*ನಾಡು* *-* *ನುಡಿ ಬಿಂಬಿಸುವ* *ಲಾಂಛನ* ( *ಲೋಗೋ* ) *ಮಾದರಿ* *ಆಹ್ವಾನ*
ಬಾಗಲಕೋಟೆ :
ಕರ್ನಾಟಕ ಸಂಭ್ರಮ 50 ರ ಕಾರ್ಯಕ್ರಮ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕನ್ನಡ ನಾಡು-ನುಡಿ ಹಾಗೂ ಸಂಸ್ಕೃತಿ ಬಿಂಬಿಸುವ ಲಾಂಛನ (ಲೋಗೋ) ಮಾದರಿಗಳನ್ನು ಆಹ್ವಾನಿಸಿದೆ.
ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷ ಪೂರ್ಣಗೊಳ್ಳಲಿರುವ ಸುವರ್ಣ ಮಹೋತ್ಸವದ ಸುಸಂದರ್ಭದಲ್ಲಿ ಕರ್ನಾಟಕ ಸಂಭ್ರಮ 50 ಹೆಸರಾಗಲಿ ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಶೀರ್ಷಿಕೆಯಡಿ ರಾಜ್ಯಾದ್ಯಂತ ವರ್ಷಪೂರ್ತಿ ವೈವಿಧ್ಯಮಯವಾಗಿ ವರ್ಣಮಯವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಇದಕ್ಕೂಂದು ವಿಶೇಷ ಮೆರುಗು ನೀಡಲು ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಉದ್ದೇಶಿಸಿದೆ.
ಈ ಕಾರ್ಯಕ್ರಮದ ಸಂಭ್ರಮವನ್ನು ಹೆಚ್ಚಿಸಲು ಕನ್ನಡ ನಾಡು-ನುಡಿ ಸಂಸ್ಕೃತಿಯನ್ನು ಬಿಂಬಿಸುವ ವಿಶಿಷ್ಟವಾದ ಲಾಂಛನ (ಲೋಗೋ)ವನ್ನು ಬಳಸಲು ತೀರ್ಮಾನಿಸಲಾಗಿದ್ದು, ಆಸಕ್ತರು ಸುಂದರವಾದ ಲಾಂಛನ (ಲೋಗೋ)ದ ಮಾದರಿಗಳನ್ನು ಕಳುಹಿಸಬಹುದು. ಆಯ್ಕೆಯಾಗುವ ಮಾದರಿ ಲಾಂಛನಕ್ಕೆ 25,000 ರೂ.ಗಳ ಬಹುಮಾನವನ್ನು ನಿಗದಿಪಡಿಸಲಾಗಿದೆ.
ಲಾಂಛನ (ಲೋಗೋ)ದ ಮಾದರಿಯನ್ನು ಕಳುಹಿಸಲು 2023ರ ಸೆಪ್ಟೆಂಬರ್ 20 ರಿಂದ ಸೆಪ್ಟೆಂಬರ್ 30ರ ವರೆಗೆ ಅವಕಾಶವಿದ್ದು, ಆಸಕ್ತರು ಈ ಕುರಿತು ಅಗತ್ಯ ಮಾಹಿತಿಗಳನ್ನು ಇಲಾಖೆಯ ಜಾಲತಾಣ https:www.kannadasiri.karnataka.gov.in ದಲ್ಲಿ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ