This is the title of the web page
This is the title of the web page

Live Stream

July 2025
S M T W T F S
 12345
6789101112
13141516171819
20212223242526
2728293031  

| Latest Version 9.4.1 |

State News

ಫೆ.17, 18ಕ್ಕೆ ರಾಷ್ಟ್ರೀಯ ಬಿಜೆಪಿ ಕಾರ್ಯಕಾರಿಣಿ ಸಭೆ

ಫೆ.17, 18ಕ್ಕೆ ರಾಷ್ಟ್ರೀಯ ಬಿಜೆಪಿ ಕಾರ್ಯಕಾರಿಣಿ ಸಭೆ

ಬೆಂಗಳೂರು, ಫೆ.8: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಏರಲು ಬಿಜೆಪಿ ದೇಶಾದ್ಯಂತ ಕಾರ್ಯಚಟುವಟಿಕೆಯನ್ನು ಆರಂಭಿಸಿದೆ. ಭೂತ್ ಮಟ್ಟದಲ್ಲಿ ಸಂಘಟನಾ ಕಾರ್ಯ ನಡೆಸಲಾಗುತ್ತಿದೆ.

ದೆಹಲಿಯಲ್ಲಿ ಫೆಬ್ರವರಿ 17 ರಿಂದ ಎರಡು ದಿನಗಳ ಕಾಲ ಬಿಜೆಪಿ ಕಾರ್ಯಕಾರಿಣಿ ಸಭೆ ಆಯೋಜಿಸಲಾಗಿದ್ದು, ಪ್ರತಿ ರಾಜ್ಯದ ನಾಯಕರನ್ನು ಆಹ್ವಾನಿಸಲಾಗಿದೆ.ದೆಹಲಿಯ ಭಾರತ ಮಂಟಪದಲ್ಲಿ ನಡೆಯುವ ಕಾರ್ಯಕಾರಿಣಿ ಸಭೆಗೆ ಎಲ್ಲಾ ರಾಜ್ಯಗಳ ಬಿಜೆಪಿ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು, ಮಾಜಿ ಸಂಸದರು, ಮಾಜಿ ಶಾಸಕರು, ಪದಾಧಿಕಾರಿಗಳಿಗೂ ಆಹ್ವಾನ ನೀಡಲಾಗಿದೆ.

ಸಭೆಯ ಮೊದಲ ದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭಾಷಣ ಮಾಡಲಿದ್ದು, ಕೊನೆಯ ದಿನ ಕಾರ್ಯಕರ್ತ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದು, ಕಾರ್ಯಕಾರಿಣಿ ಸಭೆಗೂ ಒಂದು ದಿನ ಮುನ್ನ ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ನಿಗದಿಯಾಗಿದ್ದು, ಪ್ರಧಾನ ಕಾರ್ಯದರ್ಶಿಗಳು, ಕೋಶಗಳ ಸಂಚಾಲಕರು, ಎಲ್ಲಾ ಮೋರ್ಚಾಗಳ ಅಧ್ಯಕ್ಷರು, ಪುರಸಭೆಗಳು, ನಗರ ಪಂಚಾಯಿತಿಗಳು ಮತ್ತು ಜಿಲ್ಲಾ ಪಂಚಾಯಿತಿ ಸದಸ್ಯರನ್ನು ಸಭೆಗೆ ಆಹ್ವಾನಿಸಲಾಗಿದೆ ಎಂದು ಮಾಹಿತಿ ಬಂದಿಂದೆ.
.

Nimma Suddi
";