ಇಳಕಲ್ ಸಾರ್ವಜನಿಕ ಆಸ್ಪತ್ರೆಯಲ್ಲಿ
ಮಕ್ಕಳ ಆರೋಗ್ಯದ ದೃಷ್ಟಿಯಿಂದ ನೂತನವಾಗಿ ಜಾರಿಗೆ ತಂದ *ಮಿಷನ್ ಇಂದ್ರ ಧನುಷ್ ಲಸಿಕೆ 5.0* ಯೋಜನೆಯನ್ನು ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರಾದ *ಶ್ರೀ ವಿಜಯಾನಂದ ಎಸ್ ಕಾಶಪ್ಪನವರ* ಸೋಮವಾರದಂದು *ಚಾಲನೆ ನೀಡಿದರು*.
ಈ ಸಂದರ್ಭದಲ್ಲಿ ಮಾತನಾಡಿದ ಅವರು ರಾಜ್ಯ ಸರಕಾರ ಮಕ್ಕಳ ಆರೋಗ್ಯದ ಬಗ್ಗೆ ತೀವ್ರ ಕಾಳಜಿಯನ್ನು ಹೊಂದಿದ್ದು ಅದಕ್ಕಾಗಿ ಈ ಯೋಜನೆಯನ್ನು ಜಾರಿಗೆ ತಂದಿದೆ. ವೈದ್ಯರು ತಮ್ಮಲ್ಲಿ ಬರುವ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಬೇಕು ರೋಗಿಗಳು ಸಹ ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು .
ಕಾರ್ಯಕ್ರಮದಲ್ಲಿ ಮುಖ್ಯ ವೈದ್ಯಾಧಿಕಾರಿಗಳು, ನಗರಸಭೆಯ ಸದಸ್ಯರು ಹಾಗೂ ಆಸ್ಪತ್ರೆಯ ವೈದ್ಯರು ಉಪಸ್ಥಿತರಿದ್ದರು.