ಬೆಳಗಾವಿ: . ರಾಜಕೀಯ ಪವರ್ ಸೆಂಟರ್ ಎನಿಸಿಕೊಂಡಿರುವ ಬೆಳಗಾವಿ ಅಖಾಡಕ್ಕೆ ಏಕಕಾಲಕ್ಕೆ ಪ್ರಧಾನಿ ಮೋದಿ ಮತ್ತು ಸಿಎಂ ಸಿದ್ದರಾಮಯ್ಯ ಧುಮುಕಲಿದ್ದಾರೆ ಎಂದು ಮಾಹಿತಿ ತಿಲಿದು ಬಂದಿದೆ.
ಚಿಕ್ಕೋಡಿ ಕ್ಷೇತ್ರ ವ್ಯಾಪ್ತಿಯ ಉಗಾರ್ ಖುರ್ದ್, ಬೆಳಗಾವಿ ಕ್ಷೇತ್ರದ ಯರಗಟ್ಟಿಯಲ್ಲಿ ನಡೆಯುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಿಎಂ ಸಿದ್ದರಾಮಯ್ಯ ಒಂದೇ ದಿನ ಎರಡೂ ಕ್ಷೇತ್ರಗಳಲ್ಲಿ ತಲಾ ಒಂದೊಂದು ಸಮಾವೇಶ ನಡೆಸಲಿದ್ದಾರೆ.
ಏಪ್ರಿಲ್ 28ರ ಬೆಳಿಗ್ಗೆ 11ಕ್ಕೆ ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶ ನಡೆಸಲಿದ್ದು, ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ. ಇದೇ ದಿನದಂದು ಬೆಳಗಾವಿ ಮತ್ತು ಚಿಕ್ಕೋಡಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.
ಬೆಳಗಾವಿ ಕಳೆದ ಎರಡು ದಶಕಗಳಿಂದ ಬಿಜೆಪಿ ಭದ್ರಕೋಟೆಯಾಗಿದೆ. ಇನ್ನು ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲೂ ಬಿಜೆಪಿ ತನ್ನದೆಯಾದ ಪ್ರಭಾವ ಹೊಂದಿದೆ. ಹೀಗಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ಬಾರಿ ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸಲು ಪಣ ತೊಟ್ಟಿದ್ದಾರೆ.
ಈ ಸಂಬಂಧ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರನ್ನು ಕಣಕ್ಕಿಳಿಸಿ, ಬಿಜೆಪಿ ಅಭ್ಯರ್ಥಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಮಣಿಸಲು ರಣತಂತ್ರ ರೂಪಿಸಿದ್ದಾರೆ ಎಂದು ಮಾಹಿತಿ ಕಂಡು ಬಂದಿದೆ.