This is the title of the web page
This is the title of the web page

Live Stream

June 2025
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ನಾಳೆಯಿಂದ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ವಿತರಣೆ ಮಾಡಲಾಗುವುದು: ಸಚಿವ ಮಧು ಬಂಗಾರಪ್ಪ

ನಾಳೆಯಿಂದ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ವಿತರಣೆ ಮಾಡಲಾಗುವುದು: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ನಾಳೆಯಿಂದ ಶಾಲಾ ಮಕ್ಕಳಿಗೆ ವಾರದಲ್ಲಿ ಮೂರು ದಿನ ರಾಗಿ ಮಾಲ್ಟ್ ವಿತರಣೆ ಮಾಡಲಾಗುವುದು ಎಂದು ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೂಚಿಸಿದರು.

ರಾಜ್ಯ ಸರ್ಕಾರವು 60 ಲಕ್ಷ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ನೀಡಲು ನಿರ್ಧರಿಸಿದೆ. ಇದೇ ತಿಂಗಳು 22 ರಂದು ಬೆಂಗಳೂರಿನಲ್ಲಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ‌ ಹೇಳಿದರು.

ಕೆಎಫ್​ಡಿ ಕಾಯಿಲೆಯಿಂದ ಮೃತಪಟ್ಟವರಿಗೆ ಪರಿಹಾರ ಕೊಡುವ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡಿದ ಸಚಿವ ಮಧು ಬಂಗಾರಪ್ಪ‌, ಕೆಎಫ್​ಡಿಯಿಂದ ಮೃತಪಟ್ಟವರಿಗೆ ಪರಿಹಾರ ಕೊಡಬೇಕು ಎಂದು ಸರ್ಕಾರದ ಗಮನಕ್ಕೆ ತಂದಿದ್ದು, ಕೆಎಫ್​ಡಿಯಿಂದ ಮೃತಪಟ್ಟವರ ಮಾಹಿತಿ ಕೊಡಲು ಸೂಚಿಸಿದ್ದೇನೆ ಎಂದು ತಿಳಿಸಿದರು.

ಪರಿಹಾರ ಕೊಡುವ ಬಗ್ಗೆ ಗಮನ ಹರಿಸಲಾಗುವುದು ಎಂದರು. ಇದೇ ವೇಳೆ ಕೇರಳದಲ್ಲಿ ಆನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಗೆ ರಾಜ್ಯ ಸರಕಾರ ಪರಿಹಾರ ನೀಡುತ್ತಿರುವ ಸಂಬಂಧ ಪ್ರತಿಕ್ರಿಯೆ ನೀಡಿದ್ದು, ಸರ್ಕಾರ ರಾಜ್ಯದ ಹೆಣ್ಣು ಮಕ್ಕಳು ಎತ್ತಿದ್ದಾರೆ. ಅದನ್ನು ಮುಂದೆ ತೆಗೆದುಕೊಂಡು ಹೋಗುವ ಕೆಲಸವನ್ನು ನೀವು ಮಾಡಬೇಕು. ಶಿವಮೊಗ್ಗ ಜಿಲ್ಲೆಗೆ 100 ಹೊಸ KSRTC ಬಸ್ ಕೇಳಿದ್ದೆ. ಸದ್ಯಕ್ಕೆ 10 ಬಸ್ ಬಂದಿದೆ ಎಂದು ತಿಳಿಸಿದರು.

Nimma Suddi
";