This is the title of the web page
This is the title of the web page

Live Stream

December 2024
S M T W T F S
1234567
891011121314
15161718192021
22232425262728
293031  

| Latest Version 9.4.1 |

Politics News

ದೇಶಕ್ಕೆ ಮಾದರಿ ಮರಳು ನೀತಿ ಶೀಘ್ರದಲ್ಲೇ ಜಾರಿ : ಸಚಿವ ನಿರಾಣಿ

ನಿಮ್ಮ ಸುದ್ದಿ ಬಾಗಲಕೋಟೆ

ಕಡಿಮೆ ದರದಲ್ಲಿ ಕೈಗೆಟುಕುವ ರೀತಿ ಮರಳು ಸಿಗುವಂತಹ ಹಾಗೂ ದೇಶಕ್ಕೆ ಮಾದರಿಯಾದ ಮರಳು ನೀತಿಯನ್ನು ಶೀಘ್ರದಲ್ಲೇ ಜಾರಿ ಮಾಡಲಾಗುವುದೆಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.

ನಗರದ ನ್ಯೂ ಸಕ್ರ್ಯೂಟ ಹೌಸ್‍ನಲ್ಲಿ ಮಂಗಳವಾರ ಜರುಗಿದ ಮರಳು ಹಾಗೂ ಜೆಲ್ಲಿ ಕ್ರಷರ್ ಮಾಲಿಕರಗಳ ಹಾಗೂ ಅಧಿಕಾರಿಗ ಜೊತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು 2021-26ಕ್ಕೆ ಅನ್ವಯವಾಗುವಂತೆ ಮಾದರಿಯಾಗುವ ನಿಟ್ಟಿನಲ್ಲಿ ಮರಳುಇ ನೀತಿಯನ್ನು ತರಲಾಗುತ್ತಿದೆ ಎಂದು ತಿಳಿಸಿದರು.

ಬೇರೆ ಬೇರೆ ರಾಜ್ಯಗಳು ಮರಳು ನೀತಿಯಲ್ಲಿ ಕರ್ನಾಟಕದ ಮಾದರಿಯನ್ನು ಅನುಸರಿಸಬೇಕು.ಅದಕ್ಕಾಗಿ ಈಗಾಗಲೇ ಅಧಿಕಾರಿಗಳು ಕಾರ್ಯೋನ್ಮಖರಾಗಿದ್ದಾರೆ ಎಂದರು.

ಜನಸಾಮಾನ್ಯರಿಗೆ ತೊಂದರೆಯಾಗದ ರೀತಿಯಲ್ಲಿ ಪ್ರತಿಯೊಬ್ಬರಿಗೂ ಸುಲಭವಾಗಿ ಹಾಗೂ ಸರಳವಾಗಿ ಮರಳು ಸಿಗುವಂತೆ ಮಾಡುವ ಉದ್ದೇಶದಿಂದ ಶೀಘ್ರದಲ್ಲೇ ಹೊಸ ಮರಳು ನೀತಿಯನ್ನು ಜಾರಿ ತರಲಾಗುವುದು ಎಂದರು.

ಉತ್ತರ ಕರ್ನಾಟಕ, ಕರಾವಳಿ ಕರ್ನಾಟಕ, ಮಧ್ಯ ಕರ್ನಾಟಕ ಸೇರಿದಂತೆ ಒಂದೊಂದು ಭಾಗಕ್ಕೆ ಪ್ರತ್ಯೇಕವಾದ ಮರಳು ನೀತಿ ಇದೆ. ಈಗಾಗಲೇ ಒಂದು ಕರಡನ್ನು ತಂದಿದ್ದೇವೆ. ಇದನ್ನೆಲ್ಲವನ್ನೂ ಬಗೆಹರಿಸುವ ಬಗ್ಗೆ ಈ ನೀತಿ ತರಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಆಶ್ರಯ ಮನೆಗಳಿಗೂ ಸಿಗುತ್ತಿರಲಿಲ್ಲ. ಇಲ್ಲಿಯವರೆಗೆ ಎಲ್ಲದಕ್ಕೂ ಕಡಿವಾಣವಿತ್ತು. ಇದನ್ನು ತಪ್ಪಿಸುವ ಉದ್ದೇಶದಿಂದ ಎತ್ತಿನಗಾಡಿ, ಟ್ರ್ಯಾಕ್ಟರ್‍ಗಳಲ್ಲಿ ತರಲು ಅವಕಾಶ ನೀಡಲಾಗುವುದೆಂದು ತಿಳಿಸಿದುರು.

ಮರಳು ಗಣಿಗಾರಿಕೆಗೆ ಬ್ಲಾಕ್‍ಗಳನ್ನು ಗುರುತಿಸಿ ಹರಾಜಿನ ಮೂಲಕ ಗುತ್ತಿಗೆ ನೀಡಿರುವ ಪ್ರದೇಶ ಹೊರತುಪಡಿಸಿ ಹಳ್ಳ, ತೊರೆಗಳಲ್ಲಿ ಸ್ವಂತ ಬಳಕೆಗೆ ದ್ವಿಚಕ್ರ ವಾಹನ, ಕತ್ತೆ, ಬಂಡಿ, ಟ್ರ್ಯಾಕ್ಟರ್ ಗಳಲ್ಲಿ ಕೊಂಡೊಯ್ಯುವ ಬಡವರು, ರೈತರಿಗೆ ಪರವಾನಗಿ, ರಾಯಲ್ಟಿಯಿಂದ ವಿನಾಯಿತಿ ನೀಡಲಾಗುವುದು. ಆದರೆ, ಇದನ್ನೇ ಸಂಗ್ರಹಿಸಿ ಲಾರಿ, ಟಿಪ್ಪರ್ ಗಳಲ್ಲಿ ಬೇರೆಡೆ ಸಾಗಣೆ, ಮಾರಾಟ ಮಾಡುವುದಕ್ಕೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.

ಎಲ್ಲರಿಗೂ ಮರಳುಸಿಗಬೇಕು. ನೈಸರ್ಗಿಕವಾಗಿಯೂ ಅಪಾಯ ಆಗಬಾರದು. ಸರಕಾರದ ಬೊಕ್ಕಸಕ್ಕೆ ಆದಾಯ ಬರಬೇಕು. ಸಾರ್ವಜನಿಕರಿಗೂ ತೊಂದರೆಯಾಗಬಾರದು. ಇದು ನಮ್ಮ ಇಲಾಖೆಯ ಮೂಲ ಉದ್ದೇಶವಾಗಿದೆ ಎಂದು ತಿಳಿಸಿದರು. ಸ್ಥಗಿತಗೊಂಡಿರುವ ಗಣಿಗಳನ್ನು ಪುನರಾರಂಭ ಮಾಡುವ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಈಗಾಗಲೇ ಜಿಲ್ಲಾವಾರು ಮಾಹಿತಿ ನೀಡುವಂತೆ ಭೂ ವಿಜ್ಞಾನ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.

ಅರ್ಜಿಗಳನ್ನು ತ್ವರಿತವಾಗಿ ಇತ್ಯಾರ್ಥಮಾಡಲು ಇದೇ ಮೊದಲ ಬಾರಿಗೆ ಇಲಾಖೆಯಲ್ಲಿ ಏಕಗಾವಾಕ್ಷಿ ಪದ್ದತಿಯನ್ನು ಜಾರಿ ಮಾಡುತ್ತಿದ್ದೇವೆ. ಅರಣ್ಯ, ಕಂದಾಯ ಮತ್ತಿತರ ಇಲಾಖೆಗಳನ್ನು ಒಟ್ಟಿಗೆ ಸೇರಿಸಿ ಗಣಿ ಸಮಸ್ಯೆಗೆ ಪರಿಹರಿಸುತ್ತೇವೆ. ಗಣಿ ಇಲಾಖೆಯಲ್ಲಿ ಸಾವಿರಾರು ಪ್ರಕರಣಗಳಿವೆ. ಎಲ್ಲವನ್ನೂ ಪರಿಶೀಲನೆ ಮಾಡಿ ತ್ವರಿತವಾಗಿ ವಿಲೇ ಮಾಡಲು ಗಣಿ ಅದಾಲತ್ ಜಾರಿಗೆ ತರಲಾಗುತ್ತಿದೆ. ಈ ಅದಾಲತ್ ಮೂಲಕ ನೆನೆಗುದಿಗೆ ಬಿದ್ದಿರುವ ಅರ್ಜಿಗಳನ್ನು ಇತ್ಯರ್ಥ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

*ಯಾವುದೇ ಕಾರಣಕ್ಕೂ ಇಲಾಖೆಯಲ್ಲಿ ಭ್ರಷ್ಠಾಚಾರ ಸಹಿಸುವುದಿಲ್ಲ. ಯಾರಾದರೂ ಸಾರ್ವಜನಿಕರಿಗೆ ಅನಗತ್ಯವಾಗಿ ತೊಂದರೆ ಕೊಡುತ್ತಿರುವುದು ನನ್ನ ಗಮನಕ್ಕೆ ಬಂದರೆ, ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುವುದು.*
– ಮುರುಗೇಶ್ ನಿರಾಣಿ, ಗಣಿ ಮತ್ತು ಭೂ ವಿಜ್ಞಾನ ಸಚಿವರು

Nimma Suddi
";