ಹುಬ್ಬಳ್ಳಿ: ಸಿದ್ದರಾಮಯ್ಯ ಸುಳ್ಳು ಹೇಳೋದನ್ನೇ ಕಾಯಕ ಮಾಡಿಕೊಂಡಿದ್ದು, ಅವರು ಸುಳ್ಳು ರಾಮಯ್ಯ. ನಾನು ನಿನ್ನೆಯಿಂದ ಸಿದ್ದರಾಮಯ್ಯರನ್ನ ಸುಳ್ಳು ರಾಮಯ್ಯ ಎಂದು ಕರೆಯುತ್ತಿದ್ದೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಸಿದ್ದರಾಮಯ್ಯ ಆರ್ಥಿಕ ದುಸ್ಥಿತಿಗೆ ತಂದು ಕೇಂದ್ರದತ್ತ ಬೊಟ್ಟು ಮಾಡ್ತಿದ್ದಾರೆ ಎಂದು ಕರ್ನಾಟಕ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಚಿವ ಪ್ರಹ್ಲಾದ್ ಜೋಶಿ, ಮೊದಲು NDRF (ನ್ಯಾಷನಲ್ ಡಿಸಾಸ್ಟರ್ ರಿಲೀಫ್ ಫಂಡ್) ಫಂಡ್ನಲ್ಲಿ ಇಷ್ಟು ಪ್ರಮಾಣದ ಹಣ ಕೊಡುತ್ತಿರಲಿಲ್ಲ. ನಾವು ಅಡ್ವಾನ್ಸ್ ಹಣ ಕೊಡ್ತೀದ್ದೇವೆ. ಬಿ.ಎಸ್. ಯಡಿಯೂರಪ್ಪ ಅದೇ ಹಣವನ್ನು ಬರಗಾಲ ಬಂದಾಗ ಹಂಚಿಕೆ ಮಾಡಿದ್ದಾರೆ ಎಂದರು.
ಸಿದ್ದರಾಮಯ್ಯ ಆರ್ಥಿಕ ದುಸ್ಥಿತಿಗೆ ತಂದು ಕೇಂದ್ರದತ್ತ ಬೊಟ್ಟು ಮಾಡ್ತೀದಾರೆ. ನಾವು ಒಂದೇ ಒಂದು ರೂಪಾಯಿ GST ಹಣ ಕೊಡೋದು ಕೂಡ ಬಾಕಿ ಇಲ್ಲ ಎಂದು ಸಿದ್ದರಾಮಯ್ಯನವರ ಆರೋಪಗಳಿಗೆ ಜೋಶಿ ತಿರುಗೇಟು ನೀಡಿದರು.