ಬೆಂಗಳೂರು: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ರಾಮೇಶ್ವರಂ ಕೆಫೆ ಪ್ರಕರಣದಲ್ಲಿ ಬಿಜೆಪಿ ಕಾರ್ಯಕರ್ತನ ತೇಜೋವಧೆ ಮಾಡಿದ್ದಸಚಿವ ದಿನೇಶ್ ಗುಂಡೂರಾವ್ ಅವರು ಕ್ಷಮೆ ಕೇಳಬೇಕು ಮತ್ತು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ವಿಪಕ್ಷ ನಾಯಕ ಆರ್ ಅಶೋಕ ಆಗ್ರಹಿಸಿದರು.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, “ರಾಮೇಶ್ವರಂ ಕೆಫೆ ಪ್ರಕರಣದಲ್ಲಿ ಬಾಂಬ್ ಇಟ್ಟಿದ್ದ ಕರ್ನಾಟಕ ಕಾಂಗ್ರೆಸ್ ಪಕ್ಷದ ಬ್ರದರ್ಸ್ ಮುಸಾವೀರ್ ಶಾಜೀಬ್ ಹಾಗು ಸಂಚು ರೂಪಿಸಿದ್ದ ಅಬ್ದುಲ್ ಮಥೀನ್ ತಾಹಾನನ್ನು ರಾಷ್ಟ್ರೀಯ ತನಿಖಾ ದಳ ಬಂಧಿಸಿದ್ದು, ತನಿಖೆಯಲ್ಲಿ ಸಾಕ್ಷಿಯಾಗಿದ್ದ ಬಿಜೆಪಿ ಕಾರ್ಯಕರ್ತನ ತೇಜೋವಧೆ ಮಾಡಲು ಹೊರಟಿದ್ದ ಸಚಿವ ದಿನೇಶ್ ಗುಂಡೂರಾವ್ಅವರು ಆ ಅಮಾಯಕ ಯುವಕನ ಕ್ಷಮೆ ಕೇಳಬೇಕು ಎಂದರು.
ಬಾಬಾ ರಾಮ್ ದೇವ್ ಅವರ ಪತಂಜಲಿ ವಿರುದ್ದವೂ ಹೇಳಿಕೆ ನೀಡಿದ್ದ ದಿನೇಶ್ ಗುಂಡೂರಾವ್ ಅವರನ್ನು ಮತ್ತೊಂದು ಪೋಸ್ಟಿನಲ್ಲಿ ತರಾಟೆಗೆ ತೆಗೆದುಕೊಂಡಿರುವ ಆರ್ ಅಶೋಕ, “ಈ ಹಲಾಲ್ ಕಟ್ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು, ಬಿಸಿನೆಸ್ ಗಳು ಬೆಳೆದರೆ ಸಹಿಸೋದೇ ಇಲ್ಲ. ಸಮಸ್ತ ಭಾರತೀಯರ ಅಚ್ಚುಮೆಚ್ಚಿನ ಬ್ರ್ಯಾಂಡ್ ಆಗಿ ಬೆಳೆಯುತ್ತಿರುವ ಬಾಬಾ ರಾಮದೇವ್ ಅವರ ಪತಂಜಲಿ ಮೇಲೆ ಈಗ ಕಾಂಗ್ರೆಸ್ ಸರ್ಕಾರದ ವಕ್ರದೃಷ್ಟಿ ಬಿದ್ದಿದೆ ಎಂದು ಹೇಳಿದರು.
ಜವಾಬ್ದಾರಿಯುತ ಮಂತ್ರಿ ಸ್ಥಾನದಲ್ಲಿದ್ದುಕೊಂಡು ಇಂತಹ ಸೂಕ್ಷ್ಮವಾದ ರಾಷ್ಟ್ರೀಯ ಸುರಕ್ಷತೆಯ ವಿಷಯದಲ್ಲೂ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡಿರುವ ದಿನೇಶ್ ಗುಂಡೂರಾವ್ ಅವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯನವರನ್ನು ಆಗ್ರಹಿಸುತ್ತೇನೆ” ಎಂದು ಸೂಚಿಸಿದರು.