This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics NewsState News

ಸಿದ್ದರಾಮಯ್ಯನವರಂತಹ ನಾಯಕನನ್ನು ಕೆಳಗಿಳಿಸಲು ಸಾಧ್ಯವೆ?: ಸಚಿವೆ ಲಕ್ಷ್ಮೀ ಹೆಬ್ಬಾಳಕರ

ಸಿದ್ದರಾಮಯ್ಯನವರಂತಹ ನಾಯಕನನ್ನು ಕೆಳಗಿಳಿಸಲು ಸಾಧ್ಯವೆ?: ಸಚಿವೆ ಲಕ್ಷ್ಮೀ ಹೆಬ್ಬಾಳಕರ

ಮೂಡಲಗಿ: ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನಗೊಳ್ಳುತ್ತೆ, ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುತ್ತದೆಂದು ಗೋಕಾಕ ಶಾಸಕರು ದಿನ ಬೆಳಗಾದರೇ ಹೇಳಿಕೊಂಡು ತಿರುಗುತ್ತಿದ್ದಾರೆ. ಸಿದ್ದರಾಮಯ್ಯನವರ ಸರ್ಕಾರ ಬೀಳಿಸೋಕೆ ಪ್ರಯತ್ನಿಸಿದರೇ ನಾಡಿನ ಸಮಸ್ತ ಜನರು ಅದರಲ್ಲೂ ಹಿಂದುಳಿದ ವರ್ಗಗಳ ಕೆಂಗಣ್ಣಿಗೆ ಗುರಿಯಾಗಬೇಕಾಗುತ್ತದೆ. ಇಂಥ ಒಬ್ಬ ನಾಯಕನನ್ನು ಕೆಳಗಿಳಿಸಲು ಸಾಧ್ಯವೇ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಪ್ರಶ್ನಿಸಿದರು.

ಅರಭಾವಿ ವಿಧಾನಸಭಾ ಕ್ಷೇತ್ರದ ಮೂಡಲಗಿ ಪಟ್ಟಣದಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಕಳೆದ 4 ಅವಧಿಯಲ್ಲಿ ಬೆಳಗಾವಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯೇ ಆರಿಸಿಬರುತ್ತಿದ್ದು, ಈ ಬಾರಿ ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಬೇಕು. ಕೇಂದ್ರದಲ್ಲಿ ಇಂಡಿಯಾ ಒಕ್ಕೂಟದ ಸರ್ಕಾರ ಬಂದೇ ಬರುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಚುನಾವಣೆಗೂ ಮುನ್ನವೇ ಕೇಂದ್ರದಲ್ಲಿ ಮಂತ್ರಿಯಾಗಲು ಡಜನ್ ಗಟ್ಟಲೆ ಆಕಾಂಕ್ಷೆಗಳು ರೆಡಿಯಾಗುತ್ತಿದ್ದು, ಮಂತ್ರಿಯಾಗುವ ಕನಸಿನಲ್ಲಿರುವ ಅಭ್ಯರ್ಥಿಗಳು ಮೊದಲು ಚುನಾವಣೆಯಲ್ಲಿ ಗೆದ್ದು ತೋರಿಸಲಿ ಎಂದು ಸವಾಲು ಹಾಕಿದರು.

 

";