ಭೂಪಾಲ್ : ಮಧ್ಯಪ್ರದೇಶದ ಅಗರ್ ಮಾಲ್ವಾ ಜಿಲ್ಲೆಯಲ್ಲಿ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವಾಗಿದ್ದು, ನೆರೆಯ ಮನೆಯ ಯುವಕನೇ ಈ ಕೃತ್ಯ ಎಸಗಿದ್ದಾರೆ ಎಂದು ಮಾಹಿತಿ ಕಂಡು ಬಂದಿದೆ.
ಸೋಯತ್ ಕಾಲಾ ಎಂಬ ಊರಿನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಾಲಕಿಯು ತನ್ನ ಮನೆಯ ಮುಂದೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಪಕ್ಕದ ಮನೆಯ 17 ವರ್ಷದ ಹುಡುಗನೊಬ್ಬ ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ ಎಂದು ಎಂದು ಪೊಲೀಸರು ತಿಳಿಸಿದ್ದು, ಘಟನೆ ನಡೆದ ರಾತ್ರಿ ಬಾಲಕಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಆ ನಂತರ ಬಾಲಕಿಯ ಪೋಷಕರು ಗಾಬರಿಯಾಗಿ ಮಗಳನ್ನು ವಿಚಾರಿಸಿದ್ದಾರೆ.
ಆಗ ಮಗು ಘಟನೆಯನ್ನು ವಿವರಿಸಿದೆ ನಂತರ ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಸೋಯತ್ ಕಾಲಾ ಪೊಲೀಸ್ ಠಾಣೆಯ ಉಸ್ತುವಾರಿ ಯಶವಂತ್ ರಾವ್ ಗಾಯಕ್ವಾಡ್ ಮಾಹಿತಿ ನೀಡಿದ್ದು, ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಅತ್ಯಾಚಾರವಾಗಿರುವುದು ದೃಢಪಡಿಸಿದೆ.
ಇನ್ನು ಘಟನೆಯ ನಂತರ ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಇನ್ನು ಲೈಂಗಿಕ ಅಪರಾಧ, ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯ ಅಡಿಯಲ್ಲಿ ಅಪ್ರಾಪ್ತ ಬಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.