This is the title of the web page
This is the title of the web page

Live Stream

November 2024
S M T W T F S
 12
3456789
10111213141516
17181920212223
24252627282930

| Latest Version 9.4.1 |

Local NewsState News

ಇಲಾಖೆಯಲ್ಲಿ ಕೆಲಸ ಬಾಕಿ ಇರಕೂಡದು : ಮೊಹಸಿನ್

ಇಲಾಖೆಯಲ್ಲಿ ಕೆಲಸ ಬಾಕಿ ಇರಕೂಡದು : ಮೊಹಸಿನ್

ಬಾಗಲಕೋಟೆ:

ವಿವಿಧ ಇಲಾಖೆಗಳಿಗೆ ಬಿಡುಗಡೆಯಾದ ಅನುದಾನ ಸಂಪೂರ್ಣವಾಗಿ ಭರಿಸುವ ಮೂಲಕ ಇಲಾಖೆಗೆ ಸಂಬಂಧಿಸಿದ ಯಾವುದೇ ಕೆಲಸ ಬಾಕಿ ಉಳಿಸದೇ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ ಮೊಹಸಿನ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯತ ನೂತನ ಸಭಾಭವನದಲ್ಲಿ ಬುಧವಾರ ಜರುಗಿದ ಜಿಲ್ಲಾ ಪಂಚಾಯತ ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಇಲಾಖೆಗೆ ಬರುವ ಪ್ರತಿಯೊಂದು ಅರ್ಜಿಗಳು ಸಕಾಲದಡಿ ಬರುವದರಿಂದ ಪ್ರತಿಯೊಂದು ಕಡತಗಳನ್ನು ನಿಗದಿತ ಅವಧಿಯಲ್ಲಿ ವಿಲೇವಾರಿಯಾಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ತಮ್ಮ ಕೆಳಹಂತದ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಯಾವುದೇ ರೀತಿಯಲ್ಲಿ ಕೆಲಸ ಬಾಕಿ ಇದರಂತೆ ನೋಡಿಕೊಳ್ಳಲು ಸೂಚಿಸಿದರು.

ತಾಲೂಕಾ ಹಾಗೂ ಜಿಲ್ಲಾ ಮಟ್ಟದಲ್ಲಿ ಇತ್ಯರ್ಥವಾಗಬೇಕಾದ ಸಮಸ್ಯೆಗಳು ರಾಜ್ಯಮಟ್ಟದಲ್ಲಿ ಚರ್ಚೆಯಾಗುತ್ತಿವೆ. ಸಮಸ್ಯೆಗೆ ಪರಿಹಾರ ದೊರಕಿಸಿ ಕೊಡುವದಲ್ಲಿ ವಿಫಲರಾಗಿದ್ದಿರಿ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಮುಂದೆ ಈ ರೀತಿಯಾಗದಂತೆ ಬಂದ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿಯೇ ನಿಗದಿತ ಅವಧಿಯಲ್ಲಿ ಬಗೆಹರಿಸಲು ತಿಳಿಸಿದರು.

ಜಿಲ್ಲೆಯಲ್ಲಿ ಇರುವ ಸ್ಕ್ಯಾನಿಂಗ್ ಸೆಂಟರಗಳಿಗೆ ಭೇಟಿ ನೀಡಿದ ವರದಿ ಪರಿಶೀಲಿಸಿದ ಉಸ್ತುವಾರಿ ಕಾರ್ಯದರ್ಶಿಗಳು ಅನಧಿಕೃತ ಸೆಂಟರಗಳ ಮೇಲೆ ಕೇವಲ ನೋಟಿಸ್ ನೀಡಿದರೆ ಸಾಲದು ಅವರ ಮೇಲೆ ಪ್ರಕರಣ ಏಕೆ ದಾಖಲಿಸಲಿಲ್ಲ ಎಂದು ಪ್ರಶ್ನಿಸಿದರು. ಜಿಲ್ಲೆಯಲ್ಲಿರುವ 182 ಸ್ಕ್ಯಾನಿಂಗ್ ಸೆಂಟರಗಳ ಪೈಕಿ 149 ಸೆಂಟರ್‍ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿ 87 ಸೆಂಟರಗಳಿಗೆ ನೋಟಿಸ್ ಮಾತ್ರ ಕೊಟ್ಟಿದ್ದು, ಯಾವುದೇ ಪ್ರಕರಣ ದಾಖಲು ಮಾಡಿರುವದಿಲ್ಲ. ಕೂಡಲೇ ಅಂತವರ ಮೇಲೆ ಪ್ರಕರಣದ ದಾಖಲಿಸಲು ಸೂಚಿಸಿದರು.

ಶಾಲಾ-ಕಾಲೇಜು ಆವರಣದ ಹತ್ತಿರದಲ್ಲಿಯೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ನನ್ನ ಗಮನಕ್ಕೆ ಬಂದಿರುವುದಾಗಿ ಜಿ.ಪಂ ಸಿಇಓ ಶಶೀಧರ ಕುರೇರ ತಿಳಿಸಿದಾಗ ಅಂತಹ ಅಂಗಡಿಗಳನ್ನು ತೆರವುಗೊಳಿಸಲು ಕ್ರಮವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು. ಗಂಗಾ ಕಲ್ಯಾಣ ಯೋಜನೆಯಡಿ ಕೊರೆದ ಬೋರವೆಲ್‍ಗಳಿಗೆ ವಿದ್ಯುದ್ದೀಕರಣಕ್ಕೆ ಕ್ರಮವಹಿಸಲು ತಿಳಿಸಿದರು.

ಅಂಗನವಾಡಿಗಳಿಗೆ ಪೂರೈಕೆಯಾಗುವ ಆಹಾರ ಧಾನ್ಯಗಳ ಬಗ್ಗೆ ಪರಿಶೀಲಿಸಬೇಕು. ಕಳಪೆ ಸರಬರಾಜು ಆಗದಂತೆ ನೋಡಿಕೊಳ್ಳತಕ್ಕದ್ದು. ಸ್ಯಾಂಪಲ್ ಪರೀಕ್ಷೆ ಮಾಡಿ. ಮಕ್ಕಳ ಹಾಜರಾತಿ ತಕ್ಕಂತೆ ಆಹಾರ ಪೂರೈಕೆಯಾದ ಬಗ್ಗೆ ಪರಿಶೀಲನೆ ನಡೆಸಿ, ಆಹಾರ ಬಗ್ಗೆ ಯಾವುದೇ ರೀತಿಯ ದೂರುಗಳು ಬರದ ಹಾಗೆ ನೋಡಿಕೊಳ್ಳಲು ತಿಳಿಸಿದರು. ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳ ಬಯೋಮೆಟ್ರಿಕ್ ಹಾಜರಾತಿಗೆ ಕ್ರಮವಹಿಸಲು ತಿಳಿಸಿದರು. ವಿವಿಧ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು.

ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಮಾತನಾಡಿ ಜಿಲ್ಲೆಯಲ್ಲಿ ಇಂಧನ ಮತ್ತು ಕಂದಾಯ ಇಲಾಖೆ ಸಹಯೋದಲ್ಲಿ ಸೋಲಾರ್ ಪಾವರ್ ಸ್ಟೇಷನ್ ಪ್ರಾರಂಭಿಸಲು ನಿವೇಶನ ಗುರುತಿಸುವ ಪ್ರಕ್ರಿಯೆ ನಡೆದಿದೆ. ಜನತಾ ದರ್ಶನ ಕಾರ್ಯಕ್ರಮದಲ್ಲಿ ಬಂದಂತಹ ಅರ್ಜಿಗಳನ್ನು ಇತ್ಯರ್ಥಪಡಿಸಲಾಗಿ ಶೇ.80 ರಷ್ಟು ವಿಲೇ ಮಾಡಲಾಗಿದೆ. ಬಾಕಿ ಶೇ.20 ರಷ್ಟು ಉಳಿದಿದ್ದು, ತುರ್ತಾಗಿ ವಿಲೇಗೆ ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದರು. ವಸತಿ ನಿಲಯಗಳಲ್ಲಿ ಮಕ್ಕಳ ಮಕ್ಕಳಲ್ಲಿಯೇ ವೈಮನಸ್ಸು ಬರದ ರೀತಿಯಲ್ಲಿ ನಿಲಯ ಮೇಲ್ವಿಚಾರಕರು ಗಮನ ಹರಿಸಲು ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ ತಿಳಿಸಿದರು.

ಸಭೆಯಲ್ಲಿ ಯುಕೆಪಿ ಮಹಾವ್ಯವಸ್ಥಾಪಕ ರಮೇಶ ಕಳಸದ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಅಮರೇಶ ನಾಯಕ, ಜಿ.ಪಂ ಮುಖ್ಯ ಯೋಜನಾಧಿಕಾರಿ ಪುನಿತ್, ಯೋಜನಾಧಿಕಾರಿ ಎನ್.ವಾಯ್.ಬಸರಿಗಿಡದ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Nimma Suddi
";