ಬಾಗಲಕೋಟೆ
ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಸಚಿವ ಮುರುಗೇಶ್ ನಿರಾಣಿ ಅವರಿಗೆ ಮಾತೃ ವಿಯೋಗ.
ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರಾಣಿ ಅವರ ತಾಯಿ ಸುಶಿಲಾಬಾಯಿ(೭೮) ವಿಧಿವಶರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ವಿಧಿವಶರಾಗಿದ್ದಾರೆ.
ಪತಿ ರುದ್ರಪ್ಪ ನಿರಾಣಿ,ಐವರು ಗಂಡುಮಕ್ಕಳು,ಇಬ್ಬರು ಹೆಣ್ಣುಮಕ್ಕಳು,ಐವರು ಸೊಸೆಯಂದಿರು ೧೪ ಜನ ಮೊಮ್ಮಕ್ಕಳನ್ನು ಅಗಲಿದ್ದಾರೆ.
ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಬಸವಹಂಚಿನಾಳ ಗ್ರಾಮದಲ್ಲಿ ನೆಲೆಸಿದ್ದರು.ಇಂದು ಮಧ್ಯಾಹ್ನ 1 ಗಂಟೆಗೆ ಸ್ವಗ್ರಾಮ ಬಸವಹಂಚಿನಾಳದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.