This is the title of the web page
This is the title of the web page

Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

National News

ಇಂದು ಕೇರಳದಲ್ಲಿ ಮೂರು ಪ್ರಮುಖ ಬಾಹ್ಯಾಕಾಶ ಮೂಲಸೌಕರ್ಯ ಯೋಜನೆಗಳಿಗೆ ಚಾಲನೆ ನೀಡಿದ ಮೋದಿ

ಇಂದು ಕೇರಳದಲ್ಲಿ ಮೂರು ಪ್ರಮುಖ ಬಾಹ್ಯಾಕಾಶ ಮೂಲಸೌಕರ್ಯ ಯೋಜನೆಗಳಿಗೆ ಚಾಲನೆ ನೀಡಿದ ಮೋದಿ

ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇರಳದಲ್ಲಿ ಮೂರು ಪ್ರಮುಖ ಬಾಹ್ಯಾಕಾಶ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ PSLV ಇಂಟಿಗ್ರೇಷನ್ ಫೆಸಿಲಿಟಿ, ಮಹೇಂದ್ರಗಿರಿಯಲ್ಲಿರುವ ಇಸ್ರೋ ಪ್ರೊಪಲ್ಷನ್ ಕಾಂಪ್ಲೆಕ್ಸ್‌ನಲ್ಲಿ ಹೊಸ ‘ಸೆಮಿ-ಕ್ರಯೋಜೆನಿಕ್ಸ್ ಇಂಟಿಗ್ರೇಟೆಡ್ ಇಂಜಿನ್ ಮತ್ತು ಸ್ಟೇಜ್ ಟೆಸ್ಟ್ ಸೌಲಭ್ಯ’, ತಿರುವನಂತಪುರದ VSSC ನಲ್ಲಿ ‘ಟ್ರೈಸಾನಿಕ್ ವಿಂಡ್ ಟನಲ್’ ಈ ಮೂರು ಯೋಜನೆಗಳಿಗೆ ಮೋದಿ ಚಾಲನೆ ನೀಡಿದ್ದು, ಪ್ರಸ್ತುತ ಯೋಜನೆಗಳನ್ನ ಸುಮಾರು 1,800 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ.

ಗಗನ್‌ಯಾನ್ ಮಿಷನ್‌ನ ಪ್ರಗತಿಯನ್ನು ಪರಿಶೀಲಿಸಿದ ಪ್ರಧಾನಿ ದೇಶದ ಮೊದಲ ಮಾನವ ಬಾಹ್ಯಾಕಾಶ ಯಾನಕ್ಕಾಗಿ ತರಬೇತಿ ಪಡೆಯುತ್ತಿರುವ ನಾಲ್ಕು ಗಗನಯಾತ್ರಿಗಳ ಹೆಸರನ್ನು ಘೋಷಿಸಿದ್ದು, ಕೇರಳ ರಾಜ್ಯದ ರಾಜಧಾನಿ ಬಳಿಯ ತುಂಬಾದಲ್ಲಿರುವ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ಮೋದಿ ಈ ಹೆಸರು ಘೋಷಿಸಿ, ಈ ಅವರು ನಾಲ್ವರಿಗೆ ಮೋದಿ ನೀಡಿದ್ದಾರೆ. ‘

ಅವರು ಕೇವಲ 4 ಹೆಸರುಗಳು ಅಥವಾ 4 ಮನುಷ್ಯರಲ್ಲ, 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಬಾಹ್ಯಾಕಾಶಕ್ಕೆ ಕೊಂಡೊಯ್ಯಲು ಹೊರಟಿರುವ ನಾಲ್ಕು ಶಕ್ತಿಗಳು. 40 ವರ್ಷಗಳ ನಂತರ ಭಾರತೀಯನೊಬ್ಬ ಬಾಹ್ಯಾಕಾಶಕ್ಕೆ ಹೋಗುತ್ತಿದ್ದಾನೆ’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಗಗನ್‌ಯಾನ್ ಮಿಷನ್ ಭಾರತದ ಮೊದಲ ಮಾನವ ಬಾಹ್ಯಾಕಾಶ ಹಾರಾಟ ಕಾರ್ಯಕ್ರಮವಾಗಿದ್ದು, ಇದಕ್ಕಾಗಿ ವಿವಿಧ ಇಸ್ರೋ ಕೇಂದ್ರಗಳಲ್ಲಿ ವ್ಯಾಪಕ ಸಿದ್ಧತೆಗಳು ನಡೆಯುತ್ತಿದ್ದು, ಕೇರಳದ ತಿರುವನಂತಪುರಂನಲ್ಲಿರುವ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ ಜತೆ ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್, ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಕೇರಳ ಸಿಎಂ ಪಿಣರಾಯಿ ವಿಜಯನ್, ಎಂಒಎಸ್ ಮುರಳೀಧರನ್ ಕೂಡಾ ಇದ್ದರು. ಈ ಸಂದರ್ಭದಲ್ಲಿ ಇಸ್ರೋ ಅಧ್ಯಕ್ಷ ನರೇಂದ್ರ ಮೋದಿ ಅವರನ್ನು ಸನ್ಮಾನಿಸಿದ್ದಾರೆ.

Nimma Suddi
";