ನಿಮ್ಮ ಸುದ್ದಿ ಬೆಂಗಳೂರು
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ.ಮುರುಗೇಶ ಆರ್ ನಿರಾಣಿ ಹಾಗೂ ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ ನೇತೃತ್ವದ ನಿಯೋಗ ಟೋಕಿಯೋದಲ್ಲಿ ಮಂಗಳವಾರ ಜಪಾನ್ ಮೂಲದ ಫುಜಿತ್ಸು ಲಿಮಿಟೆಡ್ನ ಅಧಿಕಾರಿಗಳ ಜತೆ ಮಾತುಕತೆ ನಡೆಸಿತು.
ಈ ಸಂದರ್ಭದಲ್ಲಿ, ನವೆಂಬರ್ 2 ರಿಂದ 4ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಔಪಚಾರಿಕ ಆಹ್ವಾನ ನೀಡಲಾಯಿತು.
ಫುಜಿತ್ಸು ಲಿಮಿಟೆಡ್ ಕಾರ್ಪೊರೇಟ್ ಕಾರ್ಯನಿರ್ವಾಹಕ ಅಧಿಕಾರಿ ವಿವೇಕ್ ಮಹಾಜನ್, ಕಾರ್ಪೊರೇಟ್ ಕಾರ್ಯನಿರ್ವಾಹಕ ಅಧಿಕಾರಿ (ಸಂಶೋಧನಾ ನಿರ್ವಹಣಾ ಕೇಂದ್ರ) ಕೆನ್ ಟೊಯೋಡಾ, ಮತ್ತು ಸಿಬ್ಬಂದಿ ಮುಖ್ಯಸ್ಥ ಜಂಗೊ ಒಕೈ ಉಪಸ್ಥಿತರಿದ್ದರು.
ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದ ಅಂತಾರಾಷ್ಟ್ರೀಯ ರೋಡ್ಶೋನ ಭಾಗವಾಗಿ ರಾಜ್ಯ ನಿಯೋಗವು ಜಪಾನ್ಗೆ ಮೂರು ದಿನಗಳ ಭೇಟಿ ಕೈಗೊಂಡಿದೆ.