This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

Politics News

ಬಾಗಲಕೋಟೆಯಲ್ಲಿ ಸಚಿವ ನಿರಾಣಿ ಹೇಳಿಕೆ

ಏಪ್ರೀಲ್ ಅಂತ್ಯಕ್ಕೆ ಹೊಸ ಮರಳು ನೀತಿ ಜಾರಿ

ನಿಮ್ಮ ಸುದ್ದಿ ಬಾಗಲಕೋಟೆ

ಜನ ಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಮರಳು ಪೂರೈಸುವ ನಿಟ್ಟಿನಲ್ಲಿ ಇದೇ ಏಪ್ರೀಲ್ ತಿಂಗಳ ಅಂತ್ಯದೊಳಗೆ ಹೊಸ ಮರಳು ನೀತಿ ಜಾರಿಗೆ ತರಲಾಗುತ್ತಿದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವರಾದ ಮುರುಗೇಶ ನಿರಾಣಿ ತಿಳಿಸಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದ ಅವರು, ಈ ಹೊಸ ನೀತಿಯನ್ವಯ ೧೦ ಲಕ್ಷ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಮನೆಗಳಿಗೆ ಪ್ರತಿ ಟನ್‌ಗೆ ೧೦೦ ರೂ.ಗಳಿಗೆ ಆಯಾ ಭಾಗದ ಗ್ರಾಮ ಪಂಚಾಯತ, ನಗರಸಭೆಯ ಕಟ್ಟಡ ಅನುಮತಿಯಲ್ಲಿ ತೋರಿಸಿದಂತೆ ನಿಗದಿತ ಮರಳು ಪೂರೈಸಲಾಗುವುದು. ಸರಕಾರದಿಂದ ಟೆಂಡರ್ ಕರೆಯಲಾದ ಕಾಮಗಾರಿಗಳಿಗೆ ಮರಳು ಸಂಗ್ರಹ ಹೊರತುಪಡಿಸಿ ಗುತ್ತಿಗೆದಾರ ಕಾರ್ಯನಿರ್ವಹಿಸಿದಂತೆ ಹಂತ ಹಂತವಾಗಿ ಪೂರೈಸಲಾಗುವುದು ಎಂದರು.

ಸಾರ್ವಜನಿಕರಿಗೆ ಉಪಯೋಗಿಸಲ್ಪಡುವಂತ ಕುಡಿಯುವ ನೀರಿನ ಸಂಬಂಧಿಸಿದ ಸ್ಥಳಗಳಲ್ಲಿ ಹಳ್ಳ, ಕೆರೆ ಹಾಗೂ ಆಣೆಕಟ್ಟಿನ ಹಿನ್ನೀರಿನ ಪ್ರದೇಶದಲ್ಲಿ ಮರಳು ತೆಗೆಯದಂತೆ ನಿರ್ಬಂದ ಹೇರಲಾಗುತ್ತಿದೆ. ಮರಳು ದರವನ್ನು ಪ್ರತಿದಿನ ಬಂಗಾರ, ಬೆಳ್ಳಿ ದರ ಪ್ರಕಟಗೊಂಡಂತೆ ಪ್ರತಿ ವಾರಕ್ಕೊಮ್ಮೆ ಮರಳಿನ ದರದ ಪಟ್ಟಿ ನೀಡಲಾಗುವುದು.

ಇದರಿಂದ ಸರಕಾರಕ್ಕೆ ಆದಾಯ ಹೆಚ್ಚುವದರ ಜೊತೆಗೆ ಸಾರ್ವಜನಿಕರಿಗೆ ಮುಕ್ತವಾಗಿ ಮರಳು ದೊರೆಯಲಿದೆ ಎಂದು ತಿಳಿಸಿದರು.

ಕೆಲವು ಜಿಲ್ಲೆಗಳಲ್ಲಿ ಆಯಾ ಜಿಲ್ಲಾ ಪಂಚಾಯತಿಗಳೇ ಮರಳುಗಾರಿಕೆಯನ್ನು ನಿಯಂತ್ರಣ ಮಾಡಲಾಗುತ್ತಿದ್ದು, ಇದರಲ್ಲೂ ಕೂಡಾ ಅಕ್ರಮವಾಗದಂತೆ ಸರಕಾರ ಮದ್ಯ ಪ್ರವೇಶಿಸಲಿದೆ. ಮೈನಿಂಗ್ ಮಾಡಲು ಸರಕಾರದಲ್ಲಿ ೨೫೦೦ ಅರ್ಜಿಗಳು ಬಂದಿದ್ದು, ಎಲ್ಲವನ್ನು ಸರಳೀಕೃತಗೊಳಿಸಲಾಗುವುದು.

ಪ್ರತಿ ಜಿಲ್ಲೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹಾಗೂ ರಾಜ್ಯ ಮಟ್ಟದಲ್ಲಿ ಗಣಿ ಮತ್ತು ಭೂವಿಜ್ಞಾನ ಸಚಿವರ ಅಧ್ಯಕ್ಷತೆಯಲ್ಲಿ ಗಣಿ ಅದಾಲತ್ ನಡೆಸಲಾಗುತ್ತಿದೆ. ಅದಕ್ಕಾಗಿ ಏಪ್ರೀಲ್ ೩೦ ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಇಡೀ ರಾಜ್ಯದಲ್ಲಿ ಗಣಿಗಾರಿಕೆ ಹಿತದೃಷ್ಠಿಯಿಂದ ಮತ್ತು ಆಡಳಿತಕ್ಕೆ ಅನುಕೂಲವಾಗುವ ದೃಷ್ಠಿಯಿಂದ ಖನಿಜ ಭವನವನ್ನು ನಿರ್ಮಿಸಲಾಗುತ್ತಿದೆ. ಗಣಿಗಾರಿಕೆಯಲ್ಲಿ ಅಕ್ರಮ ತಡೆಗೆ ಪೊಲೀಸ್ ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗಳAತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನೌಕರರಿಗೂ ಸಮವಸ್ತç, ವಾಕಿಟಾಕಿ ಪೂರೈಸಲಾಗುತ್ತಿದೆ. ನಿವೃತ್ತ ಯೋದರನ್ನು ಈ ಕಾರ್ಯಕ್ಕೆ ನೇಮಿಸಿಕೊಳ್ಳಲಾಗುತ್ತಿದೆ. ಇದರಿಂದ ಅಕ್ರಮ ಮರಳು ತಡೆಗೆ ಅನುಕೂಲವಾಗಲಿದೆ. ಜಿ.ಪಿ.ಎಂ ವ್ಯವಸ್ಥೆ ಸಹ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಗಣಿಗಾರಿಕೆಯಲ್ಲಿ ಸ್ಪೋಟಗೊಂಡು ಆಗುವ ಅನಾಹುತ ತಪ್ಪಿಸುವ ನಿಟ್ಟಿನಲ್ಲಿ ಕಾರ್ಮಿಕರಿಗೆ ಸೂಕ್ತವಾದ ತರಬೇತಿ ನೀಡುವ ಸ್ಕೂಲ್ ಆಪ್ ಮೈನಿಂಗ್ ಕೇಂದ್ರವನ್ನು ಬಳ್ಳಾರಿ ಜಿಲ್ಲೆಯ ಸೊಂಡೂರು ಮತ್ತು ಚಿತ್ರದುರ್ಗದಲ್ಲಿ ನಿರ್ಮಿಸಲಾಗುತ್ತಿದೆ. ಸಂಡೂರಿನಲ್ಲಿ ಈಗಾಗಲೇ ೫೦ ಎಕರೆ ಖರೀದಿಸಲಾಗಿದೆ. ಏಪ್ರೀಲ್ ಮಾಹೆಯಲ್ಲಿ ಭೂಮಿ ಪೂಜೆ ನೆರವೇರಿಸಲಾಗುತ್ತಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕ ರಾಹುಲ್‌ಕುಮಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.

";