This is the title of the web page
This is the title of the web page

Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

State News

ನವೆಂಬರ್ ತಿಂಗಳಿನಿಂದ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಮತ್ತು ನೀರು ಪೂರೈಕೆ : ಸಚಿವ ಮಧು ಬಂಗಾರಪ್ಪ

ನವೆಂಬರ್ ತಿಂಗಳಿನಿಂದ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಮತ್ತು ನೀರು ಪೂರೈಕೆ : ಸಚಿವ ಮಧು ಬಂಗಾರಪ್ಪ

ಮೈಸೂರು: ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಹಾಗೂ ನೀರನ್ನು ನವೆಂಬರ್​ನಿಂದ ಪೂರೈಸಲಾಗುವುದು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಘೋಷಣೆ ಮಾಡಿದ್ದು ಬೆಳಕಿಗೆ ಬಂದಿದೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿ ಮಾತನಾಡಿದ ಅವರು, ಇದರಿಂದ ಶಾಲೆಗಳಲ್ಲಿ ಮುಕ್ತವಾಗಿ ಎಲ್ಲಾ ವ್ಯವಸ್ಥೆ ಬಳಸಿಕೊಳ್ಳಬಹುದಿದ್ದು, ಷ್ಟೋ ಶಾಲೆಗಳಿಗೆ ವಿದ್ಯುತ್ ಬಿಲ್ ಕಟ್ಟಲು ಸಾಧ್ಯವಾಗುತ್ತಿಲ್ಲ .ಉಚಿತವಾಗಿ ವಿದ್ಯುತ್​ ಹಾಗೂ ನೀರು ನೀಡಿದರೆ ಎಲ್ಲಾ ಸರ್ಕಾರಿ ಶಾಲೆಗಳಿಗೆ ಅನುಕೂಲವಾಗಲಿದೆ. ಎಷ್ಟೋ ಶಾಲೆಗಳು ವಿದ್ಯುತ್ ಬಿಲ್‌ಗೆ ಹೆದರಿ ಕಂಪ್ಯೂಟರ್ ಬಳಸುತ್ತಿಲ್ಲ ಎಂದರು.

ಶಾಲಾ ಮಕ್ಕಳಿಗೆ ಕ್ಷೀರ ಭಾಗ್ಯ ಹಾಲಿನಲ್ಲಿ ರಾಗಿ ಮಾಲ್ಟ್ ಕೊಡುತ್ತೇವೆ. ಕ್ಷೀರ ಭಾಗ್ಯ ಹಾಲಿನಲ್ಲಿ ರಾಗಿ ಮಾಲ್ಟ್ ಹಾಕಿ ಮೈಸೂರಿನ ಸಿಎಫ್‌ಟಿಆರ್‌ಐನಲ್ಲಿ ಟೆಸ್ಟ್ ಮಾಡಿಸುತ್ತಿದ್ದೇವೆ. ಮಕ್ಕಳ ಪೌಷ್ಟಿಕಾಂಶ ಜಾಸ್ತಿ ಮಾಡಲು ಪ್ರಯತ್ನಿಸುತ್ತಿದ್ದೇವೆ ನನ್ನ ಇಲಾಖೆ ತುಂಬಾ ದೊಡ್ಡದು. ಮುಖ್ಯಮಂತ್ರಿಗಳು ನನಗೆ ಬೇರೆ ಖಾತೆ ನಿಗದಿ ಮಾಡಿದ್ದರು. ಆದರೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನನಗೆ ಟಫ್ ಇಲಾಖೆ ಕೊಡಿ ಅಂತ ಹೇಳಿದರು. ಇದಕ್ಕೆ ರಣದೀಪ್​ ಸಿಂಗ್​ ಸುರ್ಜೇವಾಲ ಅವರೂ ಒಪ್ಪಿದರು.

ಡಿಕೆ ಶಿವಕುಮಾರ್​ ಅವರು ನಮ್ಮ ತಂದೆಯವರಿಗೆ ಆತ್ಮೀಯರು. ನನ್ನ ಇಲಾಖೆ ಸವಾಲಿನ ಇಲಾಖೆ, ಸಮಸ್ಯೆಗಳೂ ಇವೆ ಎಂದರು.ರಾಜ್ಯದಲ್ಲಿ ಸರ್ಕಾರಿ ಶಾಲೆಗಳೇ 58,000 ಶಾಲೆಗಳಿವೆ. ಒಟ್ಟು 1.20 ಕೋಟಿ ವಿದ್ಯಾರ್ಥಿಗಳು ಇದ್ದಾರೆ. ಶಿಕ್ಷಣದಲ್ಲಿ ಅವಕಾಶ ಬಹಳ ಮುಖ್ಯ. ಮೂರು ಪರೀಕ್ಷೆಗಳನ್ನು ಜಾರಿಗೆ ತಂದಿದ್ದೇವೆ ಎಂದು ಮಾಹಿತಿ ನೀಡಿದರು.

Nimma Suddi
";