This is the title of the web page
This is the title of the web page

Live Stream

October 2024
S M T W T F S
 12345
6789101112
13141516171819
20212223242526
2728293031  

| Latest Version 9.4.1 |

Politics News

ದೀಪಾವಳಿ ಹಬ್ಬದಲ್ಲಿ ಮೈಮರೆಯಬೇಡಿ:ಚರಂತಿಮಠ

ಕೋವಿಡ್ ನಿಯಮಗಳನ್ನು ಪಾಲಿಸಿ

ಬಾಗಲಕೋಟೆ

ದೀಪಾವಳಿ ಹಬ್ಬದಲ್ಲಿ ಮೈ ಮರೆಯಬಾರದು. ಕೋವಿಡ್ ಹಿನ್ನಲೆಯಲ್ಲಿ ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸಬೇಕು. ಸರಕಾರದ ಕೋವಿಡ್ ನಿಯಮಾವಳಿಗಳನ್ನು ಕಡ್ಡಾಯವಾಗಿ ಸಾರ್ವಜನಿಕರು ಪಾಲಿಸಬೇಕು ಎಂದು ಶಾಸಕ ವೀರಣ್ಣ ಚರಂತಿಮಠ ತಿಳಿಸಿದ್ದಾರೆ.

ದೀಪಾವಳಿ ಹಬ್ಬಕ್ಕಾಗಿ ಮಾರುಕಟ್ಟೆಗೆ ಬರುವ ಗ್ರಾಮೀಣ ಹಾಗೂ ನಗರದ ಜನರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಂಡು ಬರಬೇಕು. ಅನವಶ್ಯಕವಾಗಿ ಮಕ್ಕಳನ್ನು ಹಾಗೂ ವಯೋವೃದ್ಧರನ್ನು ಜನನೀಬಿಡ ಮಾರುಕಟ್ಟೆಗೆ ಕರೆದುಕೊಂಡು ಬರಬಾರದು. ಕೋವಿಡ್ ಹಿನ್ನಲೆಯಲ್ಲಿ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾಗಿದೆ ಎಂದು ಹೇಳಿದ್ದಾರೆ.

ದೀಪಾವಳಿ ಹಬ್ಬಕ್ಕಾಗಿ ಪಟಾಕಿ ಸಿಡಿಸುವುದನ್ನು ಸರಕಾರ ನಿಷೇಸಿದೆ. ಸರಕಾರ ಸೂಚಿಸಿದಂತೆ ಪರಿಸರ ಸ್ನೇಹಿ ಹಾಗೂ ಹಸಿರು ಪಟಾಕಿ ಸಿಡಿಸಬೇಕು. ಈ ಮೊದಲು ಸಿಡಿಸುವ ಪಟಾಕಿಯಿಂದ ವಿಷಾನೀಲ ಹೆಚ್ಚಾಗುತ್ತಿತ್ತು. ಇದರಿಂದ ಉಸಿರಾಟದ ತೊಂದರೆ ಅನುಭವಿಸುತ್ತಿದ್ದರಿಂದ ಇದನ್ನೆಲ್ಲಾ ದೂರಮಾಡಲೆಂದೇ ಹಸಿರು ಪಟಾಕಿ ಸಿಡಿಸಲು ಅನುಮತಿ ನೀಡಿದೆ ಅದನ್ನೇ ಎಲ್ಲರೂ ಕಡ್ಡಾಯವಾಗಿ ಪಾಲಿಸಿಕೊಂಡು ದೀಪಾವಳಿ ಹಬ್ಬವನ್ನು ಸಡಗರ ಸಂಭ್ರಮದಿAದ ಆಚರಿಸಬೇಕು ಎಂದು ಹೇಳಿದ್ದಾರೆ.

 

";