This is the title of the web page
This is the title of the web page

Live Stream

April 2025
S M T W T F S
 12345
6789101112
13141516171819
20212223242526
27282930  

| Latest Version 9.4.1 |

State News

ಇಂದು ಸಿಎಂ ಸಿದ್ದುಗೆ 150ಕ್ಕೂ ಹೆಚ್ಚು ಶರಣರು, ಸ್ವಾಮೀಜಿಗಳಿಂದ ಸನ್ಮಾನ

ಇಂದು ಸಿಎಂ ಸಿದ್ದುಗೆ 150ಕ್ಕೂ ಹೆಚ್ಚು ಶರಣರು, ಸ್ವಾಮೀಜಿಗಳಿಂದ ಸನ್ಮಾನ

ಬೀದರ್​: ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕನೆಂದು ಘೋಷಿಸಿದ ಚಾರಿತ್ರಿಕ ಸಂಗತಿಗಾಗಿ 160 ಶರಣ ಸ್ವಾಮೀಜಿಗಳು, ಗುರುಗಳು ಹಾಗೂ ವೀರಶೈವ- ಲಿಂಗಾಯತ ಮಠಾಧೀಶರ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯಗೆ ಸನ್ಮಾನಿಸಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.

ವಿಶ್ವ ಬಸವ ಧರ್ಮ ಟ್ರಸ್ಟ್, ಅನುಭವ ಮಂಟಪ – ಬಸವಕಲ್ಯಾಣ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಹಾಗೂ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ ಜಿಲ್ಲೆಯ ಬಸವಕಲ್ಯಾಣ ಪಟ್ಟಣದಲ್ಲಿ ಸನ್ಮಾನಿಸಲಾಗಿದ್ದು, ಹುಬ್ಬಳ್ಳಿಯ ಮೂರುಸಾವಿರ ಮಠದ ಶ್ರೀ ಜಗದ್ಗುರು ಗುರುಸಿದ್ದರಾಜಯೋಗೀಂದ್ರ ಮಹಾಸ್ವಾಮೀಜಿ, ಜಗದ್ಗುರು ಬಸವಜಯಮೃತ್ಯುಂಜಯ ಮಹಾಸ್ವಾಮಿಗಳು, ಜಗದ್ಗುರು ಡಾ.ಮಾತೆ ಗಂಗಾದೇವಿ, ಜಗದ್ಗುರು ಸಿದ್ದರಾಮೇಶ್ವರ ಮಹಾಸ್ವಾಮಿಗಳು, ಷ.ಬ್ರ.ರಾಜೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಸೇರಿ 160 ಮಂದಿ ಶರಣ ಗುರುಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿದ್ದರು.

ಬಸವಕಲ್ಯಾಣ ಅನುಭವ ಮಂಟಪದ ವಿಶ್ವ ಬಸವ ಧರ್ಮ ಟ್ರಸ್ಟ್‍ನ ಅಧ್ಯಕ್ಷ ನಾಡೋಜ ಡಾ. ಬಸವಲಿಂಗ ಪಟ್ಟದೇವರು ಮತ್ತು 150 ಕ್ಕೂ ಹೆಚ್ಚು ಶರಣಗುರುಗಳು, ಸ್ವಾಮೀಜಿಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಹರಸಿದ್ದು,ಬಳಿಕ ಮಾತನಾಡಿದ ನಾಡೋಜ ಡಾ. ಬಸವಲಿಂಗ ಪಟ್ಟದೇವರು, ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಕಡ್ಡಾಯಗೊಳಿಸಿದ್ದು ಏಕೈಕ ನಾಯಕ ಸಿದ್ದರಾಮಯ್ಯ.

ಮಹಿಳಾ ವಿವಿಗೆ ಅಕ್ಕ ಮಹಾದೇವಿ ಹೆಸರಿಟ್ಟಿದ್ದು ಏಕೈಕ ನಾಯಕ ಸಿದ್ದರಾಮಯ್ಯ. ಬಸವ ತತ್ವದ ಆಧಾರದಲ್ಲಿ ಅನ್ನ ಭಾಗ್ಯ ಸೇರಿ ಹಲವು ಭಾಗ್ಯಗಳನ್ನು ಕೊಟ್ಟಿದ್ದೇನೆ ಎಂದು ಸಾರಿದವರು ಏಕೈಕ ನಾಯಕ ಸಿದ್ದರಾಮಯ್ಯ ಅವರು ಎಂದು ತಿಳಿಸಿದರು.

Nimma Suddi
";