ನವದೆಹಲಿ – ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು.
ಕೋರೋನಾದಿಂದ ಬಳಲುತ್ತಿದ್ದ ಅವರು ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 4ನೇ ಬಾರಿಗೆ ಆಯ್ಕೆಯಾಗಿದ್ದ ಅವರು ನರೇಂದ್ರ ಮೋದಿ ಸರಕಾರದಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ನೇಮಕವಾಗಿದ್ದರು.
ರೈಲ್ವೆ ಸಚಿವರಾದ ನಂತರ ಅವರು ಅತ್ಯಂತ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದ್ದರು. ಲೋಕಸಭೆಯ ಅಧಿವೇಶನ ಆರಂಭವಾದ ಸಂದರ್ಭದಲ್ಲಿ ಅವರು ಕೊರೋನಾ ಟೆಸ್ಟ್ ಮಾಡಿಸಿದ್ದರು. ಆಗ ಪಾಸಿಟಿವ್ ಬಂದಿದೆ, ನಾನು ಆರೋಗ್ಯವಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದರು.
ತಾಯಿ, ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರ ಮಗನಿಗೆ ಅಂಗಡಿ ಅವರ ಓರ್ವ ಮಗಳನ್ನು ಕೊಟ್ಟು ವಿವಾಹ ಮಾಡಲಾಗಿದೆ. ಅಂಗಡಿ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು.
ಕೋರೋನಾದಿಂದ ಬಳಲುತ್ತಿದ್ದ ಅವರು ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 4ನೇ ಬಾರಿಗೆ ಆಯ್ಕೆಯಾಗಿದ್ದ ಅವರು ನರೇಂದ್ರ ಮೋದಿ ಸರಕಾರದಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ನೇಮಕವಾಗಿದ್ದರು.
ರೈಲ್ವೆ ಸಚಿವರಾದ ನಂತರ ಅವರು ಅತ್ಯಂತ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದ್ದರು. ಲೋಕಸಭೆಯ ಅಧಿವೇಶನ ಆರಂಭವಾದ ಸಂದರ್ಭದಲ್ಲಿ ಅವರು ಕೊರೋನಾ ಟೆಸ್ಟ್ ಮಾಡಿಸಿದ್ದರು. ಆಗ ಪಾಸಿಟಿವ್ ಬಂದಿದೆ, ನಾನು ಆರೋಗ್ಯವಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದರು.
ತಾಯಿ, ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರ ಮಗನಿಗೆ ಅಂಗಡಿ ಅವರ ಓರ್ವ ಮಗಳನ್ನು ಕೊಟ್ಟು ವಿವಾಹ ಮಾಡಲಾಗಿದೆ.