂಗಳು ಬದಲಾಗುತ್ತಿದೆ.

ಕೆಲವೊಮ್ಮೆ ಗ್ರಾಹಕರಿಗೆ ಪ್ರಯೋಜನವಾದರೆ ಇನ್ನು ಕೆಲವೊಮ್ಮೆ ಸಮಸ್ಯೆಗಳನ್ನು ಎದುರಿಸಬೇಕಾಗಿದ್ದು, ಐಒಸಿ ಅಂಕಿಅಂಶಗಳ ಪ್ರಕಾರ, ಜನವರಿ 1, 2021 ರಂದು ದೆಹಲಿಯಲ್ಲಿ 19 ಕೆಜಿ ಸಿಲಿಂಡರ್ ಬೆಲೆ 1,349 ರೂ ಇತ್ತು. ಅಂದಿನಿಂದ ಸುಮಾರು 50 ಬಾರಿ ದರ ಪರಿಷ್ಕರಣೆಯಾಗಿದೆ.

ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಸತತ 6ನೇ ಬಾರಿ ಯಾವುದೇ ಬದಲಾವಣೆಯಾಗಿಲ್ಲದಿದ್ದು, ಆಗಸ್ಟ್ 30 ರಂದು ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಕೊನೆಯ ಬಾರಿ ಬದಲಾವಣೆ ಮಾಡಲಾಗಿತ್ತು. ಅಂಕಿಅಂಶಗಳ ಪ್ರಕಾರ, ದೇಶದ ರಾಜಧಾನಿ ದೆಹಲಿಯಲ್ಲಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ 903 ರೂ., ಕೋಲ್ಕತ್ತಾದಲ್ಲಿ 929 ರೂ., ಮುಂಬೈಯಲ್ಲಿ 902.50 ರೂ., ಚೆನ್ನೈನಲ್ಲಿ 918.50 ರೂ. ಇದೆ ಎಂದು ಮಾಹಿತಿ ಕಂಡು ಬಂದಿದೆ.

Nimma Suddi
";