This is the title of the web page
This is the title of the web page

Live Stream

June 2024
S M T W T F S
 1
2345678
9101112131415
16171819202122
23242526272829
30  

| Latest Version 9.4.1 |

State News

ಬಿಜೆಪಿಯವರಿಗೆ ಮೋದಿಯೇ ಬಂಡವಾಳ : ಸಿಎಂ ಸಿದ್ದರಾಮಯ್ಯ

ಮಂಗಳೂರು: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದಲೇ ಗೆದ್ದು ಹೋಗಿ ಅನ್ಯಾಯ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ನಗರದ ಅಡ್ಯಾರ್​ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ನಡೆದ ಕಾಂಗ್ರೆಸ್​ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ಮೋದಿಯೇ ಬಂಡವಾಳ. ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕ ಜನ ಮೋದಿ ಮಾತು ಕೇಳಿಲ್ಲ. ಸಬ್​ಕಾ ಸಾಥ್, ಸಬ್​ಕಾ ವಿಕಾಸ್ ಎಲ್ಲೋಯ್ತು. ಟೋಪಿ ಹಾಕೊಂಡವರು ಕಚೇರಿಗೆ ಬರ್ಬೇಡಿ ಅಂತಾ ಯತ್ನಾಳ್ ಹೇಳುತ್ತಾರೆ ಎಂದರು.

ಮೋದಿ ಪ್ರಧಾನಮಂತ್ರಿ ಆದ ಮೇಲೆ ಬಡವರ ಮೇಲೆ ತೆರಿಗೆ ಹಾಕಿದ್ದು, ನಮ್ಮ ಸರ್ಕಾರ ಬಸವ, ಬುದ್ಧ, ಗಾಂಧಿ, ಅಂಬೇಡ್ಕರ್ ವಿಚಾರದಂತೆ ನಡಿತಿದೆ. ಈ ದೇಶಕ್ಕೆ ಸ್ವಾತಂತ್ರ್ಯ ತಂದು‌ಕೊಟ್ಟವರು ಕಾಂಗ್ರೆಸ್​ನವರು. ನರೇಂದ್ರ ಮೋದಿ ಅಥವಾ ಅಡ್ವಾಣಿ ‌ನೇತೃತ್ವದಲ್ಲಿ ಸ್ವಾತಂತ್ರ್ಯ ಬಂದಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ಪ್ರಧಾನಿ ಮೋದಿ ಕೊಟ್ಟ ಮಾತಿನಂತೆ ನಡೆದುಕೊಳ್ಳುವುದಿಲ್ಲ. ಮೋದಿಯಷ್ಟು ಸುಳ್ಳು ಹೇಳುವ ಬೇರೆ ಪ್ರಧಾನಿಯನ್ನು ನಾನು ನೋಡಿಲ್ಲ. ಸ್ವತಂತ್ರ ಭಾರತದಲ್ಲಿ ಇವರಷ್ಟು ಸುಳ್ಳು ಹೇಳುವವರನ್ನು ನೋಡಿಲ್ಲ. ಗ್ಯಾರಂಟಿ ಯೋಜನೆಗೆ 52 ಸಾವಿರ ಕೋಟಿ ರೂ. ಹಣ ಮೀಸಲಿಟಿದ್ದೇವೆ ಎಂದು ಕಿಡಿಕಾರಿದರು.