This is the title of the web page
This is the title of the web page

Live Stream

December 2024
S M T W T F S
1234567
891011121314
15161718192021
22232425262728
293031  

| Latest Version 9.4.1 |

State News

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

ವಸತಿ ನಿಲಯದ ಹೆಣ್ಣುಮಕ್ಕಳೊಂದಿಗೆ ಸಿಇಒ ಚರ್ಚೆ

ನಿಮ್ಮ ಸುದ್ದಿ ಬಾಗಲಕೋಟೆ

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಂಡ ಕಾಫಿಯೊಂದಿಗೆ ಚರ್ಚೆಯಲ್ಲಿ ಜಿ.ಪಂ ಸಿಇಓ ಟಿ.ಭೂಬಾಲನ್ ಅವರು ಜಿಲ್ಲೆಯ ವಿವಿಧ ವಸತಿ ನಿಲಯದ ಹೆಣ್ಣು ಮಕ್ಕಳೊಂದಿಗೆ ಚರ್ಚೆ ನಡೆಸಿದರು.

ಪಿಂಕ್ ಕಲರ ಬಲೂನ್‍ಗಳಿಂದ ಶೃಂಗಾರಗೊಂಡ ಸಭಾಭವನದಲ್ಲಿ ಜಿ.ಪಂ ಸಿಇಓ ಅವರ ನೇತೃತ್ವದಲ್ಲಿ ನಡೆದ ಕಾಫಿಯೊಂದಿಗೆ ಚರ್ಚೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ನಿಲಯದ ಹೆಣ್ಣು ಮಕ್ಕಳು ಹಾಗೂ ವಿವಿಧ ಇಲಾಖೆಯ ಮಹಿಳಾ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಾರಂಭದಲ್ಲಿ ಜಿ.ಪಂ ಉಪಕಾರ್ಯದರ್ಶಿ ಎನ್.ವಾಯ್.ಬಸರಿಗಿಡದ ಜಿಲ್ಲಾ ಪಂಚಾಯತಿಯಲ್ಲಿ ಬರುವ ಹುದ್ದೆಗಳು, ಇಲಾಖೆಯ ಕಾರ್ಯವೈಖರಿ ಸೇರಿದಂತೆ ವಿವಿಧ ಸೌಲಭ್ಯಗಳ ಮಾಹಿತಿಯನ್ನು ವಿದ್ಯಾರ್ಥಿಗಳಿಗೆ ನೀಡಿದರು.

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಜನವರಿ 24 ರಿಂದ ಮಾರ್ಚ 8 ವರೆಗೆ 6 ತಿಂಗಳುಗಳ ಕಾಲ ಅಭಿಯಾನದಂತೆ ಆಚರಿಸಲು ಉದ್ದೇಶಿಸಲಾಗಿದೆ. ಈ ಅಭಿಯಾನದಲ್ಲಿ ಹೆಣ್ಣು ಮಕ್ಕಳ ಗುಣಮಟ್ಟದ ಶಿಕ್ಷಣ, ಜೀವನ ಕೌಶಲ್ಯ ಶಿಕ್ಷಣ, ವೃತ್ತಿ ಆಧಾರಿತ ಶೈಕ್ಷಣಿಕ ಆಯ್ಕೆಗಳು ಮತ್ತು ಪೂರ್ವಾಗ್ರಹದಿಂದ ಮುಕ್ತವಾಗಿ ಸಮಾನ ಅವಕಾಶದೊಂದಿಗೆ ವಿದ್ಯಾವಂತ ವೃತ್ತಿಪರರಾಗಲು ಯುವತಿಯರನ್ನು ಬೆಂಬಲಿಸುವ ಪ್ರತಿಜ್ಞೆಯನ್ನು ಕೈಗೊಳ್ಳಲು ಉತ್ತೇಜಿಸುವದರ ಜೊತೆಗೆ ಹೆಣ್ಣು ಮಕ್ಕಳ ಪೌಷ್ಠಿಕತೆ, ಬಾಲ್ಯ ವಿವಾಹ, ಹೆಣ್ಣು ಮಕ್ಕಳ ರಕ್ಷಣೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿ.ಪಂ ಉಪಕಾರ್ಯದರ್ಶಿಗಳು ತಿಳಿಸಿದರು.

ನಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅಕ್ಕಮಹಾದೇವಿ ಕೆ.ಎಚ್., ಜಿ.ಪಂ ಸಿಪಿಓ ನಿರ್ಮಲ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಮರಟ್ಟಿ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಸವಿತಾ ಕಾಳೆ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಕುಸುಮಾ ಮಾಗಿ ಸೇರಿದಂತೆ ಇತರೆ ಉನ್ನತ ಮಟ್ಟದ ಮಹಿಳಾ ಅಧಿಕಾರಿಗಳು ತಾವು ಬೆಳೆದು ಬಂದ ಹಾದಿಯ ಬಗ್ಗೆ ವಿವರವಾಗಿ ಮಕ್ಕಳೊಂದಿಗೆ ಹಂಚಿಕೊಂಡರು.

ಜಿ.ಪಂ ಸಿಇಓ ಟಿ.ಭೂಬಾಲನ್ ಮಾತನಾಡಿ ಹೆಣ್ಣು ಮಕ್ಕಳು ತಾವು ಸಹಿತ ಉನ್ನತ ಹುದ್ದೆಯನ್ನು ಅಲಂಕರಿಸಲು ಸತತ ಪ್ರಯತ್ನ ಅಗತ್ಯವಾಗಿದ್ದು, ತಮ್ಮಲ್ಲಿ ಸ್ಪೂರ್ತಿ ತುಂಬುವ ನಿಟ್ಟಿನಲ್ಲಿ ಕಾಫಿಯೊಂದಿಗೆ ಚರ್ಚೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, 6 ತಿಂಗಳುಗಳ ಕಾಲ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಹೆಣ್ಣು ಮಕ್ಕಳಿಗೆ ತಮ್ಮ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಲಭ್ಯವಿರುವ ಅವಕಾಶಗಳ ಬಗ್ಗೆ ಖಚಿತಪಡಿಸಲಾಗುತ್ತಿದೆ. ಶಿಕ್ಷಣದ ಹಕ್ಕಿನೊಂದಿಗೆ ಆರೋಗ್ಯ, ಆರ್ಥಿಕ ಸಬಲೀಕರಣ ಹಾಗೂ ಸಮಾನ ಅವಕಾಶಗಳ ಬಗ್ಗೆ ಸಮುದಾಯದಲ್ಲಿ ಜಾಗೃತಿ ಗೊಳಿಸಲಾಗುತ್ತಿದೆ ಎಂದರು.

ಪ್ರತಿಜ್ಞಾವಿಧಿ ಸ್ವೀಕಾರ

ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ನಡೆದ ಕಾಫಿಯೊಂದಿಗೆ ಚರ್ಚೆ ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಬೋದಿಸಲಾಯಿತು. ನಾನು ಹದಿಹರೆಯದ ಹೆಣ್ಣು ಮಕ್ಕಳ ಸರ್ವಾಂಗೀಣ ಅಭಿವೃದ್ದಿಗೆ ಸಂಪೂರ್ಣ ಬೆಂಬಲ, ಲಿಂಗ ತಾರತಮ್ಯ, ಬಾಲ್ಯ ವಿವಾಹ ಮುಂತಾದ ಸಮಸ್ಯೆಗಳನ್ನು ಪರಿಹಾರಕ್ಕೆ ಕೈ ಜೋಡಿಸಿ ಅವರ ಜೀವನ ಮಟ್ಟದ ಅಭಿವೃದ್ದಿಗೆ ಬೆಂಬಲಿಸುತ್ತೇನೆ. 18 ವರ್ಷದೊಳಗಿನ ಹೆಣ್ಣು ಮಕ್ಕಳು ಮತ್ತು 21 ವರ್ಷದೊಳಗಿನ ಗಂಡು ಮಕ್ಕಳಿಗೆ ಯಾವುದೇ ಧರ್ಮ, ಜಾತಿ, ಸಮುದಾಯ, ಪಂಗಡಗಳು ಬಾಲ್ಯವಿವಾಹ ಮಾಡಲು ಪ್ರಯತ್ನಿಸುವುದು, ನಡೆಸುವುದು ಶಿಕ್ಷಾರ್ಹ ಎಂಬುದನ್ನು ನಾನು ಪಾಲಿಸುವುದಾಗಿ ಪ್ರತಿಜ್ಞೆಗೈಯಲಾಯಿತು.

*ಇಂದು ರಾಷ್ಟ್ರೀಯ ಮತದಾರರ ದಿನಾಚರಣೆ*
—————————————-

ಮತದಾನಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ ಎಂಬ ಧ್ಯೇಯವಾಕ್ಯದೊಂದಿಗೆ 13 ನೇ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಜನವರಿ 25 ರಂದು ಮಧ್ಯಾಹ್ನ 2 ಗಂಟೆಗೆ ಇಲ್ಲಿನ ಜಿಲ್ಲಾಡಳಿತ ಭವನ ಆಡಿಟೋರಿಯಂ ಹಾಲ್‍ನಲ್ಲಿ ಆಚರಿಸಲಾಗುತ್ತಿದೆ.

ಭಾರತ ಚುನಾವಣಾ ಆಯೋಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ನ್ಯಾಯಾಂಗ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮವನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಜಿ. ಎಸ್ ದೇಶಪಾಂಡೆಯವರು ಉದ್ಘಾಟಸಲಿದ್ದು, ಜಿಲ್ಲಾಧೀಕಾರಿ ಪಿ. ಸುನೀಲ ಕುಮಾರ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಯುವ ಮತದಾರರಿಗೆ ಮತದಾನ ಗುರುತಿನ ಚೀಟಿ ವಿತರಣೆ, ಮತದಾರರ ಹಕ್ಕು ಮತ್ತು ಅದರ ಮಹತ್ವ ಕುರಿತು ಉಪನ್ಯಾಸ ನಡೆಯಲಿದೆ.

Nimma Suddi
";