This is the title of the web page
This is the title of the web page

Live Stream

September 2024
S M T W T F S
1234567
891011121314
15161718192021
22232425262728
2930  

| Latest Version 9.4.1 |

State News

ದಲಿತ ಮುಖ್ಯಮಂತ್ರಿಗಾಗಿ ಇಂದು ನಿನ್ನೆಯದಲ್ಲ, ದಶಕಗಳಿಂದ ನಡೆದುಕೊಂಡು ಬಂದಿದೆ:ಸಚಿವ ಸತೀಶ್ ಜಾರಕಿಹೊಳಿ

ದಲಿತ ಮುಖ್ಯಮಂತ್ರಿಗಾಗಿ ಇಂದು ನಿನ್ನೆಯದಲ್ಲ, ದಶಕಗಳಿಂದ ನಡೆದುಕೊಂಡು ಬಂದಿದೆ:ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ದಲಿತ ಮುಖ್ಯಮಂತ್ರಿಗಾಗಿ ಇಂದು ನಿನ್ನೆಯದಲ್ಲ, ದಶಕಗಳಿಂದ ನಡೆದುಕೊಂಡು ಬಂದಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಈ ವಿಷಯದಲ್ಲಿ ತಮ್ಮ ಪಕ್ಷ 99 ರವರೆಗೆ ಬಂದು ಔಟಾಗಿಬಿಡುತ್ತದೆ, ಸೆಂಚುರಿ ಬಾರಿಸಲ್ಲ ಎಂದು ನಗುತ್ತಾ ಹೇಳಿದರು.

ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವ ಆಕಾಂಕ್ಷೆಯನ್ನು ಮತ್ತೊಮ್ಮೆ ತೇಲಿಬಿಟ್ಟಿರುವುದರಿಂದ ದಲಿತ ಸಿಎಂ ವಿಷಯವನ್ನು ಮುನ್ನೆಲೆಗೆ ತರಲಾಗಿದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸತೀಶ್ ಅದಕ್ಕೂ ಇದಕ್ಕೂ ಸಂಬಂಧವಿಲ್ಲ ಎಂದರು.

ಮಲ್ಲಿಕಾರ್ಜುನ ಖರ್ಗೆ ಅವರು ಕಳೆದ 20-25 ವರ್ಷಗಳಿಂದ ಮುಖ್ಯಮಂತ್ರಿಯಾಗುವ ಕನಸು ಹೊತ್ತಿದ್ದು, ಈ ವಿಷಯವೇ ಬೇರೆ. ಆದರೆ ಇದು ಕಾಂಗ್ರೆಸ್ ಪಕ್ಷಕ್ಕೆ ಚುನಾವಣಾ ವಿಷಯವಲ್ಲ ಮತ್ತು ಚುನಾವಣಾ ಸಮಯದಲ್ಲಿ ಇದನ್ನು ಪ್ರಸ್ತಾಪಿಸಬಾರದಿತ್ತು ಎಂದ ಅವರು ರಾಜಕೀಯದಲ್ಲಿ ಕುತಂತ್ರ ಹೊಸದಲ್ಲ, ಅಸಲಿಗೆ ರಾಜಕೀಯವೆಂದರೆ ಕುತಂತ್ರ, ಒಬ್ಬರು ಮತ್ತೊಬ್ಬರನ್ನು ತುಳಿಯುವುದು ಎಲ್ಲ ಪಕ್ಷಗಳಲ್ಲಿ ನಡೆಯುತ್ತದೆ ಅಂತ ಹೇಳಿದರು.

";