ಧಾರವಾಡ: ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ವಿರುದ್ಧ ಹೋರಾಟವನ್ನ ಈಗ ಆರಂಭ ಮಾಡಿದ್ದೇನೆ ನ್ಯಾಯ ಸಿಗುವವರೆಗೂ ನಾನು ಕೊರಳಲ್ಲಿ ಮಾಲೆ ಹಾಕುವುದಿಲ್ಲ ಎಂದು ದಿಂಗಾಲೇಶ್ವರ ಶ್ರೀಗಳು ಶಪಥ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ನಗರದ ಸೇವಾಲಯದಲ್ಲಿ ಮಂಗಳವಾರ ನಡೆದ ಭಕ್ತರ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಈಗಾಗಲೇ ನಮ್ಮ ನಿಲುವು ಕೇಂದ್ರದವರೆಗೂ ಮುಟ್ಟಿದೆ ಎಂದು ಹೇಳಿದರು.
ನನ್ನ ಹೋರಾಟಕ್ಕೆ ನ್ಯಾಯ ಸಿಗುವವರೆಗೂ ನಾನಿರುವ ವೇದಿಕೆಯಲ್ಲಿ ಮಾಲೆ ಹಾಕಲು ಬೀಡುವದಿಲ್ಲ. ಗುರಿ ಮುಟ್ಟುವವರೆಗೂ ರಾಜ್ಯದ ಜನತೆ ನನಗೆ ಮಾಲೆ ಹಾಕಬೇಡಿ ಎಂದು ಭಕ್ತರಿಗೆ ತಿಳಿಸಿದರು.
ನನ್ನ ಹೋರಾಟ ಈಗಿನಿಂದ ಆರಂಭವಾಗಿಲ್ಲ, ಮೊದಲನೆಯ ಹೋರಾಟ ಐದು ವರ್ಷ ಮುಗುವಿದ್ದಾಗ ಮೊದಲು ತಾಯಿಯೊಂದಿಗೆ ಹೋರಾಟ ಮಾಡಿದವನು ನಾನು. ನಾನೂ ಹತ್ತು ವರ್ಷದವನು ಇದ್ದಾಗ ಹೋರಾಟ ಮಾಡಿ ಮನೆ ಬಿಟ್ಟು, ಸನ್ಯಾಸಿ ಆದವನು ವ್ಯಕ್ತಿಯ ಹಿತಕ್ಕಾಗಿ ಹೋರಾಟ ಮಾಡಿದವನು ನಾನಲ್ಲ ಎಂದರು.
ವೀರಶೈವ ಲಿಂಗಾಯತ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದವನು ನಾನು. ಲಿಂಗಾಯತ ಮತ್ತು ವೀರಶೈವ ಬೇರೆ ಬೇರೆ ಎಂದು ಹೋರಾಟ ಮಾಡುತ್ತಿದ್ದಾಗ, ಅವೆರಡೂ ಒಂದೇ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡಿದ್ದೆ. ಯಡಿಯೂರಪ್ಪನವರನ್ನ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದಾಗ ಬಿಜೆಪಿ ಹೈಕಮಾಂಡ್ ವಿರುದ್ಧ ಹೋರಾಟ ಮಾಡಿದ್ದೆ. ಹಿಂದಿನ ಸರ್ಕಾರದಲ್ಲಿ 40% ಕಮಿಷನ್ ವಿರುದ್ಧ ಹೋರಾಟ ಮಾಡಿದ್ದೆ ಎಂದರು.