ಮೋದಿ, ಮೋದಿ.. ಏನ್ ಮೋದಿ ಇಲ್ಲಿ ಬಂದು ಆಳ್ತಾನಾ?:ಖರ್ಗೆ.
ನಿಮ್ಮ ಸುದ್ದಿ ತುಮಕೂರು
ಬಿಜೆಪಿ ಶಾಸಕರ ಮನೆಯಲ್ಲಿ (ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಪುತ್ರನ ಮನೆಯಲ್ಲಿ) ಕೋಟಿ ಕೋಟಿ ಹಣ ಪತ್ತೆಯಾಗಿದೆ. ಅಮಾಯಕರ ಮೇಲೆ ದಾಳಿ ಮಾಡುವ ಇಡಿ, ಐಟಿ ಈಗ ಎಲ್ಲಿ ಹೋಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ.
ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಹೆದರಿಸಿ, ಬೆದರಿಸಿ ಆಳುವ ಕೆಲಸ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಒಂದಾದರೂ ನೀರಾವರಿ ಯೋಜನೆ ಜಾರಿಗೆ ತಂದಿದ್ದಾರಾ? ಹೇಮಾವತಿ ನೀರು ಹರಿಸಿದ್ದು ಪ್ರಧಾನಿ ನರೇಂದ್ರ ಮೋದಿನಾ? ಎಂದು ಪ್ರಶ್ನಿಸಿದರು.
ಇನ್ನು, ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕರ್ನಾಟಕಕ್ಕೆ ಮೋದಿ, ಅಮಿತ್ ಶಾ, ಜೆಪಿ ನಡ್ಡಾ ಅವರು ಮೇಲಿಂದ ಮೇಲೆ ಬರುತ್ತಿದ್ದಾರೆ. ಪಕ್ಷಗಳ ಸಭೆಗಳನ್ನು ನಡೆಸಿ ಸಂಘಟನೆ ಬಗ್ಗೆ ಚರ್ಚಿಸುತ್ತಿದ್ದಾರೆ. ವಿವಿಧ ಕಾರ್ಯಕ್ರಮಗಳನ್ನು ಉದ್ಘಾಟಿಸುತ್ತಿದ್ದಾರೆ. ಈ ಬಗ್ಗೆ ಟೀಕಿಸಿದ ಖರ್ಗೆ, ಪಂಚಾಯಿತಿ ಚುನಾವಣೆಗೂ ಮೋದಿ, ಜಿಲ್ಲಾ ಪಂಚಾಯಿತಿ ಎಲೆಕ್ಷನ್‌ಗೂ ಮೋದಿ. ವಿಧಾನಸಭೆ, ಲೋಕಸಭೆ ಚುನಾವಣೆಗೂ ಮೋದಿ. ಏನ್ ಮೋದಿ ಬಂದು ಇಲ್ಲಿ ಆಳುತ್ತಾನಾ? ನರೇಂದ್ರ ಮೋದಿ ಶೇಕಡಾ ೫೧ರಷ್ಟು ಮತ ಪಡೆದು ಅಧಿಕಾರಕ್ಕೆ ಬಂದಿಲ್ಲ. ಶೇ. 60.3ರಷ್ಟು ಜನರು ಪ್ರಧಾನಿ ಮೋದಿ ವಿರುದ್ಧ ಇದ್ದಾರೆ ಎಂದರು.