This is the title of the web page
This is the title of the web page

Live Stream

June 2024
S M T W T F S
 1
2345678
9101112131415
16171819202122
23242526272829
30  

| Latest Version 9.4.1 |

Crime News

ಮಧ್ಯಪ್ರದೇಶ: ಬಾಲಕಿ ಮೇಲೆ ಅತ್ಯಾಚಾರ ಮಾಡಿ, ಸೇತುವೆಯಿಂದ ಕೆಳಗೆಸೆದ ಕ್ರೂರಿಗಳು

ಮಧ್ಯಪ್ರದೇಶ: ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಸೇತುವೆಯಿಂದ ಕೆಳಗೆಸೆದಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದು, ಆರೋಪಿಗಳನ್ನು ಬಾಬಿ ರಾವತ್ (19) ಮತ್ತು ಸತೇಂದ್ರ ಕುಶ್ವಾಹ (28) ಎಂದು ಗುರುತಿಸಲಾಗಿದೆ,

ಬಾಲಕಿಯನ್ನು ಅಪಹರಿಸಿ ದಾಬ್ರಾದ ಸಹರಾಯ್ ಸೇತುವೆಯ ಬಳಿ ಕರೆದೊಯ್ದು ಅತ್ಯಾಚಾರ ಎಸಗಿದ್ದು, ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯ ದಾಬ್ರಾ ಪಟ್ಟಣದಲ್ಲಿ ಇಬ್ಬರು ವ್ಯಕ್ತಿಗಳು 16 ವರ್ಷದ ಬಾಲಕಿಯನ್ನು ಅಪಹರಿಸಿ, ಅಮಾನುಷವಾಗಿ ಹಲ್ಲೆ ನಡೆಸಿ ಸಾಮೂಹಿಕ ಅತ್ಯಾಚಾರ ಎಸೆದಿದ್ದಾರೆ ಮತ್ತು ಸೇತುವೆಯಿಂದ ಎಸೆದಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಇಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದು, ಪೊಲೀಸರ ಪ್ರಕಾರ, ಸೋಮವಾರ ಮಧ್ಯಾಹ್ನ 10 ನೇ ತರಗತಿಯ ವಿದ್ಯಾರ್ಥಿನಿ ಕೋಚಿಂಗ್ ತರಗತಿಗಳಿಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಬಾಲಕಿಯನ್ನು ಅಪಹರಿಸಿ ದಾಬ್ರಾದ ಸಹರಾಯ್ ಸೇತುಆಕೆಯ ಮೇಲೆ ಅತ್ಯಾಚಾರವೆಸಗಿ ಕ್ರೂರವಾಗಿ ಥಳಿಸಿದ್ದಾರೆ. ಬಳಿಕ ಸಹರಾಯ್ ಸೇತುವೆಯಿಂದ ತಳ್ಳಿದ್ದಾರೆ.

ಪಕ್ಕೆಲುಬುಗಳು ಮುರಿದಿವೆ, ಖಾಸಗಿ ಭಾಗಗಳಲ್ಲೂ ಗಾಯಗಳಾಗಿದ್ದು, ಆಕೆಯ ಪರಿಸ್ಥಿತಿ ಸ್ಥಿರವಾಗಿದೆ ಎಂಬುದು ತಿಳಿದುಬಂದಿದೆ. ಪ್ರಜ್ಞೆ ಬಂದ ನಂತರ ಆಕೆಯ ಬಳಿ ಪೊಲೀಸರು ಮಾಹಿತಿ ಪಡೆದಿದ್ದಾರೆ. ಆಕೆ ಒಂಟಿಯಾಗಿ ನಡೆದುಕೊಂಡು ಹೋಗುತ್ತಿರುವುದನ್ನು ಇಬ್ಬರು ಹಿಂಬಾಲಿಸಿ ಆಕೆಯನ್ನು ಅಪಹರಿಸಿದ್ದರು. ಸೆಕ್ಷನ್ 376(ಡಿ), 366 (ಅಪಹರಣ) ಮತ್ತು 323 ಅಡಿ ಪ್ರಕರಣ ದಾಖಲಿಸಲಾಗಿದೆ. ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.