ನವದೆಹಲಿ: ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರ ಪ್ರತ್ಯೇಕ ರಾಷ್ಟ್ರ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ದೇಶ ಒಡೆಯುವ ಬಗ್ಗೆ ಯಾರೇ ಮಾತನಾಡಿದರೂ ಸಹಿಸಲ್ಲ. ಯಾವುದೇ ಪಕ್ಷದವರಾಗಿರಲಿ ನಾವು ಸಹಿಸುವ ಪ್ರಶ್ನೆಯೇ ಇಲ್ಲ
ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ‘ಪ್ರತ್ಯೇಕ ದೇಶ’ ಹೇಳಿಕೆಯನ್ನು ಪಿಯೂಷ್ ಗೋಯಲ್ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಈ ಹೇಳಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದರು.
ರಾಜ್ಯಸಭೆ ಕಲಾಪದ ವೇಳೆ ಈ ವಿಚಾರವಾಗಿ ಪ್ರಸ್ತಾಪಿಸಿದ ಅವರು, ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಾವು ಒಗ್ಗಟ್ಟಾಗಿದ್ದೇವೆ. ಭಾರತಕ್ಕಾಗಿ ಕಾಂಗ್ರೆಸ್ ನಾಯಕಿ ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ತ್ಯಾಗ ಬಲಿದಾನ ಮಾಡಿದ್ದು, ಲೋಕಸಭೆ ಸಂಸದ (ಡಿ.ಕೆ.ಸುರೇಶ್) ಹಾಗೆ ಹೇಳಿಲ್ಲ ಎಂದು ಹೇಳಿದ್ದು, ಅದನ್ನು ಚರ್ಚಿಸಬಾರದು ಎಂದು ತಿಳಿಸಿದರು.
ಇದಕ್ಕೆ ಸ್ಪಷ್ಟನೆ ನೀಡಿದ ಖರ್ಗೆ, ದೇಶ ವಿಭಜಿಸುವ ಮಾತುಗಳನ್ನು ಯಾರೇ ಆಡಿದರೂ ಸಹಿಸಲ್ಲ ಎಂದರು.ಕೇಂದ್ರದ ಮಧ್ಯಂತರ ಬಜೆಟ್ ಟೀಕಿಸುವ ಭರದಲ್ಲಿ ಡಿಕೆ ಸುರೇಶ್ ಗುರುವಾರ ನೀಡಿದ್ದ ಪ್ರತ್ಯೇಕ ರಾಷ್ಟ್ರ ಹೇಳಿಕೆ ರಾಜ್ಯ, ರಾಷ್ಟ್ರ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಕರ್ನಾಟಕದಲ್ಲಿ ಬಿಜೆಪಿ ನಾಯಕರು ಡಿಕೆ ಸುರೇಶ್ ಹೇಳಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.