ಮಂಡ್ಯ: ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ ಪರ ಎಡೆಬಿಡದೆ ಪ್ರಚಾರ ಮಾಡುತ್ತಿರುವ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಚಂದ್ರು ನಾಗಮಂಗಲದವರಾಗಿರುವುದರಿಂದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ ಎಂದು ಹೇಳಿದರು.
ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಹೆಣ್ಣುಮಕ್ಕಳ ಬಗ್ಗೆ ಹಗುರವಾಗಿ ಮಾತಾಡಿರುವುದನ್ನು ಪ್ರಸ್ತಾಪಿಸಿದ ಚಲುವರಾಯಸ್ವಾಮಿ, ಅವರು ಬಳಸಿರುವ ಭಾಷೆ ಸಂಸ್ಕಾರವಂತರು ಬಳಸುವ ಭಾಷೆ ಅಲ್ಲ ಎಂದರು.
ಹಿಂದೆ ಒಬ್ಬ ರೈತಮಹಿಳೆಯ ಬಗ್ಗೆಯೂ ಅವರು ಅವಹೇಳನಕಾರಿಯಾಗಿ ಮಾತಾಡಿದ್ದರು, ಒಬ್ಬ ಮಾಜಿ ಮುಖ್ಯಮಂತ್ರಿಯಾಗಿ ಹೀಗೆ ಸಂಸ್ಕಾರಹೀನರಾಗಿ ಮಾತಾಡುವುದು ಎಷ್ಟರಮಟ್ಟಿಗೆ ಸರಿ ಅನ್ನೋದನ್ನು ಅವರೇ ಯೋಚನೆ ಮಾಡಬೇಕು ಎಂದು ಹೇಳಿದರು.
ಕ್ಷೇತ್ರದ ಎಲ್ಲ ಭಾಗಗಳಲ್ಲಿ ಈಗಾಗಲೇ ಎರಡೆರಡು ಸಲ ಪ್ರಚಾರ ಮಾಡಲಾಗಿದೆ ಮತ್ತು 17 ರಂದು ರಾಹುಲ್ ಗಾಂಧಿಆಗಮಿಸಲಿದ್ದಾರೆ ಎಂದು ಹೇಳಿದ ಸಚಿವ, ಅದಾದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಚಾರಕ್ಕೆ ಅಗಮಿಸಲಿದ್ದಾರೆ ಎಂದು ವಿವರಿಸಿದರು.