ಹುಬ್ಬಳ್ಳಿ: ಅಯೋಧ್ಯೆಯಲ್ಲಿ ರಾಮಮಂದಿ ಸುಪ್ರೀಂ ಕೋರ್ಟ್ ಸೂಚಿಸಿದಂತ ಜಾಗದಲ್ಲಿ ಕಟ್ಟಿಲ್ಲ. ರಾಮ ಮಂದಿರ ನಿರ್ಮಾಣ ಮಾಡಿದ್ದರಿಂದ ಬಡತನ ಏನು ನಿರ್ಮೂಲನೆ ಆಗಲ್ಲ ಎಂಬುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ವಿವಾದಾತ್ಮಕ ಹೇಳಿಕೆ ನೀಡಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೇವಲ ರಾಜಕೀಯ ಇಚ್ಛಾಶಕ್ತಿಯ ಕಾರಣಕ್ಕಾಗಿ ರಾಮ ಮಂದಿರವನ್ನು ನಿರ್ಮಾಣ ಮಾಡಲಾಗಿದೆ.ಹೊರತಾಗಿ ಬೇರೆ ಏನೂ ಇಲ್ಲ. ರಾಮ ಮಂದಿರ ನಿರ್ಮಾಣ ಮಾಡಿದ್ದರಿಂದ ಬಡತನ ಏನು ನಿರ್ಮೂಲನೆಯಾಗುವುದಿಲ್ಲ ಎಂಬುದಾಗಿ ತಿಳಿಸಿದರು.
ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಸುಪ್ರೀಂ ಕೋರ್ಟ್ ಸೂಚಿಸಿದಂತ ಜಾಗದಲ್ಲಿ ನಿರ್ಮಾಣ ಮಾಡಲಾಗಿಲ್ಲ. ಮೋದಿ ಸರ್ಕಾರ ಕಳೆದ 10 ವರ್ಷಗಳಲ್ಲಿ ಏನು ಮಾಡಿದೆ ಎಂದು ಪ್ರಶ್ನಿಸಿದಂತ ಅವರು, ಕೇವಲ ರಾಮ, ರಹಿಮ, ಅಪ್ಘಾನಿಸ್ತಾನ, ಪಾಕಿಸ್ತಾನ ಹೆಸರು ಮುಂದೆ ಇಟ್ಟುಕೊಂಡು ಮತ ಕೇಳುವುದಷ್ಟೇ ಮಾಡಿದ್ದಾರೆ ಎಂಬುದಾಗಿ ವಾಗ್ಧಾಳಿ ನಡೆಸಿದರು.
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಹೊತ್ತಿನಲ್ಲೇ ರಾಮಮಂದಿರ ವಿಚಾರ ಇಟ್ಟುಕೊಂಡು ಮತ ಕೇಳೋದಕ್ಕಷ್ಟೇ ರಾಮಮಂದಿರ ನಿರ್ಮಾಣ ಮಾಡಲಾಗಿದೆ. ಹೊರತಾಗಿ ಬೇರೆ ಏನೂ ಇಲ್ಲ ಎಂಬುದಾಗಿ ಸೂಚಿಸಿದರು.