This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

National NewsPolitics NewsState News

ಪ್ರಧಾನಿ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ನನ್ನ ಆಯ್ಕೆ ಎಂದಿದ್ದಾರೆ; ಮಲ್ಲಿಕಾರ್ಜುನ ಖರ್ಗೆ

ಪ್ರಧಾನಿ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ನನ್ನ ಆಯ್ಕೆ ಎಂದಿದ್ದಾರೆ; ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಇಂಡಿಯ ಒಕ್ಕೂಟದ ಪ್ರಧಾನಿ ಅಭ್ಯರ್ಥಿ ಯಾರು? ಎಂಬ ಪ್ರಶ್ನೆಗೆ ಆ ಬಣದ ಯಾರೂ ಖಚಿತವಾಗಿ ಉತ್ತರ ನೀಡಿರಲಿಲ್ಲ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಇದಕ್ಕೆ ಸ್ಪಷ್ಟ ಉತ್ತರ ನೀಡಿರಲಿಲ್ಲ. ಲೋಕಸಭೆ ಚುನಾವಣೆಯಲ್ಲಿ ಇಂಡಿಯ ಒಕ್ಕೂಟ ಗೆದ್ದರೆ ಆ ನಂತರ ಪ್ರಧಾನಿ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುವುದು ಎಂದು ಅವರು ಹೇಳಿದ್ದರು. ಆದರೆ, ಇದೀಗ ಆ ಪ್ರಶ್ನೆಗೆ ಉತ್ತರಿಸಿರುವ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ನನ್ನ ಆಯ್ಕೆ ಎಂದಿದ್ದಾರೆ ಎಂದರು.

ಗಾಂಧಿ ಕುಟುಂಬದ ಆಪ್ತರಾಗಿರುವ ಮಲ್ಲಿಕಾರ್ಜುನ ಖರ್ಗೆ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧಿಸಬೇಕಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. ಸತತ 5 ಗೆಲುವಿನ ನಂತರ ಸೋನಿಯಾ ಗಾಂಧಿ ಅವರಿಂದ ತೆರವಾದ ರಾಯ್​ಬರೇಲಿಯ ಸ್ಪರ್ಧೆಯ ಬಗ್ಗೆ ಚರ್ಚೆ ನಡೆದಿದೆ. ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೊನೆಕ್ಷಣದಲ್ಲಿ ಚುನಾವಣೆಯಿಂದ ಹೊರಗುಳಿದಿದ್ದರು. ಅವರ ಬದಲಾಗಿ ಅವರ ಸಹೋದರ ರಾಹುಲ್ ಗಾಂಧಿ ರಾಯ್​ಬರೇಲಿಯಿಂದ ಸ್ಪರ್ಧಿಸಿದ್ದರು. ಪ್ರಿಯಾಂಕಾ ಗಾಂಧಿ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದರು.

ಎನ್‌ಡಿಟಿವಿಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಈ ಲೋಕಸಭೆ ಚುನಾವಣೆಗೂ ಮೊದಲು ಎರಡು ‘ಭಾರತ್ ಜೋಡೋ ಯಾತ್ರೆ’ಗಳನ್ನು ಮುನ್ನಡೆಸಿದ್ದರು. ದೇಶಾದ್ಯಂತ ವ್ಯಾಪಕವಾಗಿ ಪ್ರಚಾರ ಮಾಡಿದ್ದರು. ಯಾವುದೇ ಹಿಂಜರಿಕೆಯಿಲ್ಲದೆ ಪ್ರಧಾನಿ ಮೋದಿ ವಿರುದ್ಧ ನೇರ ದಾಳಿಯನ್ನು ಮಾಡುವ ರಾಹುಲ್ ಗಾಂಧಿ ಪ್ರಧಾನಿ ಹುದ್ದೆಗೆ ಅತ್ಯುತ್ತಮ ಆಯ್ಕೆಯಾಗುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಿದರೆ ಕಾಂಗ್ರೆಸ್ ಪಕ್ಷದ ನೇತೃತ್ವದ ಇಂಡಿಯ ಬಣದಿಂದ ದೇಶದ ಪ್ರಧಾನಿಯಾಗಿ ರಾಹುಲ್ ಗಾಂಧಿ ಅವರ ಆಯ್ಕೆಗೆ ನನ್ನ ಬೆಂಬಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

";