ಬೀದರ್: ಕಾಡುಹಂದಿ ದಾಳಿಗೆ ಗಂಭೀರ ಗಾಯಗೊಂಡಿದ್ದ ಮಹಿಳೆ ಇದೀಗ ಕೊನೆಯುಸಿರೆಳೆದಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ಬೀದರ್ (Bidar) ತಾಲೂಕಿನ ಹೊಕ್ರಾಣ(ಕೆ) ಗ್ರಾಮದ ಮಹಿಳೆ ಕವಿತಾ (45) ಮೃತ ರ್ದುದೈವಿ. ರೈತನ ಹೊಲಕ್ಕೆ ಕೂಲಿ ಕೆಲಸಕ್ಕೆ ಹೋದಾಗ ಕಾಡುಹಂದಿ ದಾಳಿ ಮಾಡಿತ್ತು. ಹೊಟ್ಟೆಗೆ ಕಚ್ಚಿದ್ದರಿಂದ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ. ಈ ಕುರಿತು ಮನ್ನಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ಮೃತ ಕುಟುಂಬದ ಮನೆಗೆ ಅರಣ್ಯಾಧಿಕಾರಿಗಳ ಜೊತೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಭೇಟಿ ನೀಡಿದ್ದಾರೆ. ತಕ್ಷಣವೇ ಮೃತರ ಕುಟುಂಬಕ್ಕೆ 15 ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಿದ್ದಾರೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಇನ್ಮುಂದೆ ಇಂತಹ ಯಾವುದೇ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಿಲು ಅರಣ್ಯಾಧಿಕಾರಿಗಳಿಗೆ ಸೂಚಿಸಿದ್ದು ಬೆಳಕಿಗೆ ಬಂದಿದೆ.